ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಮರೆಯಲಾಗದ ಕಾಮತರು: ಮಾಧವರಾಯರ ಒಂದು ನೆನಪು!

ನಮ್ಮ ತಲೆಮಾರಿನ ಪತ್ರಕರ್ತರು ಕಂಡ 'ಪತ್ರಿಕಾ ರಂಗದ ಭೀಷ್ಮ'ನ ಬಗ್ಗೆ ಬರೆಯಬೇಕು ಅನಿಸುತ್ತಿದೆ. ಆ ಭೀಷ್ಮ ಯಾರು ಎಂಬ ಪ್ರಶ್ನೆ ಬೇಡ - ಅವರು ಮಾಧವ ವಿಠಲ ಕಾಮತ್ (ಎಂ.ವಿ. ಕಾಮತ್) ಅಲ್ಲದೆ ಬೇರೆ ಯಾರೂ ಅಲ್ಲ. ಅವರ ಬಗ್ಗೆಯೇ ಯಾಕೆ ಬರೆಯಬೇಕು ಅನಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರ ಇಲ್ಲ. ಆದರೆ ಎಂಬತ್ತು ವರ್ಷ ವಯಸ್ಸು ದಾಟಿದ ನಂತರವೂ ಎಳೆಯ ಯುವಕನಂತೆ ಕಾಣಿಸುತ್ತಿದ್ದ ಕಾಮತರ ಬಗ್ಗೆ ಬರೆಯಬೇಕು ಎಂದು ಹಲವು ದಿನಗಳಿಂದ ಅಂದುಕೊಳ್ಳುತ್ತಿದ್ದೆ ಎಂಬುದಂತೂ ನಿಜ. ನಾನು ಪದವಿ ವ್ಯಾಸಂಗ ಮಾಡುತ್ತಿದ್ದ ದಿನಗಳು ಅವು. ಒಂದು ದಿನ ದೂರವಾಣಿ ಕರೆ ಮಾಡಿದ ಹರೀಶ್ ಆದೂರು ಅವರು (ಆಗ ಹರೀಶ್ ಅವರು ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಮಂಗಳೂರು ಆವೃತ್ತಿಯಲ್ಲಿ ಕೆಲಸ ಮಾಡುತ್ತಿದ್ದರು), 'ಈ ವಾರದ ಅಂತ್ಯದಲ್ಲಿ ಮನೆಯಂಗಳದಲ್ಲಿ ಸಾಹಿತ್ಯ ಸಂಜೆ ಕಾರ್ಯಕ್ರಮ ಇದೆ. ನೀನೂ ಬಾ. ಅಲ್ಲಿ ನಿನಗೆ ನಾಲ್ಕು ಒಳ್ಳೆಯ ಮಾತುಗಳನ್ನು ಕೇಳುವ ಅವಕಾಶ ಸಿಗಬಹುದು' ಎಂದು ಆಹ್ವಾನ ನೀಡಿದರು. 'ಕಾರ್ಯಕ್ರಮದ ಅತಿಥಿ ಯಾರು' ಎಂದು ಪ್ರಶ್ನಿಸಿದೆ. 'ಎಂ.ವಿ. ಕಾಮತರು ಮಾರಾಯಾ' ಎಂದು ಉತ್ತರಿಸಿ ಫೋನ್ ಇಟ್ಟರು. ಶನಿವಾರ ಬಂತು. ಅಂದಿನ ತರಗತಿಗಳು ಮುಗಿದಿದ್ದವು. ಸರಿ, ಕಾಮತರ ಮಾತು ಕೇಳಿಸಿಕೊಳ್ಳುವ ಅವಕಾಶ ತಪ್ಪಿಸಿಕೊಳ್ಳಬಾರದು ಎಂಬ ಉದ್ದೇಶದಿಂದ ಮೂಡುಬಿದಿರೆ ಬಸ್‌ ಸ್ಟ್ಯಾಂಡ್‌ಗೆ ಹೋಗಿ, ಬೆಳ್ತಂಗಡಿ ಕಡೆ ಹೋಗುವ ಬಸ್ ಹತ್ತಿದೆ. ಜ
ಇತ್ತೀಚಿನ ಪೋಸ್ಟ್‌ಗಳು

ಇದು ಸಂವಾದದ ಹೊತ್ತು ಆಗಬೇಕಲ್ಲವೇ?

ನಾವು ಬದುಕುತ್ತಿರುವ ಸಂದರ್ಭವನ್ನು ‘ಫೇಸ್‌ಬುಕ್‌ ಮೂಲಕ ವಿಕಾರಗಳನ್ನು ತೋರಿಸಿಕೊಳ್ಳುವ ಹೊತ್ತು’ ಎಂದು ಕರೆಯಲು ಅಡ್ಡಿಯಿಲ್ಲ ಅನಿಸುತ್ತದೆ. ಸಾಮಾಜಿಕ ಮಾಧ್ಯಮಗಳಲ್ಲಿ ನಡೆಯುವ ಕೆಲವು ಚರ್ಚೆಗಳ ಮಟ್ಟವನ್ನು ಗಮನಿಸಿದರೆ ನಿಮಗೂ ಹಾಗೆ ಅನಿಸಬಹುದು. ಅದರಲ್ಲೂ ಎಡ–ಬಲ ಪಂಥಗಳ ಚರ್ಚೆಗಳಿಗೆ ತಲೆ ಹಾಕಿದರೆ ಮುಗಿದೇ ಹೋಯಿತು. ಅಲ್ಲಿ ಏನಾಗುತ್ತದೆ ಎಂಬುದು ನಿಮ್ಮೆಲ್ಲರ ಗಮನಕ್ಕೂ ಬಂದಿರಬಹುದು ಎಂಬುದು ನನ್ನ ಭಾವನೆ. ಮೂಡುಬಿದಿರೆಯಲ್ಲಿ ಇದ್ದುಕೊಂಡು, ಮಕ್ಕಳಿಗೆ ಪಾಠ ಹೇಳಿಕೊಡುತ್ತ, ಸಾಹಿತ್ಯ, ಸಮಾಜ, ಅರ್ಥವ್ಯವಸ್ಥೆ ಬಗ್ಗೆ ಮಾತನಾಡುವ, ನಾನು ಅವರ ಮನೆಗೆ ಹೋದಾಗಲೆಲ್ಲ ಒಳ್ಳೆಯ ಎಲೆ ಅಡಿಕೆ ಕೊಡುವ ಅರವಿಂದ ಚೊಕ್ಕಾಡಿಯವರು ಎಡ–ಬಲ ಪಂಥಗಳ ಬಗ್ಗೆ, ಅವೆರಡರ ನಡುವೆ ಸಂವಾದ ಆಗಬೇಕಿರುವ ಅಗತ್ಯದ ಬಗ್ಗೆ ಪುಟ್ಟ ಬರಹ ಬರೆದಿದ್ದಾರೆ. ಆ ಬರಹವನ್ನು ಇಲ್ಲಿ ಹಂಚಿಕೊಂಡಿದ್ದೇನೆ. ಅವರ ಬರಹಕ್ಕೆ ನಾನು ಬರೆದ ಪ್ರತಿಕ್ರಿಯೆ ಕೂಡ ಇಲ್ಲಿದೆ. ದಯವಿಟ್ಟು ಎರಡನ್ನೂ ಓದಿ. ನಿಮ್ಮ ಅನಿಸಿಕೆ ತಿಳಿಸಿ. =========== ಚೊಕ್ಕಾಡಿಯವರಿಗೆ ಬರೆದ ಪ್ರತಿಕ್ರಿಯೆ... ಸರ್, ನಿಮ್ಮ ಬರಹ ಓದಿದ ನಂತರ ಹಳೆಯ ಕೆಲವು ಪ್ರಯತ್ನಗಳು ನೆನಪಿಗೆ ಬಂದವು. ಆ ಪ್ರಯತ್ನಗಳು ನಡೆದಿದ್ದ ಹೊತ್ತಿನಲ್ಲಿ ನೀವೂ ಜೊತೆಯಲ್ಲಿ ಇದ್ದಿದ್ದು ಅಥವಾ ನಾವು ನಿಮ್ಮ ಜೊತೆಯಲ್ಲಿ ಇದ್ದಿದ್ದು ನಿಮ್ಮ ನೆನಪಿನಲ್ಲಿ ಇದೆ ಎಂದು ಭಾವಿಸುವೆ. ಎಡಪಂಥೀಯರು ಮತ್ತು ಬಲಪಂಥೀಯರಲ್ಲಿ ಇರುವ, ಸಂವಾದಿ

ಏಕರೂಪ ನಾಗರಿಕ ಸಂಹಿತೆ ಎಂಬ ಜಾತ್ಯತೀತ ಬೇಡಿಕೆ

ಏಕರೂಪ ನಾಗರಿಕ ಸಂಹಿತೆಯನ್ನು ದೇಶದಲ್ಲಿ ಜಾರಿಗೆ ತರುವುದು ಸಂವಿಧಾನ ನಿರ್ಮಾತೃಗಳ ಕನಸು , ಆಶಯ . ಸಂವಿಧಾನ ಕರಡು ರಚನಾ ಸಭೆಯಲ್ಲಿ ಡಾ . ಬಿ . ಆರ್ . ಅಂಬೇಡ್ಕರ್ , ಕೆ . ಎಂ . ಮುನ್ಷಿ ಸೇರಿದಂತೆ ಹಲವರು ಆಡಿದ ಮಾತುಗಳು ಇದನ್ನು ದೃಢಪಡಿಸುತ್ತವೆ . ಆದರೆ , ಕರಡು ರಚನಾ ಸಮಿತಿಯ ಎಲ್ಲ ಸದಸ್ಯರಿಂದ ಇದಕ್ಕೆ ಬೆಂಬಲ ಸಿಗಲಿಲ್ಲ . ನಿರ್ದಿಷ್ಟ ವರ್ಗಗಳಿಂದ ವಿರೋಧ ವ್ಯಕ್ತವಾದರೂ , ಸಂವಿಧಾನದ 44 ನೇ ವಿಧಿಯಲ್ಲಿ , ‘ ಸರ್ಕಾರವು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಯತ್ನಿಸಬೇಕು’ ಎಂದು ಹೇಳಲಾಗಿದೆ . ಇಲ್ಲಿ ಒಂದು ವಿಚಾರ ಸ್ಪಷ್ಟ . ಸಮಾನತೆಯನ್ನು ಹೇಳುವ 14 ನೇ ವಿಧಿ , ಧಾರ್ಮಿಕ ಸ್ವಾತಂತ್ರ್ಯವನ್ನು ನೀಡುವ 25 ನೇ ವಿಧಿಯನ್ನು ರಚಿಸಿದ ನಂತರವೇ , ಕರಡು ರಚನಾ ಸಮಿತಿಯು 44 ನೇ ವಿಧಿಯನ್ನು ರೂಪಿಸಿತು . ದೇಶದಲ್ಲಿ ವಿವಿಧ ಧರ್ಮ , ಜಾತಿ , ವರ್ಗಗಳನ್ನು ಪ್ರಭುತ್ವ ಸಮಾನವಾಗಿ ಕಾಣಬೇಕು (12 ನೇ ವಿಧಿ ), ಅವರ ಧಾರ್ಮಿಕ ಸ್ವಾತಂತ್ರ್ಯಕ್ಕೆ ರಕ್ಷಣೆ ನೀಡಬೇಕು (25 ನೇ ವಿಧಿ ) ಎಂದು ಹೇಳುವ ಸಂವಿಧಾನ , ಆಸ್ತಿ– ವಿವಾಹ– ದತ್ತು ಸ್ವೀಕಾರ ಸೇರಿದಂತೆ ವೈಯಕ್ತಿಕ ಕಾನೂನುಗಳ ವ್ಯಾಪ್ತಿಗೆ ಬರುವ ವಿಚಾರಗಳಲ್ಲಿ ಎಲ್ಲರಿಗೂ ಅನ್ವಯವಾಗುವ ಸಮಾನ ಸಂಹಿತೆಯನ್ನು ರೂಪಿಸಬೇಕು ಎಂದಿದೆ . ಅಂದರೆ ಸಮಾನತೆ , ಧಾರ್ಮಿಕ ಸ್ವಾತಂತ್ರ್ಯವನ್ನು ಕಾಯ್ದುಕೊಂಡೇ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಲು ಸಾಧ್ಯ ಎಂಬ ನಂಬಿಕೆ ಕ

ಮೂರು ತೀರ್ಪುಗಳ ಕತೆ

ಸುಪ್ರೀಂ ಕೋರ್ಟ್‌ ಮತ್ತು ಹೈ­ಕೋರ್ಟ್‌­­­ಗಳಿಗೆ ನ್ಯಾಯ­ಮೂರ್ತಿಗಳನ್ನು ‘ಕೊಲಿ­ಜಿಯಂ’ ಮೂಲಕ ನೇಮಕ ಮಾಡ­ಬೇಕು ಎಂದು ಸಂವಿಧಾನ ಹೇಳುವುದಿಲ್ಲ. ಆದರೆ 1993ರಲ್ಲಿ ಸುಪ್ರೀಂ ಕೋರ್ಟ್‌ನ ವಿಸ್ತೃತ ಪೀಠ, ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ನೇಮಕ ‘ಕೊಲಿಜಿಯಂ’ ಮೂಲಕ ಆಗಬೇಕು ಎಂದು ಹೇಳಿತು. ಭಾರತದ ನ್ಯಾಯಾಂಗಕ್ಕೆ ನಡೆಯುವ ನೇಮಕಾತಿಗಳು ಕೊಲಿಜಿಯಂ ಮೂಲಕ ಆಗಬೇಕು ಎಂಬ ವ್ಯವಸ್ಥೆ ಜಾರಿಗೆ ಬಂದಿದ್ದು ಹಂತಹಂತವಾಗಿ. ಇದೊಂದು ವಿಕಸನದ ಕತೆ. ಕಾರ್ಯಾಂ­ಗವು ನ್ಯಾಯಾಂ­ಗದ ಜೊತೆ ಸಂಘರ್ಷಕ್ಕೆ ಮುಂದಾ­ದಾಗ ರಕ್ಷಣಾತ್ಮಕ ಕ್ರಮವಾಗಿ ‘ಕೊಲಿಜಿಯಂ’ ವ್ಯವಸ್ಥೆ ಜನ್ಮತಾಳಿತು ಎಂಬ ವಾದ ಇದೆ. ಕೊಲಿಜಿಯಂ ವ್ಯವಸ್ಥೆ ವಿಕಸನ ಹೊಂದಲು ಮೂಲ, ಕೇಂದ್ರ ಕಾನೂನು ಸಚಿವರು ಹೊರಡಿ­ಸಿದ ಒಂದು ಸುತ್ತೋಲೆ ಎಂದು ತಜ್ಞರು ಹೇಳುತ್ತಾರೆ. ‘ಯಾವುದೇ ರಾಜ್ಯದ ಹೈಕೋರ್ಟ್‌ನ ಶೇಕಡ 33ರಷ್ಟು ನ್ಯಾಯಮೂರ್ತಿಗಳು ಹೊರ ರಾಜ್ಯ­ಗಳಿಗೆ ಸೇರಿದವರಾಗಿದ್ದರೆ ಉತ್ತಮ. ದೇಶದಲ್ಲಿ ಏಕತೆ ಮೂಡಿಸಲು ಇದು ನೆರವಾಗುತ್ತದೆ’ ಎಂಬ ಮಾತಿ­ನೊಂದಿಗೆ 1981ರಲ್ಲಿ ಹೊರಡಿಸಿದ್ದ ಸುತ್ತೋಲೆ ಆರಂಭವಾಗುತ್ತದೆ. ಪಂಜಾಬ್‌ನ ರಾಜ್ಯಪಾಲರು ಮತ್ತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ (ಈಶಾನ್ಯ ರಾಜ್ಯಗಳನ್ನು ಹೊರತುಪಡಿಸಿ) ರವಾನಿಸಿದ ಸುತ್ತೋಲೆ ಇದು. ನಂತರ ಈ ಸುತ್ತೋಲೆಯಲ್ಲಿ ಒಂದು ಮಾತು ಬರುತ್ತದೆ. ‘ನಿಮ್ಮ ರಾಜ್ಯಗಳ ಹೈಕೋರ್ಟ್‌ನಲ್ಲಿ ಹೆಚ್ಚು­ವರಿ ನ್ಯಾಯಮೂರ್ತಿ ಯಾಗಿ ಕೆ

ನವ ಮಾಧ್ಯಮ ಮುಂದಿಟ್ಟಿರುವ ಚುನಾವಣಾ ಸವಾಲು

ಮೂಡುಬಿದಿರೆಯ ಮಹಾಬಲ ಕೊಠಾರಿ  ಈ ಬಾರಿ ಜನ ಸಂಘರ್ಷ ಪಕ್ಷದಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿ ದ್ದಾರೆ. (ಕೊಠಾರಿ ಕಾಲ್ಪನಿಕ ವ್ಯಕ್ತಿ, ಅವರು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಎಂಬುದು ಕಾಲ್ಪನಿಕ ಸಂದರ್ಭ). ಕೊಠಾರಿ ಅವರು ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡುವವರಲ್ಲ. ಆದರೆ ಮತದಾನಕ್ಕೆ 48 ಗಂಟೆಗಳು ಬಾಕಿ ಇವೆ ಎನ್ನುವಾಗ, ಅವರನ್ನು ಸೋಲಿಸುವಂತೆ ಕೋರಿ ಫೇಸ್‌ಬುಕ್‍, ಟ್ವಿಟರ್‌ಗಳಲ್ಲಿ ಸಂದೇಶ ರವಾನೆ ಯಾಗಲು ಶುರುವಾಗುತ್ತದೆ. ಅದು ಸಹಸ್ರಾರು ಜನರನ್ನು ಏಕಕಾಲದಲ್ಲಿ ತಲುಪುತ್ತದೆ, ಬಹಿರಂಗ ಸಭೆ ಮೂಲಕ ಮತದಾರರಿಗೆ ಚುನಾವಣಾ ಸಂದೇಶ ನೀಡಿದಂತೆ. ಅವರನ್ನು ವೈಯಕ್ತಿಕವಾಗಿ ನಿಂದಿಸುವ ದೃಶ್ಯಾವಳಿಗಳು ಯೂಟ್ಯೂಬ್‍ ಮೂಲಕ ದ.ಕ. ಲೋಕಸಭಾ ಕ್ಷೇತ್ರದ  ಮತದಾರರನ್ನು ತಲುಪು ತ್ತವೆ. ಫೇಸ್‌ಬುಕ್‌ನ ನಕಲಿ ಖಾತೆಗಳ ಮೂಲಕ ಕೊಠಾರಿ ಅವರನ್ನು ಅಸಭ್ಯ ವಾಗಿ ನಿಂದಿಸಲಾಗು ತ್ತದೆ. ಕೊಠಾರಿ ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುತ್ತಾರೆ. ಹೀಗೆ ಮಾಡು ತ್ತಿರುವವರು ಯಾರು ಎಂಬುದನ್ನು ಪತ್ತೆ ಮಾಡಲು ಆಯೋಗ ಮುಂದಾಗುತ್ತದೆ. ಫೇಸ್‌ಬುಕ್‍ ನಕಲಿ ಖಾತೆಗಳು ಅಮೆರಿಕ ದಲ್ಲಿರುವ ವ್ಯಕ್ತಿಯೊಬ್ಬರ ನಿಯಂತ್ರಣದಲ್ಲಿವೆ, ಟ್ವಿಟರ್‍ ಖಾತೆಯನ್ನು ಮಲೇಷ್ಯದಲ್ಲಿರುವ ವ್ಯಕ್ತಿ ಯೊಬ್ಬರು ನಿರ್ವಹಿಸುತ್ತಿದ್ದಾರೆ, ಆಸ್ಟ್ರೇಲಿಯಾ ದಲ್ಲಿರುವ ವ್ಯಕ್ತಿಯೊಬ್ಬರು ತಮ್ಮ ಸ್ಮಾರ್ಟ್‌ಫೋನ್‍ ಬಳಸಿ ಕೊಠಾರಿ

ಸುರಿಹೊಂಡ ಭರತಖಂಡ?

ನಾವು ಬಳಸುವ ಸ್ಮಾರ್ಟ್‌ ಫೋನ್‌, ಟ್ಯಾಬ್ಲೆಟ್‌ ಕಂಪ್ಯೂಟರ್‌, ಲ್ಯಾಪ್‌ ಟಾಪ್‌, ಡೆಸ್ಕ್‌ ಟಾಪ್‌ಗಳು ಅದೆಷ್ಟು ಅಂದವಾಗಿರುತ್ತೆ ಅಲ್ಲವೇ? ಸ್ಮಾರ್ಟ್‌ ಫೋನ್‌, ಟ್ಯಾಬ್‌ಗಳನ್ನು ಅಂಗೈಯಲ್ಲಿ ಹಿಡಿದು ನಮ್ಮ ಗೆಳೆಯರೆದುರು ಅದನ್ನು ತೋರಿಸಿದಾಗ, ಕಚೇರಿಯ ಕೆಲಸಗಳನ್ನು ಅವುಗಳ ಮೂಲವೇ ನಿರ್ವಹಿಸಿದಾಗ ಆಗುವ ಸಂತಸಕ್ಕೆ ಪಾರವೇ ಇಲ್ಲ. ಈ ವಸ್ತುಗಳು ನಮಗೆ ಹೊಸದಾಗಿ ದೊರೆತಾಗ ಮನಸ್ಸು ಕುಂತಲ್ಲಿ–ನಿಂತಲ್ಲಿ ಅವುಗಳ ಬಗ್ಗೆಯೇ ಧೇನಿಸುತ್ತಿರುತ್ತದೆ. ಆದರೆ ಆಯಸ್ಸು ಮುಗಿದ ನಂತರ ಅವುಗಳಿಂದ ಆಗುವ ಅಪಾಯದ ಬಗ್ಗೆ ನಾವು ಹೆಚ್ಚಿನ ಸಂದರ್ಭಗಳಲ್ಲಿ ಚಿಂತಿಸಿರುವುದಿಲ್ಲ. ಆರ್ಥಿಕ ಉದಾರೀಕರಣದ ನಂತರ ಭಾರತ, ಅದರಲ್ಲೂ ಬೆಂಗಳೂರು, ಮಾಹಿತಿ ತಂತ್ರಜ್ಞಾನ ಉದ್ಯಮದ ಮೂಲಕ ಅಪಾರ ಪ್ರಮಾಣದ ವಹಿವಾಟು ನಡೆಸಿದೆ. ದೊಡ್ಡ ಸಂಖ್ಯೆಯ ಜನರಿಗೆ ಕೈತುಂಬಾ ಸಂಬಳ ಬರುವ ನೌಕರಿ ನೀಡಿದೆ. ಇದರ ಜೊತೆಜೊತೆಗೇ ಅವರಿಗೆ ಬೇಕೆಂದ ಎಲೆಕ್ಟ್ರಾನಿಕ್‍ ವಸ್ತುಗಳನ್ನು ಖರೀದಿಸುವ ಆರ್ಥಿಕ ಶಕ್ತಿ ನೀಡಿದೆ. ಇದನ್ನು ಉದಾರೀಕರಣದ ವರ ಎನ್ನಿ ಅಥವಾ ಶಾಪ ಎನ್ನಿ – ಇ -ತ್ಯಾಜ್ಯದ ಉತ್ಪಾದನೆಯ ಪ್ರಮಾಣ ಕೂಡ ದೇಶದಲ್ಲಿ ತೀವ್ರವಾಗಿ ಏರುತ್ತಿದೆ. ಇದು, ಬೆಂಗಳೂರಿನಲ್ಲಂತೂ ಅಪಾಯದ ಮಟ್ಟ ತಲುಪಿದೆ. ಖಾಸಗಿ ಸಂಸ್ಥೆಯೊಂದು 2012ರಲ್ಲಿ ನಡೆಸಿದ್ದ ಸಮೀಕ್ಷೆಯ ಪ್ರಕಾರ ಮುಂಬೈ ಮಹಾನಗರಿಯಲ್ಲಿ ವರ್ಷಕ್ಕೆ ಅಂದಾಜು 61,500 ಮೆಟ್ರಿಕ್‍ ಟನ್‍ ಇ-–ತ್ಯಾಜ್ಯ ಉತ್ಪಾದನೆಯಾಗುತ್ತದೆ. ಇದರ ನಂತರದ ಸ

ಮೂರನೆಯ ಇರುವಿಕೆಯ ಹುಡುಕಾಟ...

ವಿದ್ಯಾಧರ ಎಸ್. ನೈಪಾಲ್ ಅವರ ಬಗ್ಗೆ ಇತ್ತೀಚೆಗೆ ಗಿರೀಶ ಕಾರ್ನಾಡರು ಒಂದು ಹೇಳಿಕೆ ನೀಡಿದ್ದರು. ಅದು ವಿವಾದಕ್ಕೂ  ಕಾರಣವಾಗಿತ್ತು. (ಅಂದಹಾಗೆ ನಮ್ಮಲ್ಲಿ ಎಲ್ಲವೂ ವಿವಾದಕ್ಕೆ ಹೇತುವಾಗುತ್ತಿದೆಯಲ್ಲ?!) ಈ ಸಂದರ್ಭದಲ್ಲಿ ನೈಪಾಲರನ್ನು ನಿಮ್ಮ ಅಭಿಪ್ರಾಯದಲ್ಲಿ ಸೆಕ್ಯುಲರಿಸಂ ಅಂದರೆ ಏನು ಎಂದು ಒಬ್ಬರು ಪ್ರಶ್ನಿಸಿದ್ದರು. “ಭಾರತದ ಮಟ್ಟಿಗೆ ಸೆಕ್ಯುಲರಿಸಂ ಅಂದರೆ ಯಾವುದೋ ಒಂದು ರಾಜಕೀಯ ಪಕ್ಷದ ಜೊತೆ ಗುರುತಿಸಿಕೊಳ್ಳುವುದು ಅಥವಾ ಗುರುತಿಸಿಕೊಳ್ಳದೇ ಇರುವುದು. ಅದಕ್ಕಿಂತ ಹೆಚ್ಚಿನ ಯಾವುದೇ ಅರ್ಥ ಇಲ್ಲ” ಎಂದು ನೈಪಾಲರು ಉತ್ತರಿಸಿದ್ದರು. ಹೌದು ನಮ್ಮಲ್ಲಿ ಸೆಕ್ಯುಲರಿಸಂ ಅಂದರೆ ಏನರ್ಥ? ಈ ಬಗ್ಗೆ ಬೇರೆ ಬೇರೆ ಸಂದರ್ಭಗಳಲ್ಲಿ ಬರೆದ ಮೂರು ಪುಟ್ಟ ಪುಟ್ಟ ಬರಹಗಳು ಇಲ್ಲಿವೆ. ನೋಡಿ. ಓದಿದ ನಂತರ ನಿಮಗೆ ಏನನ್ನಿಸಿತು ಎಂಬುದನ್ನು ಬರೆಯಿರಿ. *** ನಾನು ಭಾರತೀಯ . ನಾನು ಯಾವುದೇ ಮತದ ಅನುಯಾಯಿ ಅಲ್ಲ . ಅಂದರೆ ಯಾವುದೇ ಒಂದು ನಿರ್ದಿಷ್ಟ ಗ್ರಂಥ ಹಾಗೂ ನಿರ್ದಿಷ್ಟ ಮತಸ್ಥಾಪಕನ ಅನುಯಾಯಿ ನಾನಲ್ಲ . ಭಾರತದಲ್ಲಿರುವ ಬಹುಪಾಲು ಮಂದಿ ನನ್ನಂಥವರೇ . ಅವರಿಗೆ ಒಂದೇ ದೇವರು , ಒಂದೇ ಗ್ರಂಥ , ಒಬ್ಬನೇ ಗುರು ಇಲ್ಲ .   ಹಿಂದೂ   ಎಂಬ   ರಿಲಿಜನ್ ‍ ನನಗೆ ಇನ್ನೂ ಅರ್ಥವಾಗುತ್ತಿಲ್ಲ . ನಾನು ಯಾವುದೇ ರಿಲಿಜನ್ ‍ ನ ಅನುಯಾಯಿ ಅಲ್ಲದ ಕಾರಣ , ರಿಲಿಜನ್ ‍ ಇರುವ ದೇಶಗಳಿಗೆ ಬೇಕಾದ   ಸೆಕ್ಯುಲರಿಸಂ