ನಮ್ಮ ತಲೆಮಾರಿನ ಪತ್ರಕರ್ತರು ಕಂಡ 'ಪತ್ರಿಕಾ ರಂಗದ ಭೀಷ್ಮ'ನ ಬಗ್ಗೆ ಬರೆಯಬೇಕು ಅನಿಸುತ್ತಿದೆ. ಆ ಭೀಷ್ಮ ಯಾರು ಎಂಬ ಪ್ರಶ್ನೆ ಬೇಡ - ಅವರು ಮಾಧವ ವಿಠಲ ಕಾಮತ್ (ಎಂ.ವಿ. ಕಾಮತ್) ಅಲ್ಲದೆ ಬೇರೆ ಯಾರೂ ಅಲ್ಲ. ಅವರ ಬಗ್ಗೆಯೇ ಯಾಕೆ ಬರೆಯಬೇಕು ಅನಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರ ಇಲ್ಲ. ಆದರೆ ಎಂಬತ್ತು ವರ್ಷ ವಯಸ್ಸು ದಾಟಿದ ನಂತರವೂ ಎಳೆಯ ಯುವಕನಂತೆ ಕಾಣಿಸುತ್ತಿದ್ದ ಕಾಮತರ ಬಗ್ಗೆ ಬರೆಯಬೇಕು ಎಂದು ಹಲವು ದಿನಗಳಿಂದ ಅಂದುಕೊಳ್ಳುತ್ತಿದ್ದೆ ಎಂಬುದಂತೂ ನಿಜ. ನಾನು ಪದವಿ ವ್ಯಾಸಂಗ ಮಾಡುತ್ತಿದ್ದ ದಿನಗಳು ಅವು. ಒಂದು ದಿನ ದೂರವಾಣಿ ಕರೆ ಮಾಡಿದ ಹರೀಶ್ ಆದೂರು ಅವರು (ಆಗ ಹರೀಶ್ ಅವರು ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಮಂಗಳೂರು ಆವೃತ್ತಿಯಲ್ಲಿ ಕೆಲಸ ಮಾಡುತ್ತಿದ್ದರು), 'ಈ ವಾರದ ಅಂತ್ಯದಲ್ಲಿ ಮನೆಯಂಗಳದಲ್ಲಿ ಸಾಹಿತ್ಯ ಸಂಜೆ ಕಾರ್ಯಕ್ರಮ ಇದೆ. ನೀನೂ ಬಾ. ಅಲ್ಲಿ ನಿನಗೆ ನಾಲ್ಕು ಒಳ್ಳೆಯ ಮಾತುಗಳನ್ನು ಕೇಳುವ ಅವಕಾಶ ಸಿಗಬಹುದು' ಎಂದು ಆಹ್ವಾನ ನೀಡಿದರು. 'ಕಾರ್ಯಕ್ರಮದ ಅತಿಥಿ ಯಾರು' ಎಂದು ಪ್ರಶ್ನಿಸಿದೆ. 'ಎಂ.ವಿ. ಕಾಮತರು ಮಾರಾಯಾ' ಎಂದು ಉತ್ತರಿಸಿ ಫೋನ್ ಇಟ್ಟರು. ಶನಿವಾರ ಬಂತು. ಅಂದಿನ ತರಗತಿಗಳು ಮುಗಿದಿದ್ದವು. ಸರಿ, ಕಾಮತರ ಮಾತು ಕೇಳಿಸಿಕೊಳ್ಳುವ ಅವಕಾಶ ತಪ್ಪಿಸಿಕೊಳ್ಳಬಾರದು ಎಂಬ ಉದ್ದೇಶದಿಂದ ಮೂಡುಬಿದಿರೆ ಬಸ್ ಸ್ಟ್ಯಾಂಡ್‌ಗೆ ಹೋಗಿ, ಬೆಳ್ತಂಗಡಿ ಕಡೆ ಹೋಗುವ ಬಸ್ ಹತ್ತಿದೆ. ಜ...
ನಾವು ಬದುಕುತ್ತಿರುವ ಸಂದರ್ಭವನ್ನು ‘ಫೇಸ್‌ಬುಕ್ ಮೂಲಕ ವಿಕಾರಗಳನ್ನು ತೋರಿಸಿಕೊಳ್ಳುವ ಹೊತ್ತು’ ಎಂದು ಕರೆಯಲು ಅಡ್ಡಿಯಿಲ್ಲ ಅನಿಸುತ್ತದೆ. ಸಾಮಾಜಿಕ ಮಾಧ್ಯಮಗಳಲ್ಲಿ ನಡೆಯುವ ಕೆಲವು ಚರ್ಚೆಗಳ ಮಟ್ಟವನ್ನು ಗಮನಿಸಿದರೆ ನಿಮಗೂ ಹಾಗೆ ಅನಿಸಬಹುದು. ಅದರಲ್ಲೂ ಎಡ–ಬಲ ಪಂಥಗಳ ಚರ್ಚೆಗಳಿಗೆ ತಲೆ ಹಾಕಿದರೆ ಮುಗಿದೇ ಹೋಯಿತು. ಅಲ್ಲಿ ಏನಾಗುತ್ತದೆ ಎಂಬುದು ನಿಮ್ಮೆಲ್ಲರ ಗಮನಕ್ಕೂ ಬಂದಿರಬಹುದು ಎಂಬುದು ನನ್ನ ಭಾವನೆ. ಮೂಡುಬಿದಿರೆಯಲ್ಲಿ ಇದ್ದುಕೊಂಡು, ಮಕ್ಕಳಿಗೆ ಪಾಠ ಹೇಳಿಕೊಡುತ್ತ, ಸಾಹಿತ್ಯ, ಸಮಾಜ, ಅರ್ಥವ್ಯವಸ್ಥೆ ಬಗ್ಗೆ ಮಾತನಾಡುವ, ನಾನು ಅವರ ಮನೆಗೆ ಹೋದಾಗಲೆಲ್ಲ ಒಳ್ಳೆಯ ಎಲೆ ಅಡಿಕೆ ಕೊಡುವ ಅರವಿಂದ ಚೊಕ್ಕಾಡಿಯವರು ಎಡ–ಬಲ ಪಂಥಗಳ ಬಗ್ಗೆ, ಅವೆರಡರ ನಡುವೆ ಸಂವಾದ ಆಗಬೇಕಿರುವ ಅಗತ್ಯದ ಬಗ್ಗೆ ಪುಟ್ಟ ಬರಹ ಬರೆದಿದ್ದಾರೆ. ಆ ಬರಹವನ್ನು ಇಲ್ಲಿ ಹಂಚಿಕೊಂಡಿದ್ದೇನೆ. ಅವರ ಬರಹಕ್ಕೆ ನಾನು ಬರೆದ ಪ್ರತಿಕ್ರಿಯೆ ಕೂಡ ಇಲ್ಲಿದೆ. ದಯವಿಟ್ಟು ಎರಡನ್ನೂ ಓದಿ. ನಿಮ್ಮ ಅನಿಸಿಕೆ ತಿಳಿಸಿ. =========== ಚೊಕ್ಕಾಡಿಯವರಿಗೆ ಬರೆದ ಪ್ರತಿಕ್ರಿಯೆ... ಸರ್, ನಿಮ್ಮ ಬರಹ ಓದಿದ ನಂತರ ಹಳೆಯ ಕೆಲವು ಪ್ರಯತ್ನಗಳು ನೆನಪಿಗೆ ಬಂದವು. ಆ ಪ್ರಯತ್ನಗಳು ನಡೆದಿದ್ದ ಹೊತ್ತಿನಲ್ಲಿ ನೀವೂ ಜೊತೆಯಲ್ಲಿ ಇದ್ದಿದ್ದು ಅಥವಾ ನಾವು ನಿಮ್ಮ ಜೊತೆಯಲ್ಲಿ ಇದ್ದಿದ್ದು ನಿಮ್ಮ ನೆನಪಿನಲ್ಲಿ ಇದೆ ಎಂದು ಭಾವಿಸುವೆ. ಎಡಪಂಥೀಯರು ಮತ್ತು ಬಲಪಂಥೀಯರಲ್ಲಿ ಇರುವ, ಸಂವಾದಿ...