ನನಗೆ ಪತ್ರಿಕೋದ್ಯಮ ಮತ್ತು ಬರವಣಿಗೆಯ ಬಗ್ಗೆ ಅನುಮಾನಗಳು ಮೂಡಿದಾಗ, ಸೂಕ್ತ ಸಲಹೆ ಸೂಚನೆಗಳನ್ನು ಪಡೆಯಲು ನಾನು ಆಯ್ಕೆಮಾಡಿಕೊಳ್ಳುವ ವ್ಯಕ್ತಿಗಳ ಪೈಕಿ ನಮ್ಮ ಮನೆಯ ಸಮೀಪದಲ್ಲೇ ಇರುವ ಗಣಪತಿ ಎಂ. ಎಂ. ಅವರೂ ಒಬ್ಬರು. ವೃತ್ತಿಯಲ್ಲಿ ಸಾಮಾಜಿಕ ಕಾರ್ಯಕರ್ತರಾಗಿರುವ ಇವರು ವಿದ್ಯಾರ್ಥಿ ದೆಸೆಯಿಂದಲೂ ಪ್ರಗತಿಪರ ಚಳವಳಿಯೊಂದಿಗೆ ಬೆಳೆದುಬಂದವರು. ನಾನೊಬ್ಬ ಪ್ರಗತಿವಾದಿ ಅಂತ ಹೆಮ್ಮೆಯಿಂದ ಹೇಳಿಕೊಳ್ಳುವವರು. ಜೊತೆಗೆ ಕನ್ನಡ ಭಾಷೆ, ಕನ್ನಡ ಪುಸ್ತಕಗಳ ಬಗ್ಗೆ ಅಭಿಮಾನ ಇರುವವರು. ಒಮ್ಮೆ ಹೀಗೆ ಅವರ ಮನೆಗೆ ಹೋಗಿದ್ದಾಗ ಕನ್ನಡ ಪುಸ್ತಕಗಳ ಬಗ್ಗೆ ನನ್ನ ಮತ್ತು ಅವರ ನಡುವೆ ನಡೆದ ಸಣ್ಣ ಮಾತುಕತೆಯ ಬಗ್ಗೆ ನಿಮ್ಮ ಮುಂದೆ ಪ್ರಸ್ತಾಪ ಮಾಡಬೇಕೆನಿಸುತ್ತಿದೆ. ನಾನು ಗಣಪತಿಯವರ ಮನೆಗೆ ಹೋದಾಗ ಅವರು ಆಗತಾನೇ ಕೊಂಡುತಂದಿದ್ದ ಯಾವುದೋ ಪುಸ್ತಕದ ಪುಟಗಳನ್ನು ತಿರುವಿ ಹಾಕುತ್ತಿದ್ದರು. ನನ್ನನ್ನು ಕಂಡೊಡನೆಯೇ ಒಮ್ಮೆ ಮುಗುಳ್ನಕ್ಕು ಒಂದೆರಡು ಪುಸ್ತಕಗಳನ್ನು ನನ್ನ ಮುಂದಿಟ್ಟರು. ಪುಸ್ತಕಗಳನ್ನು ಕಂಡೊಡನೆಯೇ ನಾನು ಕೆಲವೇ ದಿನಗಳ ಹಿಂದೆ ಕೊಂಡು ತಂದಿದ್ದ ಹೆಗ್ಗೋಡಿನ ಅಕ್ಷರ ಪ್ರಕಾಶನದ 'ಗೋಪಾಲಕೃಷ್ಣ ಅಡಿಗ ಅವರ ಆಯ್ದ ಕವಿತೆಗಳು' ಪುಸ್ತಕ ನೆನಪಿಗೆ ಬಂತು. ಈ ಪುಸ್ತಕದ ಮುದ್ರಣ, ಪುಟ ವಿನ್ಯಾಸ, ಕಾಗದದ ಗುಣಮಟ್ಟ ಇವೆಲ್ಲವೂ ಶ್ರೇಷ್ಠ ದರ್ಜೆಯಲ್ಲಿಯೇ ಇವೆಯಾದರೂ ಪುಸ್ತಕದ ಬೆಲೆ ತುಸು ಹೆಚ್ಚಾಯಿತು ಎಂಬ ಭಾವನೆ ನನ್ನಲ್ಲಿತ್ತು. ಇದೇ ವಿಚಾರವಾಗಿ ಗಣಪತಿಯ
ಆನೋ ಭದ್ರಾಃ ಕೃತವೋ ಯಂತು ವಿಶ್ವತ: