ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಮಾಧ್ಯಮ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಮರೆಯಲಾಗದ ಕಾಮತರು: ಮಾಧವರಾಯರ ಒಂದು ನೆನಪು!

ನಮ್ಮ ತಲೆಮಾರಿನ ಪತ್ರಕರ್ತರು ಕಂಡ 'ಪತ್ರಿಕಾ ರಂಗದ ಭೀಷ್ಮ'ನ ಬಗ್ಗೆ ಬರೆಯಬೇಕು ಅನಿಸುತ್ತಿದೆ. ಆ ಭೀಷ್ಮ ಯಾರು ಎಂಬ ಪ್ರಶ್ನೆ ಬೇಡ - ಅವರು ಮಾಧವ ವಿಠಲ ಕಾಮತ್ (ಎಂ.ವಿ. ಕಾಮತ್) ಅಲ್ಲದೆ ಬೇರೆ ಯಾರೂ ಅಲ್ಲ. ಅವರ ಬಗ್ಗೆಯೇ ಯಾಕೆ ಬರೆಯಬೇಕು ಅನಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರ ಇಲ್ಲ. ಆದರೆ ಎಂಬತ್ತು ವರ್ಷ ವಯಸ್ಸು ದಾಟಿದ ನಂತರವೂ ಎಳೆಯ ಯುವಕನಂತೆ ಕಾಣಿಸುತ್ತಿದ್ದ ಕಾಮತರ ಬಗ್ಗೆ ಬರೆಯಬೇಕು ಎಂದು ಹಲವು ದಿನಗಳಿಂದ ಅಂದುಕೊಳ್ಳುತ್ತಿದ್ದೆ ಎಂಬುದಂತೂ ನಿಜ. ನಾನು ಪದವಿ ವ್ಯಾಸಂಗ ಮಾಡುತ್ತಿದ್ದ ದಿನಗಳು ಅವು. ಒಂದು ದಿನ ದೂರವಾಣಿ ಕರೆ ಮಾಡಿದ ಹರೀಶ್ ಆದೂರು ಅವರು (ಆಗ ಹರೀಶ್ ಅವರು ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಮಂಗಳೂರು ಆವೃತ್ತಿಯಲ್ಲಿ ಕೆಲಸ ಮಾಡುತ್ತಿದ್ದರು), 'ಈ ವಾರದ ಅಂತ್ಯದಲ್ಲಿ ಮನೆಯಂಗಳದಲ್ಲಿ ಸಾಹಿತ್ಯ ಸಂಜೆ ಕಾರ್ಯಕ್ರಮ ಇದೆ. ನೀನೂ ಬಾ. ಅಲ್ಲಿ ನಿನಗೆ ನಾಲ್ಕು ಒಳ್ಳೆಯ ಮಾತುಗಳನ್ನು ಕೇಳುವ ಅವಕಾಶ ಸಿಗಬಹುದು' ಎಂದು ಆಹ್ವಾನ ನೀಡಿದರು. 'ಕಾರ್ಯಕ್ರಮದ ಅತಿಥಿ ಯಾರು' ಎಂದು ಪ್ರಶ್ನಿಸಿದೆ. 'ಎಂ.ವಿ. ಕಾಮತರು ಮಾರಾಯಾ' ಎಂದು ಉತ್ತರಿಸಿ ಫೋನ್ ಇಟ್ಟರು. ಶನಿವಾರ ಬಂತು. ಅಂದಿನ ತರಗತಿಗಳು ಮುಗಿದಿದ್ದವು. ಸರಿ, ಕಾಮತರ ಮಾತು ಕೇಳಿಸಿಕೊಳ್ಳುವ ಅವಕಾಶ ತಪ್ಪಿಸಿಕೊಳ್ಳಬಾರದು ಎಂಬ ಉದ್ದೇಶದಿಂದ ಮೂಡುಬಿದಿರೆ ಬಸ್‌ ಸ್ಟ್ಯಾಂಡ್‌ಗೆ ಹೋಗಿ, ಬೆಳ್ತಂಗಡಿ ಕಡೆ ಹೋಗುವ ಬಸ್ ಹತ್ತಿದೆ. ಜ...

ನವ ಮಾಧ್ಯಮ ಮುಂದಿಟ್ಟಿರುವ ಚುನಾವಣಾ ಸವಾಲು

ಮೂಡುಬಿದಿರೆಯ ಮಹಾಬಲ ಕೊಠಾರಿ  ಈ ಬಾರಿ ಜನ ಸಂಘರ್ಷ ಪಕ್ಷದಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿ ದ್ದಾರೆ. (ಕೊಠಾರಿ ಕಾಲ್ಪನಿಕ ವ್ಯಕ್ತಿ, ಅವರು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಎಂಬುದು ಕಾಲ್ಪನಿಕ ಸಂದರ್ಭ). ಕೊಠಾರಿ ಅವರು ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡುವವರಲ್ಲ. ಆದರೆ ಮತದಾನಕ್ಕೆ 48 ಗಂಟೆಗಳು ಬಾಕಿ ಇವೆ ಎನ್ನುವಾಗ, ಅವರನ್ನು ಸೋಲಿಸುವಂತೆ ಕೋರಿ ಫೇಸ್‌ಬುಕ್‍, ಟ್ವಿಟರ್‌ಗಳಲ್ಲಿ ಸಂದೇಶ ರವಾನೆ ಯಾಗಲು ಶುರುವಾಗುತ್ತದೆ. ಅದು ಸಹಸ್ರಾರು ಜನರನ್ನು ಏಕಕಾಲದಲ್ಲಿ ತಲುಪುತ್ತದೆ, ಬಹಿರಂಗ ಸಭೆ ಮೂಲಕ ಮತದಾರರಿಗೆ ಚುನಾವಣಾ ಸಂದೇಶ ನೀಡಿದಂತೆ. ಅವರನ್ನು ವೈಯಕ್ತಿಕವಾಗಿ ನಿಂದಿಸುವ ದೃಶ್ಯಾವಳಿಗಳು ಯೂಟ್ಯೂಬ್‍ ಮೂಲಕ ದ.ಕ. ಲೋಕಸಭಾ ಕ್ಷೇತ್ರದ  ಮತದಾರರನ್ನು ತಲುಪು ತ್ತವೆ. ಫೇಸ್‌ಬುಕ್‌ನ ನಕಲಿ ಖಾತೆಗಳ ಮೂಲಕ ಕೊಠಾರಿ ಅವರನ್ನು ಅಸಭ್ಯ ವಾಗಿ ನಿಂದಿಸಲಾಗು ತ್ತದೆ. ಕೊಠಾರಿ ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುತ್ತಾರೆ. ಹೀಗೆ ಮಾಡು ತ್ತಿರುವವರು ಯಾರು ಎಂಬುದನ್ನು ಪತ್ತೆ ಮಾಡಲು ಆಯೋಗ ಮುಂದಾಗುತ್ತದೆ. ಫೇಸ್‌ಬುಕ್‍ ನಕಲಿ ಖಾತೆಗಳು ಅಮೆರಿಕ ದಲ್ಲಿರುವ ವ್ಯಕ್ತಿಯೊಬ್ಬರ ನಿಯಂತ್ರಣದಲ್ಲಿವೆ, ಟ್ವಿಟರ್‍ ಖಾತೆಯನ್ನು ಮಲೇಷ್ಯದಲ್ಲಿರುವ ವ್ಯಕ್ತಿ ಯೊಬ್ಬರು ನಿರ್ವಹಿಸುತ್ತಿದ್ದಾರೆ, ಆಸ್ಟ್ರೇಲಿಯಾ ದಲ್ಲಿರುವ ವ್ಯಕ್ತಿಯೊಬ್ಬರು ತಮ್ಮ ಸ್ಮಾರ್ಟ್‌ಫೋನ್‍ ಬಳಸ...