ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಪತ್ರಿಕೋದ್ಯಮ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಮರೆಯಲಾಗದ ಕಾಮತರು: ಮಾಧವರಾಯರ ಒಂದು ನೆನಪು!

ನಮ್ಮ ತಲೆಮಾರಿನ ಪತ್ರಕರ್ತರು ಕಂಡ 'ಪತ್ರಿಕಾ ರಂಗದ ಭೀಷ್ಮ'ನ ಬಗ್ಗೆ ಬರೆಯಬೇಕು ಅನಿಸುತ್ತಿದೆ. ಆ ಭೀಷ್ಮ ಯಾರು ಎಂಬ ಪ್ರಶ್ನೆ ಬೇಡ - ಅವರು ಮಾಧವ ವಿಠಲ ಕಾಮತ್ (ಎಂ.ವಿ. ಕಾಮತ್) ಅಲ್ಲದೆ ಬೇರೆ ಯಾರೂ ಅಲ್ಲ. ಅವರ ಬಗ್ಗೆಯೇ ಯಾಕೆ ಬರೆಯಬೇಕು ಅನಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರ ಇಲ್ಲ. ಆದರೆ ಎಂಬತ್ತು ವರ್ಷ ವಯಸ್ಸು ದಾಟಿದ ನಂತರವೂ ಎಳೆಯ ಯುವಕನಂತೆ ಕಾಣಿಸುತ್ತಿದ್ದ ಕಾಮತರ ಬಗ್ಗೆ ಬರೆಯಬೇಕು ಎಂದು ಹಲವು ದಿನಗಳಿಂದ ಅಂದುಕೊಳ್ಳುತ್ತಿದ್ದೆ ಎಂಬುದಂತೂ ನಿಜ. ನಾನು ಪದವಿ ವ್ಯಾಸಂಗ ಮಾಡುತ್ತಿದ್ದ ದಿನಗಳು ಅವು. ಒಂದು ದಿನ ದೂರವಾಣಿ ಕರೆ ಮಾಡಿದ ಹರೀಶ್ ಆದೂರು ಅವರು (ಆಗ ಹರೀಶ್ ಅವರು ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಮಂಗಳೂರು ಆವೃತ್ತಿಯಲ್ಲಿ ಕೆಲಸ ಮಾಡುತ್ತಿದ್ದರು), 'ಈ ವಾರದ ಅಂತ್ಯದಲ್ಲಿ ಮನೆಯಂಗಳದಲ್ಲಿ ಸಾಹಿತ್ಯ ಸಂಜೆ ಕಾರ್ಯಕ್ರಮ ಇದೆ. ನೀನೂ ಬಾ. ಅಲ್ಲಿ ನಿನಗೆ ನಾಲ್ಕು ಒಳ್ಳೆಯ ಮಾತುಗಳನ್ನು ಕೇಳುವ ಅವಕಾಶ ಸಿಗಬಹುದು' ಎಂದು ಆಹ್ವಾನ ನೀಡಿದರು. 'ಕಾರ್ಯಕ್ರಮದ ಅತಿಥಿ ಯಾರು' ಎಂದು ಪ್ರಶ್ನಿಸಿದೆ. 'ಎಂ.ವಿ. ಕಾಮತರು ಮಾರಾಯಾ' ಎಂದು ಉತ್ತರಿಸಿ ಫೋನ್ ಇಟ್ಟರು. ಶನಿವಾರ ಬಂತು. ಅಂದಿನ ತರಗತಿಗಳು ಮುಗಿದಿದ್ದವು. ಸರಿ, ಕಾಮತರ ಮಾತು ಕೇಳಿಸಿಕೊಳ್ಳುವ ಅವಕಾಶ ತಪ್ಪಿಸಿಕೊಳ್ಳಬಾರದು ಎಂಬ ಉದ್ದೇಶದಿಂದ ಮೂಡುಬಿದಿರೆ ಬಸ್‌ ಸ್ಟ್ಯಾಂಡ್‌ಗೆ ಹೋಗಿ, ಬೆಳ್ತಂಗಡಿ ಕಡೆ ಹೋಗುವ ಬಸ್ ಹತ್ತಿದೆ. ಜ...

ನೇಗಿಲು ಹೊತ್ತ ರೈತನಿಗೆ ಲೇಖನಿ ನೀಡಿದ ಆಂದೋಲನ

ಸಮಸ್ಯೆ ಯಾವುದೂ ಇರಬಹುದು , ಯಾರಿಗೂ ಬರಬಹುದು. ಒಂದು ಮಾಧ್ಯವಾಗಿ ಸಮಸ್ಯೆಗೆ ಎರಡು ರೀತಿಯಲ್ಲಿ ಸ್ಪಂದಿಸಲು ಸಾಧ್ಯ. ಒಂದು: ಆ ಸಮಸ್ಯೆಯಿಂದ ಬಾಧಿತರಾಗಿರುವವರ ನೋವಿಗೆ ದನಿಯಾಗಿ , ಅವರ ಬಗ್ಗೆ ಒಂದಿಷ್ಟು ಅನುಕಂಪ ತೋರಿಸಿ ನಂತರ ಸುಮ್ಮನಾಗುವುದು. ಇನ್ನೊಂದು: ನೋವಿಗೆ ದನಿಯಾಗುವುದು ಮತ್ತು ಅನುಕಂಪತೋರುವುದಕ್ಕಿಂತ ಮಿಗಿಲಾಗಿ , ಸಮಸ್ಯೆಗೆ ಸ್ಪಷ್ಟ ಪರಿಹಾರ ಸೂಚಿಸುವುದು. ಎರಡನೆಯ ಮಾದರಿಗೆ ಒಂದು ಅನನ್ಯ ಉದಾಹರಣೆ ಎಂದರೆ ಪುತ್ತೂರಿನ ಫಾರ್ಮರ್ ಫಸ್ಟ್ ಟ್ರಸ್ಟ್‌ನ ಅಡಿಕೆ ಪತ್ರಿಕೆ ಮತ್ತು ಅದರ ಕೃಷಿಕರ ಕೈಗೆ ಲೇಖನಿ ಕಾರ್ಯಕ್ರಮ. ಪತ್ರಿಕೆ ಆರಂಭವಾದದ್ದು ಹೀಗೆ: ಅದು ಎಂಭತ್ತರ ದಶಕದ ಮಧ್ಯಭಾಗ. ದಕ್ಷಿಣ ಕನ್ನಡ , ಉತ್ತರ ಕನ್ನಡ , ಶಿವಮೊಗ್ಗ ಜಿಲ್ಲೆಗಳ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಯ ಮಾರುಕಟ್ಟ ಧಾರಣೆ ತೀವ್ರವಾಗಿ ಕುಸಿದಿತ್ತು. ಅಸಂಖ್ಯ ಅಡಿಕೆ ಬೆಳೆಗಾರರ ಕುಟುಂಬಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಕಾಲ ಅದು. ಇಂಥ ಬಿಕ್ಕಟ್ಟಿನ ಸಂದರ್ಭದಲ್ಲಿ ಪುತ್ತೂರಿನಲ್ಲಿ ಕೇಂದ್ರ ಕಛೇರಿ ಹೊಂದಿರುವ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಅಡಿಕೆ ಕೃಷಿಕರನ್ನು ಸಂಕಷ್ಟದಿಂದ ಪಾರುಮಾಡಲು ಮತ್ತು ಅಡಿಕೆ ಕೃಷಿಯಲ್ಲಿ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಯೋಚಿಸಲಾರಂಭಿಸಿತು. ಇದೇ ಸಂದರ್ಭದಲ್ಲಿ (ಅಂದರೆ ೧೯೮೫-೮೬ರಲ್ಲಿ) ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಸ್ಥಾನವನ್ನು ವಾರಣಾಶಿ ಸುಬ್ರಾಯ ಭಟ್ಟರಿಂದ ಡಾ. ಪಿ ಕೆ ಎಸ್ ಭಟ್ ಪಾಣಾಜೆ ಇವ...

ಅನ್ವಯಿಕ ಸಿದ್ಧಾಂತಗಳು, ಮಾಧ್ಯಮ ಯಶೋಗಾಥೆ ಮತ್ತು ಸಮರ್ಥ ಗುರುವಿನ ನಿರೀಕ್ಷೆ...

ಡೆಕ್ಕನ್ ಹೆರಾಲ್ಡ್ ದಿನಪತ್ರಿಕೆಯ ಮಂಗಳೂರು ಆವೃತ್ತಿಯಲ್ಲಿ ಒಂದು ತಿಂಗಳ ಇಂಟನರ್್ಶಿಪ್ಗಾಗಿ ಸೇರಿದ್ದ ದಿನಗಳು. ಪತ್ರಿಕೋದ್ಯಮದಲ್ಲಿ ಮೂರು ವರ್ಷದ ಡಿಗ್ರಿ ಹಾಗೂ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಸ್ನಾತಕೋತ್ತರ ಕೋಸರ್ಿನ ಒಂದು ವರ್ಷದ ಅವಧಿ ಪೂರ್ಣಗೊಂಡಿತ್ತು. ಇನ್ನೊಂದು ವರ್ಷದ ಅಧ್ಯಯನ ಬಾಕಿಯಿತ್ತು. ಮಂಗಳೂರು ಡೆಕ್ಕನ್ ಹೆರಾಲ್ಡ್ನ ಮುಖ್ಯಸ್ಥ ರೊನಾಲ್ಡ್ ಫನರ್ಾಂಡೀಸ್ ನನ್ನನ್ನು ಕರೆದು ಒಂದು ಉದ್ದದ ಪತ್ರಿಕಾ ಹೇಳಿಕೆಯನ್ನು ಕೊಟ್ಟು ಅದರ ಆಧಾರದಲ್ಲಿ ಚುಟುಕು ಸುದ್ದಿಯೊಂದನ್ನು ಬರೆಯಲು ಹೇಳಿದರು. ಪತ್ರಿಕಾ ಹೇಳಿಕೆಯನ್ನು ಆಮೂಲಾಗ್ರವಾಗಿ ಓದಿದ ನನಗೆ ಆ ಪತ್ರಿಕಾ ಹೇಳಿಕೆಯಲ್ಲಿ ಸುದ್ದಿ ಯಾವುದು, ಸುದ್ದಿಯಲ್ಲದ್ದು ಯಾವುದು ಎಂಬುದರ ವ್ಯತ್ಯಾಸ ಫಕ್ಕನೆ ಹೊಳೆಯಲಿಲ್ಲ. ಪತ್ರಿಕೋದ್ಯಮ ತರಗತಿಗಳಲ್ಲಿ ಆರಂಭದಲ್ಲಿಯೇ ಬೋಧಿಸುವ "5 ಡಬ್ಲ್ಯೂ 1 ಎಚ್ "ಪಾಠಗಳು ಆ ಹೊತ್ತಿಗೆ ನನಗೆ ಸಾಕಷ್ಟು ಬಾರಿ ಆಗಿದ್ದವು. "ನಾಯಿ ಮನುಷ್ಯನಿಗೆ ಕಚ್ಚಿದರೆ ಸುದ್ದಿಯಲ್ಲ, ಆದರೆ ಮನುಷ್ಯ ನಾಯಿಗೆ ಕಚ್ಚಿದರೆ ಸುದ್ದಿ "ಎಂಬ ಪಾಠಗಳಂತೂ ಬೋರು ಹೊಡೆಸುವಷ್ಟು ಆಗಿದ್ದವು. ಹೀಗಿದ್ದರೂ ರೊನಾಲ್ಡ್ ಅವರು ಕೊಟ್ಟ ಪತ್ರಿಕಾ ಹೇಳಿಕೆಯಲ್ಲಿ "5ಡಬ್ಲ್ಯೂ "ಯಾವುದು "1ಎಚ್" ಯಾವುದು ಎಂಬ ಗೊಂದಲ ಬಗೆಹರಿಯುತ್ತಿರಲಿಲ್ಲ. ಅಷ್ಟೊಂದು ದೊಡ್ಡ ಪತ್ರಿಕಾ ಹೇಳಿಕೆಯನ್ನು ನೂರಿನ್ನೂರು ಪದಗಳಲ್ಲಿ ಬರೆಯುವುದು ಹೇಗೆಂಬುದೂ ...

ಪತ್ರಿಕೋದ್ಯಮವೆಂಬ ಸಮಾಜದ ಸಾಕ್ಷಿಪ್ರಜ್ಞೆ

ದಿ ಏಶಿಯನ್ ಏಜ್ ಮತ್ತು ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗಳಲ್ಲಿ ಕೆಲಸ ಮಾಡಿ ಅನುಭವ ಇರುವ ಮಂಗಳೂರು ಮೂಲದ ಪತ್ರಕರ್ತ ಶ್ರೀನಿವಾಸನ್ ನಂದಗೋಪಾಲ್ ಈಗ ವೃತ್ತಿಪರ ಪತ್ರಿಕೋದ್ಯಮಕ್ಕೆ ವಿದಾಯ ಹೇಳಿ ಹವ್ಯಾಸಿ ಪತ್ರಕರ್ತರಾಗಿದ್ದಾರೆ. ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಎಂಬ ಸಂಘಟನೆಯೊಂದನ್ನು ಹುಟ್ಟುಹಾಕಿಕೊಂಡು ಪರ್ಯಾಯ ಶಿಕ್ಷಣ ವಿಧಾನಗಳ ಅಭಿವೃದ್ಧಿಯ ಬಗ್ಗೆಯೂ ಕೆಲಸ ಮಾಡುತ್ತಿದ್ದಾರೆ. ಇವೆರಡರ ಜೊತೆಗೆ ಆಗಾಗ ಕರಾವಳಿಯ ಪತ್ರಿಕೋದ್ಯಮ ಕಾಲೇಜುಗಳ ವಿದ್ಯಾರ್ಥಿಗಳಿಗೆಂದು ಪ್ರಾಯೋಗಿಕ ಪತ್ರಿಕೋದ್ಯಮ ತರಗತಿಗಳನ್ನೂ ನಡೆಸುತ್ತಿದ್ದಾರೆ. ಒಮ್ಮೆ ಹೀಗೆ ಅವರ ತರಗತಿಯಲ್ಲಿ ಕುಳಿತಿದ್ದಾಗ ಅವರ ಒಂದು ಮಾತು ಥಟ್ಟನೆ ಮನಸ್ಸಿನ ಆಳಕ್ಕೆ ಇಳಿಯಿತು. ಪತ್ರಕರ್ತನಾದವ ಆಶಾವಾದಿಯೂ ಆಗಬೇಕಿಲ್ಲ, ನಿರಾಶಾವಾದಿಯೂ ಆಗಬೇಕಿಲ್ಲ. ಆತ ವಾಸ್ತವವಾದಿಯಾಗಿದ್ದರೆ ಸಾಕು. ಆತ ತನ್ನ ವಯುಕ್ತಿಕ ಬದುಕಿನಲ್ಲಿ ಆಶಾವಾದಿಯಾಗಿರಬಾರದು ಎಂದು ಹೇಳುತ್ತಿಲ್ಲ. ಆದರೆ ಪತ್ರಕರ್ತನ ಕೆಲಸ ನಿರ್ವಹಿಸುತ್ತಿರುವಾಗ ಆತ ಖಂಡಿತವಾಗಿಯೂ ವಾಸ್ತವವಾದಿಯಾಗಿರಬೇಕು. ಪತ್ರಿಕೋದ್ಯಮವನ್ನು ಮತ್ತು ವೈಯುಕ್ತಿಕ ಬದುಕನ್ನು ಒಂದೇ ಎಂದು ತಿಳಿದವರು ವಾಸ್ತವವಾದಿಗಳೇ ಆಗಿರಲಿ. ಅಂಥವರು ಆಶಾವದಿಗಳೋ ಅಥವಾ ನಿರಾಶಾವಾದಿಗಳೋ ಆಗಿರುವುದು ಬೇಡ ಎಂಬುದು ಅವರ ಆ ದಿನದ ಪಾಠದ ಸಾರ. ಅವರ ಮಾತು ಸರಿಯಾಗಿ ಅರ್ಥವಾಗಬೇಕಾದರೆ ಒಂದು ಕಾಲ್ಪನಿಕ ಕಥೆಯನ್ನು ಹೇಳಬೇಕು. ಈ ಕಥೆಯನ್ನು ನನಗೆ ಹೇಳಿದ್ದು ಮೂಡುಬ...

ನಿಷ್ಠೆಯೊಂದೇ ನಿರೀಕ್ಷೆ, ಪತ್ರಕರ್ತನಿಗೆಲ್ಲಿದೆ ರಕ್ಷೆ?

“ಇತ್ತೀಚೆಗೆ ನಡೆದ ಸಮೀಕ್ಷೆಯೊಂದರ ಪ್ರಕಾರ ಜನಸಾಮಾನ್ಯರ ದ್ವೇಷಕ್ಕೆ ಅತ್ಯಂತ ಹೆಚ್ಚು ಒಳಗಾಗಿರುವ ಮೂರು ವ್ಯಕ್ತಿಗಳೆಂದರೆ ರಾಜಕಾರಣಿಗಳು, ಪೋಲೀಸರು ಮತ್ತು ಪತ್ರಕರ್ತರು. ಪತ್ರಕರ್ತರು ಈಗ ಮೂರನೆಯ ಸ್ಥಾನದಲ್ಲಿರಬಹುದು. ಆದರೆ ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಪತ್ರಕರ್ತರು ಮೊದಲನೆಯ ಸ್ಥಾನವನ್ನು ಆಕ್ರಮಿಸುವ ದಿನ ಬಹಳ ದೂರವಿಲ್ಲ ಎಂದು ನನಗನಿಸುತ್ತದೆ.” ಯಾವಾಗಲೂ ಮಾಧ್ಯಮಗಳನ್ನು ತೆಗಳುವವರ ಒಂದು ದೊಡ್ಡ ಗುಂಪೇ ನಮ್ಮ ಸಮಾಜದಲ್ಲಿದೆ. ಅಂಥ ಗುಂಪಿಗೆ ಸೇರಿದ ವ್ಯಕ್ತಿಯೊಬ್ಬರು ಈ ಮೇಲಿನ ಮಾತನ್ನು ಹೇಳಿದ್ದರೆ ಅದನ್ನು ಅಲಕ್ಷಿಸಿಬಿಡಬಹುದಿತ್ತು. ಆದರೆ ಇತ್ತೀಚೆಗೆ ಮಾಧ್ಯಮದ ಹಿರಿಯ ವ್ಯಕ್ತಿಯೊಬ್ಬರು ಈ ರೀತಿ ಅಭಿಪ್ರಾಯಪಟ್ಟಿರುವುದರಿಂದ ಈ ಮಾತಿನ ಬಗ್ಗೆ ಗಂಭೀರವಾಗಿ ಪತ್ರಿಕೋದ್ಯಮದ ಬಗ್ಗೆ ಪ್ರೀತಿ ಇರುವ ಪ್ರತಿಯೊಬ್ಬರೂ ಆಲೋಚಿಸಬೇಕಾಗಿದೆ. ಆ ಹಿರಿಯರ ಬಗ್ಗೆ, ಅವರ ಮಾತಿನ ಬಗ್ಗೆ ಗೌರವ ಇಟ್ಟುಕೊಂಡೇ ನನ್ನ ಮುಂದಿನ ಬರೆಹವನ್ನು ಬೆಳೆಸುತ್ತಿದ್ದೇನೆ. ಭಾರತದ ಸಂವಿಧಾನದ ಪ್ರಕಾರ ನ್ಯಾಯಾಂಗ, ಶಾಸಕಾಂಗ ಮತ್ತು ಕಾರ್ಯಾಂಗ ಪ್ರಜಾಪ್ರಭುತ್ವದ ಮೂರು ಅಂಗಗಳು. ಸಂವಿಧಾನ ಇವೆಲ್ಲವಕ್ಕೂ ಮೇಲು. ಈ ಯಾವ ಅಂಗಗಳೂ ಸಂವಿಧಾನವನ್ನು ಮೀರಿ ಕೆಲಸ ಮಾಡುವಂತಿಲ್ಲ. ಹಾಗೆ ಯಾವುದೇ ಒಂದು ಅಂಗ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಕೆಲಸ ಮಾಡಲು ಹವಣಿಸಿದರೆ ಆ ಅಂಗಕ್ಕೆ ಲಗಾಮು ಹಾಕಲು ಬಲವಾದ, ಸ್ವತಂತ್ರವಾದ ನ್ಯಾಯಾಂಗ ನಮ್ಮಲ್ಲಿದೆ. ನೆನಪಿಡಿ ಎಲ್ಲಿಯೂ ಕೂ...

ಪತ್ರಕರ್ತರ ಸಾಕ್ಷಿಪ್ರಜ್ಞೆ: ಪಿ. ಸಾಯಿನಾಥ್

ಪತ್ರಕರ್ತ ಪಿ ಸಾಯಿನಾಥ್ ಒಮ್ಮೆ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ಫೆಲೋಶಿಪ್‌ಗಾಗಿ ಅರ್ಜಿ ಹಾಕಿದ್ದರು. ಅದರ ಸಂದರ್ಶನಕ್ಕಾಗಿ ಕರೆಯೂ ಬಂತು. ಟೈಮ್ಸ್ ಪತ್ರಿಕೆಯ ಸಂಪಾದಕರುಗಳ ಮುಂದೆ ಕುಳಿತು ತನಗೆ ಫೆಲೋಶಿಪ್ ಸಿಕ್ಕರೆ ಏನೇನು ಮಾಡುತ್ತೇನೆ ಎಂಬುದನ್ನು ಸವಿವರವಾಗಿ ಹೇಳುತ್ತಿದ್ದರು. "ಇಂದಿನ ಪತ್ರಿಕೆಗಳು ದೇಶದ ಸಾಮಾಜಿಕ ವ್ಯವಸ್ಥೆಯ ಮೇಲ್ಭಾಗದಲ್ಲಿರುವ ಶೇಕಡಾ ೫ ರಷ್ಟು ಮಂದಿಯ ಬಗ್ಗೆ ಮಾತ್ರ ಬರೆಯುತ್ತಿವೆ, ನಾನು ಈ ದೇಶದ ಸಾಮಾಜಿಕ ವ್ಯವಸ್ಥೆಯ ಕೆಳಭಾಗದಲ್ಲಿರುವ ಶೇಕಡಾ ೫ ರಷ್ಟು ಮಂದಿಯ ಬಗ್ಗೆ ಬರೆಯುತ್ತೇನೆ" ಎಂದು ಅದಾಗಲೇ ತೀರ್ಮಾನಿಸಿದ್ದ ಪಿ ಸಾಯಿನಾಥ್ ಟೈಮ್ಸ್ ಧಣಿಗಳ ಮುಂದೆಯೂ ತಮಗಿರುವ ಗ್ರಾಮೀಣ ವರದಿಗಾರಿಕೆಯಲ್ಲಿನ ಆಸಕ್ತಿಯ ಕುರಿತು ಹೇಳಿದರು. ಆಗ ಟೈಮ್ಸ್‌ನ ಸಂಪಾದಕ ಮಹಾಶಯನೊಬ್ಬ "ನಮ್ಮ ಪತ್ರಿಕೆಯ ಓದುಗರಿಗೆ ನೀವು ಬರೆಯುವ ಗ್ರಾಮೀಣ ವರದಿಯ ಬಗ್ಗೆ ಏನೂ ಆಸಕ್ತಿ ಇಲ್ಲ, ಏನು ಮಾಡ್ತೀರಾ" ಎಂದು ಕೇಳಿದ. "ಓದುಗರಿಗೆ ಏನು ಬೇಕು, ಏನು ಬೇಡ ಎಂದು ಹೇಳಲು ನೀವು ನಿಮ್ಮ ಓದುಗರನ್ನು ಕೊನೆಯ ಬಾರಿ ಭೇಟಿಯಾಗಿದ್ದು ಯಾವಾಗ?" ಎಂದು ಕೂಡಲೇ ಮರುಪ್ರಶ್ನಿಸಿದರು ಸಾಯಿನಾಥ್. ಸಾಯಿನಾಥ್ ಪ್ರಶ್ನೆ ಅದೆಷ್ಟು ತೀಕ್ಷ್ಣವಾಗಿತ್ತೆಂದರೆ ಅವರಿಗೆ ಸಂದರ್ಶನಕಾರರಿಂದ ತಿರುಗಿ ಪ್ರಶ್ನೆಯೇ ಬರಲಿಲ್ಲ. ಅದಲ್ಲದೆ ಅವರಿಗೆ ಟೈಮ್ಸ್‌ನ ಫೆಲೋಶಿಪ್ ಕೂಡ ದೊರೆಯಿತು. ಪೇಜ್ ತ್ರಿ ಪತ್ರಿಕೋದ್ಯಮಕ್ಕೇ ಹೆಚ್ಚಿನ ಆದ್ಯತೆ ...

Condemning the attack on The Hindu

Everyone may be aware of the fact that the Coimbatore office of The Hindu, India’s national newspaper, has been attacked by a faction of Tamil chauvinist group last week. The article titled ‘The dangers of Tamil chauvinism’ by Malini Parthasarathy, Senior Sub Editor of The Hindu, might have enraged the sentiments of the lesser known Tamil chauvinist group - Periyar Dravidar Kazhagam. Malini Parthasarathy, in her above mentioned article, has clearly stated that the LTTE which is active in Srilanka is nothing but a terrorist group and the path it has been following over the years to resolve the issue of Tamilians has no respect in any democratic society. Over the years the LTTE has been engaged in murdering Srilankan ministers and innocent civilians who have got nothing to do with the political affairs of the State. The Hindu in its editorial pages has condemned this inhuman and anti-democratic behaviour of the LTTE. The Hindu has never turned a blind eye towards the problems faced by Sr...

ಪತ್ರಿಕೋದ್ಯಮದ ವಿದ್ಯಾರ್ಥಿ ಮಿತ್ರರಿಗೆ...

ನಾನಿನ್ನೂ ಪತ್ರಿಕೋದ್ಯಮದ ವಿದ್ಯಾರ್ಥಿ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಇನ್ನೂ ಎರಡು ವರ್ಷ ಕಾಯಬೇಕು. ಪತ್ರಿಕೋದ್ಯಮದ ಜಂಜಡಗಳ ನೇರ ಅನುಭವವಿಲ್ಲ. ಪತ್ರಿಕಾರಂಗದಲ್ಲಿ ಎದುರಿಸಬೇಕಾಗಿರುವ ಸವಾಲುಗಳ ಬಗ್ಗೆ ಕೇಳಿ ಗೊತ್ತೆ ಹೊರತು ಸ್ವಲ್ಪವೂ ಅನುಭವಿಸಿ ಗೊತ್ತಿಲ್ಲ. ಹಾಗಾಗಿ ಈ ಹೊತ್ತಿನಲ್ಲಿ ಇಂಥ ಒಂದು ಲೇಖನವನ್ನು ಬರೆಯುವುದು ಸರಿಯೋ ತಪ್ಪೋ ಎಂಬ ಪ್ರಶ್ನೆ ನನ್ನನ್ನು ಹಲವು ಬಾರಿ ಕಾಡಿದೆ. ಆದರೂ ಈ ವಿಷಯವನ್ನು ನಿಮ್ಮ ಮುಂದೆ ಹೇಳಿಕೊಳ್ಳದಿದ್ದರೆ ಸಮಾಧಾನವಿಲ್ಲ ಅಂತ ಅನಿಸಿದ್ದರಿಂದ "ಬರೆಯಬೇಕು, ಬರೆಯುತ್ತೇನೆ" ಎಂದು ನಿರ್ಧರಿಸಿದ್ದೇನೆ. ರಾಜ್ಯದಲ್ಲಿ ಪತ್ರಿಕೋದ್ಯಮದಲ್ಲಿ ಪದವಿಯನ್ನು ನೀಡುವ ಹಲವಾರು ಕಾಲೇಜುಗಳು ಹುಟ್ಟಿಕೊಳ್ಳುತ್ತಿವೆ. ಹಲವಾರು ಪ್ರತಿಷ್ಠಿತ ಕಾಲೇಜುಗಳು ತಮ್ಮ ಮಾನವಿಕ ವಿಭಾಗದಲ್ಲಿ ಪತ್ರಿಕೋದ್ಯಮವನ್ನೂ ಒಂದು ಆಯ್ಕೆಯ ವಿಷಯವನ್ನಾಗಿ ಸೇರಿಸಿದ್ದಾರೆ. ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರಗಳಂತೆ ಪತ್ರಿಕೋದ್ಯಮವನ್ನೂ ಶಾಸ್ತ್ರೀಯವಾಗಿ ಓದುವ ಅವಕಾಶ ಇಂದಿನ ಯುವಕರಿಗೆ ಇದೆ. ಪತ್ರಿಕೋದ್ಯಮವನ್ನು ಇಷ್ಟೊಂದು ಶಾಸ್ತ್ರೀಯವಾಗಿ ಓದಿದ್ದರೂ ನಾವು ಕೆಲವೊಮ್ಮೆ ವರ್ತಿಸುತ್ತಿರುವ ರೀತಿ ಸ್ವಲ್ಪ ಬೇಸರ ಮೂಡಿಸುತ್ತಿದೆ. ಮೊನ್ನೆ ಪತ್ರಿಕೋದ್ಯಮ ಓದುತ್ತಿರುವ ನನ್ನ ಹಳೆಯ ಸ್ನೇಹಿತರೊಬ್ಬರ ಜೊತೆ ಮಾತನಾಡುತ್ತಿದ್ದಾಗ ಭಾರತೀಯ ಮೂಲದ ವಿಶ್ವದ ಶ್ರೇಷ್ಠ ಪತ್ರಿಕೆಯೊಂದರ ಬಗ್ಗೆ ಮಾತು ಬಂತು. ಸುಮಾರು ನ...

ಪತ್ರಿಕೆಗಳಿಂದ ಆದರ್ಶಗಳು ದೂರವಾದರೆ ನಮಗೇಕೆ ಆತಂಕವಾಗುತ್ತದೆ?

ನೀವೇ ಹೇಳಿ... ಯಾವ ರಾಜಕಾರಣಿ ಇವತ್ತು ಏನು ಹೇಳಿದ, ನಿನ್ನೆ ನಡೆದ ಪ್ರಾಕೃತಿಕ ವಿಕೋಪದಲ್ಲಿ ಎಷ್ಟು ಜನ ಮಡಿದರು, ಎಲ್ಲಿ ಯಾರು ಯಾರನ್ನ ಕೊಲೆ ಮಾಡಿದರು...? ಇಂಥ ಯಾರು, ಯಾವಾಗ, ಎಲ್ಲಿ, ಮತ್ತು ಹೇಗೆ ಎಂಬ ವಿಚಾರಗಳ ಸುತ್ತ ಗಿರಕಿ ಹೊಡೆಯುವುದೇ ಪತ್ರಿಕೋದ್ಯಮವಾ? ಕೇವಲ ಅಂಥ ವಿಚಾರಗಳನ್ನು ಬರೆಯುವವರೇ ಪತ್ರಕರ್ತರಾ? ಹೌದು ಎಂದಾದರೆ ಪತ್ರಿಕೋದ್ಯಮ ವೃತ್ತಿಗೆ ಬರಲು ಮೂರು ವರ್ಷದ ಡಿಗ್ರಿ, ಮತ್ತೆರಡು ವರ್ಷಗಳ ಮಾಸ್ಟರ್ ಡಿಗ್ರಿ ಪಡೆಯುವ ಅವಶ್ಯಕತೆಯೇನಿದೆ? ಸಾಹಿತ್ಯ ಮತ್ತು ಸಾಮಾಜಿಕ ಚಳವಳಿಗಳ ಗಂಭೀರ ಅಧ್ಯಯನ ಮತ್ತು ಸಾಮಾಜಿಕ ಕಳಕಳಿಯ ಜರೂರತ್ತಾದರೂ ಏನು? ತಕ್ಕ ಮಟ್ಟಿಗಿನ ಭಾಷಾಜ್ಞಾನ ಹಾಗೂ ಘಟನಾಸ್ಥಳಕ್ಕೆ ಹೋಗಿ ಕಂಡಿದ್ದನ್ನು ಕಂಡಹಾಗೆ ವರದಿಮಾಡುವ ಸಾಮರ್ಥ್ಯವಿದ್ದರೆ ಸಾಕಲ್ಲವೇ? ತಪ್ಪು ತಿಳಿಯುವ ಅವಶ್ಯಕತೆಯಿಲ್ಲ. ಪತ್ರಿಕೋದ್ಯಮವೆಂಬ ಪವಿತ್ರ ವೃತ್ತಿಯ ಬಗ್ಗೆ ಲಘುವಾಗಿ ಮಾತನಾಡುವ ಉದ್ದೇಶ ಲೇಖನಕ್ಕಿಲ್ಲ. ಇಡೀ ಸಮಾಜದ ಹುಳುಕನ್ನು ಎತ್ತಿ ತೋರಿಸುವವರು ಪತ್ರಕರ್ತರು. ಆದರೆ ಪತ್ರಕರ್ತರಾದವರ ತಪ್ಪನ್ನು ಎತ್ತಿ ತೋರಿಸುವವರಾರು? ಅದು ಗಾಂಧೀಜಿಯವರ 'ಹರಿಜನ' ಅಥವಾ 'ಯಂಗ್ ಇಂಡಿಯಾ' ಇರಬಹುದು, ವಿವೇಕಾನಂದರ 'ಪ್ರಬುದ್ಧ ಭಾರತ'ವಿರಬಹುದು ಅಥವಾ ತಿಲಕರ 'ಕೇಸರಿ' ಪತ್ರಿಕೆಯಿರಬಹುದು. ಅವೆಲ್ಲಾ ಪತ್ರಿಕೆಗಳಿಗೆ ಮತ್ತು ಆ ಪತ್ರಿಕೆಗಳಲ್ಲಿ ಕೆಲಸಮಾಡುತ್ತಿದ್ದವರಿಗೆ ಇದ್ದದ್ದು ರಾಷ್ಟ್ರ ಮತ್ತು ಸಮಾಜದೆ...

ಪತ್ರಿಕೋದ್ಯಮವೆಂಬ ಮಾಯಾಮೃಗದ ಬೆನ್ನೇರಿ...

ಕಣ್ಣುಗಳಲ್ಲಿ ಬೆಟ್ಟದಷ್ಟು ಆಸೆಗಳು, ಮನಸ್ಸಿನಲ್ಲಿ ಸ್ಪಷ್ಟವಾದ ಗುರಿ, ತೀಕ್ಷ್ಣ ಬುದ್ಧಿ... ಎಲ್ಲಾ ಇತ್ತು ಅವನಿಗೆ. ಸುಂದರ ಭವಿಷ್ಯದ ಕನಸಿಟ್ಟುಕೊಂಡು ತುಂಬ ಪ್ರೀತಿಂದ ಪದವಿಯಲ್ಲಿ ಪತ್ರಿಕೋದ್ಯಮವನ್ನು ಆಯ್ದುಕೊಂಡ. ತರಗತಿಗಳನ್ನು ಎಂದೂ ತಪ್ಪಿಸಲಿಲ್ಲ. ಅವನ ಶಿಸ್ತಿಗೆ, ವಿನಯಕ್ಕೆ ಎಲ್ಲ ಅಧ್ಯಾಪಕರೂ ತಲೆದೂಗೊತ್ತಿದ್ದರು. ಪರೀಕ್ಷೆಯಲ್ಲೂ ಹಾಗೇ, ಸದಾ ಪ್ರಥಮ ಸ್ಥಾನ. ಸದಾ ಎಲ್ಲಾ ವಿಷಗಳಲ್ಲೂ ತೊಂಭತ್ತು ತೊಂಭತ್ತೈದು ಅಂಕಗಳು. ಯಾರೊಂದಿಗೂ, ಎಂದಿಗೂ ಅಸಭ್ಯವಾಗಿ ವರ್ತಿಸಲಿಲ್ಲ. ಒಬ್ಬ ಸಂಭಾವಿತ ವಿದ್ಯಾರ್ಥಿಗಿರಬೇಕಾದ ಎಲ್ಲಾ ಅರ್ಹತೆಗಳೂ ಅವನಲ್ಲಿದ್ದವು. ಪರೀಕ್ಷೆಯಲ್ಲೇನೋ ಸರಾಸರಿ ತೊಂಭತ್ತೈದು ಅಂಕಗಳಿಸಿ ತೇರ್ಗಡೆಯಾಗಿಬಿಟ್ಟ. ನಂತರ ಕೆಲಸಕ್ಕಾಗಿ ಅಲೆದೂ ಅಲೆದೂ ಸುಸ್ತಾದ. ಅವನಿಗೆ ಯಾರಿಂದಲೂ ಅನ್ಯಾಯವಾಗಲಿಲ್ಲ. ಆತ ಯಾರಿಂದಲೂ ಮೋಸಹೋಗಲಿಲ್ಲ. ಆದರೆ ಅವನಿಗೆ ಅವನೇ ವಂಚನೆ ಮಾಡಿಕೊಂಡ. ಪತ್ರಿಕೋದ್ಯಮ ಪದವಿಗೆ ಸೇರಿ ವಿನಯ, ಶಿಸ್ತು, ಪ್ರೀತಿ, ಗೌರವಾದರ, ಜ್ಞಾನ ಹೀಗೆ ಹಲವಾರು ನೈತಿಕ ಮೌಲ್ಯಗಳನ್ನು ತನ್ನದಾಗಿಸಿಕೊಂಡ. ಒಳ್ಳೆಯದೇ. ಆದರೆ ಪತ್ರಕರ್ತನಾಗಬೇಕಾದವನಿಗೆ, ಪತ್ರಿಕೋದ್ಯಮವನ್ನು ಆಯ್ದುಕೊಂಡವನಿಗೆ ಇರಲೇಬೇಕಾದ ಬರವಣಿಗೆಯನ್ನು ಆತ ಒಲಿಸಿಕೊಳ್ಳಲೇ ಇಲ್ಲ. ಸದಾ ಹೊಸ ವಿಷಯಗಳನ್ನು ಅರಸುತ್ತ, ಅರಗಿಸುತ್ತ ಕುಳಿತನೇ ಹೊರತು ಆ ಎಲ್ಲಾ ವಿಷಯಗಳನ್ನು ಒಪ್ಪವಾಗಿ ಬರೆಯುವ ಗೋಜಿಗೇ ಹೋಗಲಿಲ್ಲ. ಈಗ ಆತ ಒಂದು ಸ್ಥಳೀಯ ಪತ್ರಿಕಾ ಕಛೇರಿಯಲ್ಲಿ...

Can I call it as 'Intellectual Prostitution'?

By Vijay Joshi What do you think is the responsibility of a Journalist? Do you think that Journalist's work is simply to report that what has happened; its time, place and the reason? If so, then, what is the need for a Journalist to have his own, self-defined, social concern? Why should he study the history, as well as literature, of his nation and the world? What is, then, the objective of these three year bachelors program, continued by two years post graduation, in Journalism? Isn't it then fair enough for him to have a reasonably good hold on language and ability to report events, and/or development, as and when they occur? It's not that I don't have respect for university qualified journalists or their work. But, honestly, I have a doubt that is going unanswered for a long time now. A Journalist, in the name of freedom of speech, questions almost every act of politicians, celebrities and society as a whole. He tends to criticize, and give suggestion, whenever the...