ವಿಷಯಕ್ಕೆ ಹೋಗಿ

ಯಾರು ಒಳ್ಳೆಯವರು?

ಇದು ಸುಮಾರು ನಲವತ್ತು ವರ್ಷಗಳ ಹಿಂದೆ ನಡೆದ ಕತೆ.

ಆತನ ಹೆಸರು ಸೋಮಣ್ಣ, ಅವನ ನೆರೆಮನೆಯವನ ಹೆಸರು ರಾಮಣ್ಣ. ಇಬ್ಬರೂ ವಾಸಿಸುತ್ತಿದ್ದದ್ದು ಕಾನೂರು ಎಂಬ ಪುಟ್ಟ ಹಳ್ಳಿಯಲ್ಲಿ. ಇಬ್ಬರೂ ಬ್ರಾಹ್ಮಣರು.

ರಾಮಣ್ಣ ಬಹಳ ಸಾಧು ಸ್ವಭಾವದವ. ಯಾವತ್ತೂ, ಯಾರ ಮೇಲೂ ಹರಿಹಾಯ್ದವನಲ್ಲ. ದಿನದ ಮೂರೂ ಹೊತ್ತು ಶ್ರದ್ಧೆಯಿಂದ ಸಂಧ್ಯಾವಂದನೆ ಮಾಡುತ್ತಿದ್ದ. ಮೊಸ, ಕಪಟ, ಜೂಜು... ಇದ್ಯಾವುದೂ ರಾಮಣ್ಣನಿಗೆ ಗೊತ್ತಿಲ್ಲ. ಹೆಂಡ, ಮಾಂಸ, ಪರಸ್ತ್ರೀ ಸಹವಾಸಗಳಿಂದ ರಾಮಣ್ಣ ಮೈಲು ದೂರ. ಒಟ್ಟಿನಲ್ಲಿ ಒಬ್ಬ ಸಂಭಾವಿತ, ಸುಭಗ ನಾಗರಿಕ.

ರಾಮಣ್ಣನ ವ್ಯಕ್ತಿತ್ವಕ್ಕೆ ಸ್ವಲ್ಪ ಮಟ್ಟಿಗೆ ವಿರುದ್ಧವಾದ ವ್ಯಕ್ತಿತ್ವ ಸೋಮಣ್ಣನದು. ಸೋಮಣ್ಣನಿಗೆ ಸುಳ್ಳು ಹೇಳಲು, ಸೋಗು ಹಾಕಲು, ಇನ್ನೊಬ್ಬರ ಮೇಲೆ ದ್ವೇಷ ಕಾರಲು ಬರುತ್ತಿರಲಿಲ್ಲವಾದರೂ ಸ್ವಲ್ಪ ಮುಂಗೋಪ. ಅದಲ್ಲದೆ ಸೋಮಣ್ಣನಿಗೆ ಹೆಂಡ, ಮಾಂಸಗಳ ಸಹವಾಸ ಸ್ವಲ್ಪ ಜೋರಾಗಿಯೇ ಇತ್ತು. ಇಸ್ಪೀಟು ಕೂಡಾ ಜನ್ಮಜಾತ ಕಲೆಯೆಂಬಂತೆ ಬಂದಿತ್ತು. ಅದೇ ಕಾರಣದಿಂದ ಊರ ಬ್ರಾಹ್ಮಣರ ದೃಷ್ಟಿಯಲ್ಲಿ ಸೋಮಣ್ಣ ಒಬ್ಬ ಫಟಿಂಗನಾಗಿದ್ದ. ಆತ ಊರ ಬ್ರಾಹ್ಮಣರ ದೃಷ್ಟಿಯಲ್ಲಿ ಸಂಭಾವಿತನೂ ಅಲ್ಲ, ಸುಭಗನೂ ಅಲ್ಲ.

ಸಾಧು ಸ್ವಭಾವದ ರಾಮಣ್ಣ ತನ್ನ ಜೀವಿತಾವಧಿಯ ಕಟ್ಟಕಡೆಯ ದಿನದವರೆಗೂ ಸಾಧು ಪ್ರಾಣಿಯಾಗಿಯೇ ಉಳಿದ. ಅವನಿಂದ ಯಾರಿಗೂ ಹಾನಿಯಾಗಲಿಲ್ಲ, ಯಾರಿಗೂ ಉಪಕಾರವೂ ಆಗಲಿಲ್ಲ. ಆದರೆ ರಾಜಾರೋಷವಾಗಿ ಹೆಂಡ, ಮಾಂಸಗಳ ಸಹವಾಸ ಮಾಡಿದ ಸೋಮಣ್ಣ ತನ್ನ ಜೀವಿತಾವಧಿಯ ಕೊನೆಯ ದಿನಗಳಲ್ಲಿ ಊರಿಗೆ ಅಂತ ಭಗೀರತ ಕೆಲಸಗಳನ್ನು ಮಾಡಿದ. ತನ್ನ ಅಷ್ಟಿಷ್ಟು ರಾಜಕೀಯ ಪ್ರಭಾವ ಬಳಸಿ ಊರಿಗೊಂದು ಶಾಲೆಯನ್ನು ಮತ್ತು ಪ್ರಥಮದರ್ಜೆ ಕಾಲೇಜೊಂದನ್ನು ಸರಕಾರದಿಂದ ಮಂಜೂರು ಮಾಡಿಸಿದ. ಊರಿನವರ ಆರ್ಥಿಕ ಅಭಿವೃದ್ಧಿಗಾಗಿ ಊರಿನಲ್ಲೊಂದು ರಾಷ್ಟ್ರೀಕೃತ ಬ್ಯಾಂಕ್‌ನ ಶಾಖೆ ಆರಂಭವಾಗುವಂತೆ ಮಾಡಿದ. ಇಷ್ಟೆಲ್ಲ ಒಳ್ಳೆಯ ಕೆಲಸಗಳನ್ನು ಮಾಡಿದ ಸೋಮಣ್ಣ ತನ್ನ ಕಟ್ಟಕಡೆಯ ದಿನದವರೆಗೂ ಕುಡಿತ, ಮಾಂಸ ಸೇವನೆಯನ್ನು ಬಿಡಲಿಲ್ಲ. ಯಾರಾದರೂ ಆ ಬಗ್ಗೆ ಕೇಳಿದರೆ "ನನ್ನ ಜೀವನ, ನನ್ನಿಷ್ಟ. ನಿಮಗೇನು?" ಎಂಬ ಧಾಟಿಯಲ್ಲಿ ಉತ್ತರ ನೀಡುತ್ತಿದ್ದ.

ಇವರಿಬ್ಬರೂ ಸುಮಾರು ಒಂದೇ ಅವಧಿಯಲ್ಲಿ ತೀರಿಕೊಂಡರು.

ಈಗ ನೀವೇ ಹೇಳಿ, ಇವರಿಬ್ಬರಲ್ಲಿ ಯಾರು ಒಳ್ಳೆಯವರು, ಯಾರು ಉಪಕಾರಿಗಳು? ದಿನವಿಡೀ ದೇವರ ಧ್ಯಾನ, ಜಪ, ತಪ ಎಂಬ ಆಧ್ಯಾತ್ಮಿಕ ವಿಚಾರಗಳಲ್ಲಿ ಮುಳುಗಿರುತ್ತಿದ್ದರೂ ಊರಿಗೆ ಅಂತ ಏನೂ ಮಾಡದ ರಾಮಣ್ಣ ಒಳ್ಳೆಯವನೋ ಅಥವಾ ದಿನವಿಡೀ ಮದಿರೆ-ಮಾಂಸ ಅಂತ ಓಡಾಡಿಕೊಂಡೂ ತನ್ನ ಜೀವಿತದ ಕೊನೆಯ ಅವಧಿಯಲ್ಲಿ ಊರಿಗಾಗಿ ಕೈಲಾದ ಕೆಲಸ ಮಾಡಿದ ಸೋಮಣ್ಣ ಒಳ್ಳೆಯವನೋ?

ಕಾಮೆಂಟ್‌ಗಳು

ಅನಾಮಧೇಯಹೇಳಿದ್ದಾರೆ…
ಸೋಮಣ್ಣ ಸಮಾಜಕ್ಕೆ ಒಳ್ಳೆಯದನ್ನು ಮಾಡಿ ಒಳ್ಳೆಯವನು ಆದ. ಆದರೆ ರಾಮಣ್ಣ ವೈಯಕ್ತಿಕ ವಿಷಯದಲ್ಲಿ ಒಳ್ಳೆಯವನು ಮಾತ್ರ. ವಿಷಯ ಚೆನ್ನಾಗಿದೆ.
ಅನಾಮಧೇಯಹೇಳಿದ್ದಾರೆ…
ninna thale
Shree ಹೇಳಿದ್ದಾರೆ…
olleyadu annodanna nivu hege define madthira hage avranna ollevru ankobodu :):)channagide:):)
Ravi Adapathya ಹೇಳಿದ್ದಾರೆ…
ibaru olleye...

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪತ್ರಿಕೋದ್ಯಮದ ವಿದ್ಯಾರ್ಥಿ ಮಿತ್ರರಿಗೆ...

ನಾನಿನ್ನೂ ಪತ್ರಿಕೋದ್ಯಮದ ವಿದ್ಯಾರ್ಥಿ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಇನ್ನೂ ಎರಡು ವರ್ಷ ಕಾಯಬೇಕು. ಪತ್ರಿಕೋದ್ಯಮದ ಜಂಜಡಗಳ ನೇರ ಅನುಭವವಿಲ್ಲ. ಪತ್ರಿಕಾರಂಗದಲ್ಲಿ ಎದುರಿಸಬೇಕಾಗಿರುವ ಸವಾಲುಗಳ ಬಗ್ಗೆ ಕೇಳಿ ಗೊತ್ತೆ ಹೊರತು ಸ್ವಲ್ಪವೂ ಅನುಭವಿಸಿ ಗೊತ್ತಿಲ್ಲ. ಹಾಗಾಗಿ ಈ ಹೊತ್ತಿನಲ್ಲಿ ಇಂಥ ಒಂದು ಲೇಖನವನ್ನು ಬರೆಯುವುದು ಸರಿಯೋ ತಪ್ಪೋ ಎಂಬ ಪ್ರಶ್ನೆ ನನ್ನನ್ನು ಹಲವು ಬಾರಿ ಕಾಡಿದೆ. ಆದರೂ ಈ ವಿಷಯವನ್ನು ನಿಮ್ಮ ಮುಂದೆ ಹೇಳಿಕೊಳ್ಳದಿದ್ದರೆ ಸಮಾಧಾನವಿಲ್ಲ ಅಂತ ಅನಿಸಿದ್ದರಿಂದ "ಬರೆಯಬೇಕು, ಬರೆಯುತ್ತೇನೆ" ಎಂದು ನಿರ್ಧರಿಸಿದ್ದೇನೆ. ರಾಜ್ಯದಲ್ಲಿ ಪತ್ರಿಕೋದ್ಯಮದಲ್ಲಿ ಪದವಿಯನ್ನು ನೀಡುವ ಹಲವಾರು ಕಾಲೇಜುಗಳು ಹುಟ್ಟಿಕೊಳ್ಳುತ್ತಿವೆ. ಹಲವಾರು ಪ್ರತಿಷ್ಠಿತ ಕಾಲೇಜುಗಳು ತಮ್ಮ ಮಾನವಿಕ ವಿಭಾಗದಲ್ಲಿ ಪತ್ರಿಕೋದ್ಯಮವನ್ನೂ ಒಂದು ಆಯ್ಕೆಯ ವಿಷಯವನ್ನಾಗಿ ಸೇರಿಸಿದ್ದಾರೆ. ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರಗಳಂತೆ ಪತ್ರಿಕೋದ್ಯಮವನ್ನೂ ಶಾಸ್ತ್ರೀಯವಾಗಿ ಓದುವ ಅವಕಾಶ ಇಂದಿನ ಯುವಕರಿಗೆ ಇದೆ. ಪತ್ರಿಕೋದ್ಯಮವನ್ನು ಇಷ್ಟೊಂದು ಶಾಸ್ತ್ರೀಯವಾಗಿ ಓದಿದ್ದರೂ ನಾವು ಕೆಲವೊಮ್ಮೆ ವರ್ತಿಸುತ್ತಿರುವ ರೀತಿ ಸ್ವಲ್ಪ ಬೇಸರ ಮೂಡಿಸುತ್ತಿದೆ. ಮೊನ್ನೆ ಪತ್ರಿಕೋದ್ಯಮ ಓದುತ್ತಿರುವ ನನ್ನ ಹಳೆಯ ಸ್ನೇಹಿತರೊಬ್ಬರ ಜೊತೆ ಮಾತನಾಡುತ್ತಿದ್ದಾಗ ಭಾರತೀಯ ಮೂಲದ ವಿಶ್ವದ ಶ್ರೇಷ್ಠ ಪತ್ರಿಕೆಯೊಂದರ ಬಗ್ಗೆ ಮಾತು ಬಂತು. ಸುಮಾರ

ನವ ಮಾಧ್ಯಮ ಮುಂದಿಟ್ಟಿರುವ ಚುನಾವಣಾ ಸವಾಲು

ಮೂಡುಬಿದಿರೆಯ ಮಹಾಬಲ ಕೊಠಾರಿ  ಈ ಬಾರಿ ಜನ ಸಂಘರ್ಷ ಪಕ್ಷದಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿ ದ್ದಾರೆ. (ಕೊಠಾರಿ ಕಾಲ್ಪನಿಕ ವ್ಯಕ್ತಿ, ಅವರು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಎಂಬುದು ಕಾಲ್ಪನಿಕ ಸಂದರ್ಭ). ಕೊಠಾರಿ ಅವರು ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡುವವರಲ್ಲ. ಆದರೆ ಮತದಾನಕ್ಕೆ 48 ಗಂಟೆಗಳು ಬಾಕಿ ಇವೆ ಎನ್ನುವಾಗ, ಅವರನ್ನು ಸೋಲಿಸುವಂತೆ ಕೋರಿ ಫೇಸ್‌ಬುಕ್‍, ಟ್ವಿಟರ್‌ಗಳಲ್ಲಿ ಸಂದೇಶ ರವಾನೆ ಯಾಗಲು ಶುರುವಾಗುತ್ತದೆ. ಅದು ಸಹಸ್ರಾರು ಜನರನ್ನು ಏಕಕಾಲದಲ್ಲಿ ತಲುಪುತ್ತದೆ, ಬಹಿರಂಗ ಸಭೆ ಮೂಲಕ ಮತದಾರರಿಗೆ ಚುನಾವಣಾ ಸಂದೇಶ ನೀಡಿದಂತೆ. ಅವರನ್ನು ವೈಯಕ್ತಿಕವಾಗಿ ನಿಂದಿಸುವ ದೃಶ್ಯಾವಳಿಗಳು ಯೂಟ್ಯೂಬ್‍ ಮೂಲಕ ದ.ಕ. ಲೋಕಸಭಾ ಕ್ಷೇತ್ರದ  ಮತದಾರರನ್ನು ತಲುಪು ತ್ತವೆ. ಫೇಸ್‌ಬುಕ್‌ನ ನಕಲಿ ಖಾತೆಗಳ ಮೂಲಕ ಕೊಠಾರಿ ಅವರನ್ನು ಅಸಭ್ಯ ವಾಗಿ ನಿಂದಿಸಲಾಗು ತ್ತದೆ. ಕೊಠಾರಿ ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುತ್ತಾರೆ. ಹೀಗೆ ಮಾಡು ತ್ತಿರುವವರು ಯಾರು ಎಂಬುದನ್ನು ಪತ್ತೆ ಮಾಡಲು ಆಯೋಗ ಮುಂದಾಗುತ್ತದೆ. ಫೇಸ್‌ಬುಕ್‍ ನಕಲಿ ಖಾತೆಗಳು ಅಮೆರಿಕ ದಲ್ಲಿರುವ ವ್ಯಕ್ತಿಯೊಬ್ಬರ ನಿಯಂತ್ರಣದಲ್ಲಿವೆ, ಟ್ವಿಟರ್‍ ಖಾತೆಯನ್ನು ಮಲೇಷ್ಯದಲ್ಲಿರುವ ವ್ಯಕ್ತಿ ಯೊಬ್ಬರು ನಿರ್ವಹಿಸುತ್ತಿದ್ದಾರೆ, ಆಸ್ಟ್ರೇಲಿಯಾ ದಲ್ಲಿರುವ ವ್ಯಕ್ತಿಯೊಬ್ಬರು ತಮ್ಮ ಸ್ಮಾರ್ಟ್‌ಫೋನ್‍ ಬಳಸಿ ಕೊಠಾರಿ

ಮರೆಯಲಾಗದ ಕಾಮತರು: ಮಾಧವರಾಯರ ಒಂದು ನೆನಪು!

ನಮ್ಮ ತಲೆಮಾರಿನ ಪತ್ರಕರ್ತರು ಕಂಡ 'ಪತ್ರಿಕಾ ರಂಗದ ಭೀಷ್ಮ'ನ ಬಗ್ಗೆ ಬರೆಯಬೇಕು ಅನಿಸುತ್ತಿದೆ. ಆ ಭೀಷ್ಮ ಯಾರು ಎಂಬ ಪ್ರಶ್ನೆ ಬೇಡ - ಅವರು ಮಾಧವ ವಿಠಲ ಕಾಮತ್ (ಎಂ.ವಿ. ಕಾಮತ್) ಅಲ್ಲದೆ ಬೇರೆ ಯಾರೂ ಅಲ್ಲ. ಅವರ ಬಗ್ಗೆಯೇ ಯಾಕೆ ಬರೆಯಬೇಕು ಅನಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರ ಇಲ್ಲ. ಆದರೆ ಎಂಬತ್ತು ವರ್ಷ ವಯಸ್ಸು ದಾಟಿದ ನಂತರವೂ ಎಳೆಯ ಯುವಕನಂತೆ ಕಾಣಿಸುತ್ತಿದ್ದ ಕಾಮತರ ಬಗ್ಗೆ ಬರೆಯಬೇಕು ಎಂದು ಹಲವು ದಿನಗಳಿಂದ ಅಂದುಕೊಳ್ಳುತ್ತಿದ್ದೆ ಎಂಬುದಂತೂ ನಿಜ. ನಾನು ಪದವಿ ವ್ಯಾಸಂಗ ಮಾಡುತ್ತಿದ್ದ ದಿನಗಳು ಅವು. ಒಂದು ದಿನ ದೂರವಾಣಿ ಕರೆ ಮಾಡಿದ ಹರೀಶ್ ಆದೂರು ಅವರು (ಆಗ ಹರೀಶ್ ಅವರು ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಮಂಗಳೂರು ಆವೃತ್ತಿಯಲ್ಲಿ ಕೆಲಸ ಮಾಡುತ್ತಿದ್ದರು), 'ಈ ವಾರದ ಅಂತ್ಯದಲ್ಲಿ ಮನೆಯಂಗಳದಲ್ಲಿ ಸಾಹಿತ್ಯ ಸಂಜೆ ಕಾರ್ಯಕ್ರಮ ಇದೆ. ನೀನೂ ಬಾ. ಅಲ್ಲಿ ನಿನಗೆ ನಾಲ್ಕು ಒಳ್ಳೆಯ ಮಾತುಗಳನ್ನು ಕೇಳುವ ಅವಕಾಶ ಸಿಗಬಹುದು' ಎಂದು ಆಹ್ವಾನ ನೀಡಿದರು. 'ಕಾರ್ಯಕ್ರಮದ ಅತಿಥಿ ಯಾರು' ಎಂದು ಪ್ರಶ್ನಿಸಿದೆ. 'ಎಂ.ವಿ. ಕಾಮತರು ಮಾರಾಯಾ' ಎಂದು ಉತ್ತರಿಸಿ ಫೋನ್ ಇಟ್ಟರು. ಶನಿವಾರ ಬಂತು. ಅಂದಿನ ತರಗತಿಗಳು ಮುಗಿದಿದ್ದವು. ಸರಿ, ಕಾಮತರ ಮಾತು ಕೇಳಿಸಿಕೊಳ್ಳುವ ಅವಕಾಶ ತಪ್ಪಿಸಿಕೊಳ್ಳಬಾರದು ಎಂಬ ಉದ್ದೇಶದಿಂದ ಮೂಡುಬಿದಿರೆ ಬಸ್‌ ಸ್ಟ್ಯಾಂಡ್‌ಗೆ ಹೋಗಿ, ಬೆಳ್ತಂಗಡಿ ಕಡೆ ಹೋಗುವ ಬಸ್ ಹತ್ತಿದೆ. ಜ