ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಅಕ್ಟೋಬರ್, 2009 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

"ಪ್ರತಿಭಟನೆ, ಬಂದ್‌ನ ಆಚೆಗೂ ವಿದ್ಯಾರ್ಥಿ ಪರಿಷತ್ ಕೆಲಸ ಮಾಡುತ್ತಿದೆ"

ಅಕ್ಟೋಬರ್ ೯ ರಿಂದ ೧೧ರವರೆಗೆ ಬಳ್ಳಾರಿಯ ರಾಘವ ಕಲಾಮಂದಿರಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಯೋಜಿಸಿದ್ದ ’ರಂಗತೋರಣ’ ವಿದ್ಯಾರ್ಥಿ ನಾಟಕೋತ್ಸವ ಬಹಳ ಅದ್ದೂರಿಯಾಗಿ ನಡೆಯಿತು. ನಾಟಕೋತ್ಸವದಲ್ಲಿ ಸ್ಪರ್ಧಿಸಿದ್ದ ಸುಮಾರು ೨೭ ನಾಟಕಗಳ ಪೈಕಿ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಮ್‌ಬಿಅ ಕಾಲೇಜಿನ ವಿದ್ಯಾರ್ಥಿಗಳು ಆಡಿದ ’ನಾನು ಮತ್ತು ನಾಳೆ’ ನಾಟಕ ಪ್ರಥಮ ಬಹುಮಾನ ಪಡೆದುಕೊಂಡಿತು. ೨೦೦೩ನೆಯ ಇಸವಿಯಲ್ಲಿ ಪ್ರಾರಂಭಗೊಂಡ ಈ ನಾಟಕೋತ್ಸವಕ್ಕೆ ಈ ಬಾರಿ ಐದರ ಹರೆಯ. ಇಡೀ ನಾಟಕೋತ್ಸವದ ರೂವಾರಿ, ನಾಟಕೋತ್ಸವದುದ್ದಕ್ಕೂ ಪಾದರಸದಂತೆ ಓಡಾಡುತ್ತಾ ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರನ್ನು ಪ್ರತಿ ನಿಮಿಷವೂ ಹುರಿದುಂಬಿಸುತ್ತಿದ್ದ ಪ್ರೊ. ಭೀಮಸೇನ್ ಅವರ ಜೊತೆ ಆಡಿದ ಎರಡು ಮಾತುಗಳು ಇಲ್ಲಿವೆ. ***** ಎಬಿವಿಪಿಯವರು ಎಂದರೆ ಕೇವಲ ಬಂದ್ ಮಾಡುವವರು, ಪ್ರತಿಭಟನೆ ಮಾಡುವವರು ಎಂಬೆಲ್ಲಾ ನಕಾರಾತ್ಮಕ ಹಣೆಪಟ್ಟಿಗಳಿದ್ದರೂ ವಿದ್ಯಾರ್ಥಿ ಪರಿಷತ್ತಿನವರು ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಹೊರತೆಗೆಯುವತ್ತ ಮಾಡುತ್ತಿರುವ ಕೆಲಸದ ಕೆಲವು ಝಲಕ್ ಕೂಡ ಇಲ್ಲಿದೆ. ***** "ಇದು ನಮ್ಮ ಐದನೆಯ ವರ್ಷದ ರಂಗತೋರಣ. ಈ ನಾಟಕೋತ್ಸವವನ್ನು ಆರಂಭಸಲು ಸಾಕಷ್ಟು ಕಾರಣಗಳಿವೆ. ಸಾಮಾನ್ಯವಾಗಿ ಎಬಿವಿಪಿಯ ಹುಡುಗರು ಎಂದರೆ ಬಂದ್ ಮಾಡುವವರು, ಗಲಾಟೆ ಮಾಡುವವರು, ಪ್ರತಿಭಟನೆ ಮಾಡುವವರು ಎಂಬೆಲ್ಲಾ ಹಣೆಪಟ್ಟಿಗಳಿವೆ. ಆದರೆ ಬಂದ್, ಪ್ರತಿಭಟನ...