ವಿಷಯಕ್ಕೆ ಹೋಗಿ

ಆ ಆಂದೋಲನ ಕರ್ನಾಟಕವನ್ನು ಪ್ರಭಾವಿಸಿದ್ದು ಹೀಗೆ

ಉತ್ತರದಲ್ಲಿ ಗುಜರಾತ್‌ನಿಂದ ದಕ್ಷಿಣದಲ್ಲಿ ಕೇರಳ ರಾಜ್ಯದವರೆಗೆ ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳ ಮೂಲಕ ಹಾದುಹೋಗುವ ಶಿಖರ ಶ್ರೇಣಿಗೆ ಸಹ್ಯಾದ್ರಿ ಪರ್ವತಗಳು ಅಂತ ಹೆಸರು. ಇದನ್ನೇ ಪಶ್ಚಿಮ ಘಟ್ಟಗಳು ಅಂತಲೂ ಕರೆಯುತ್ತಾರೆ. ಇಲ್ಲಿ ದಟ್ಟ ಅರಣ್ಯವಿದೆ, ಹುಲ್ಲುಗಾವಲಿದೆ, ಜಗತ್ತಿನ ಕೆಲವೇ ಕೆಲವು ಪ್ರದೇಶಗಳಲ್ಲಿ ಮಾತ್ರ ಕಾಣಸಿಗುವಂಥ ಜೀವವೈವಿಧ್ಯವಿದೆ. ಇದು ದಕ್ಷಿಣ ಭಾರತದ ಅನೇಕ ಜೀವನದಿಗಳ ಉಗಮಸ್ಥಾನವೂ ಹೌದು.


ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ ಸುಮಾರು ೨೫-೩೦ ವರ್ಷಗಳ ಕಾಲ ದೇಶ ತೀವ್ರಗತಿಯ ಕೈಗಾರಿಕೀಕರಣಕ್ಕೆ ತನ್ನನ್ನು ತಾನು ತೆರೆದುಕೊಂಡಿತು. ಈಗಲೂ ತೆರೆದುಕೊಳ್ಳುತ್ತಿದೆ, ಅದು ಬೇರೆ ಮಾತು. ಅಂದಿನ ಕೈಗಾರಿಕೀಕರಣದ ಭರಾಟೆ ಹೇಗಿತ್ತೆಂದರೆ ಅರಣ್ಯನಾಶ, ಜೀವವೈವಿಧ್ಯ ನಾಶ, ನದಿಮೂಲಗಳ ಬತ್ತುವಿಕೆಯಂತಹ ಸಮಸ್ಯೆಗಳು ನಮ್ಮನ್ನು ಆಳುವ ಸರಕಾರಗಳಿಗೆ ಅರ್ಥವೇ ಆಗುತ್ತಿರಲಿಲ್ಲ. ಅವರ ಉದ್ದೇಶ ಒಂದೇ, ಭಾರತ ಕೂಡ ಯುರೋಪಿಯನ್ ರಾಷ್ಟ್ರಗಳಂತೆ ಔದ್ಯಮೀಕರಣಗೊಳ್ಳಬೇಕು.

ಇದರ ಪರಿಣಾಮವಾಗಿ ಅಪಾರ ಪ್ರಮಾಣದ ಅರಣ್ಯ ನಾಶವಾಯಿತು. ಪಶ್ಚಿಮ ಘಟ್ಟಗಳೂ ಇದರಿಂದ ಹೊರತಾಗಲಿಲ್ಲ. ಅಲ್ಲಿನ ಅಪಾರ ಪ್ರಮಾಣದ ಜೀವವೈವಿಧ್ಯಕ್ಕೆ ಕೊಡಲಿಪೆಟ್ಟು ಬಿತ್ತು. ನದಿಮೂಲಗಳು ಬತ್ತತೊಡಗಿದವು. ಜನರು ತೊಂದರೆ ಅನುಭವಿಸತೊಡಗಿದರು. ಕಾಡು ಕಡಿದು, ಪರಿಸರ ನಾಶಮಾಡಿ ದೇಶಕಟ್ಟಲು ಸಾಧ್ಯವಿಲ್ಲ ಎಂಬ ಸತ್ಯ ನಿಧಾನವಾಗಿಯಾದರೂ ಜನರ ಅರಿವಿಗೆ ಬರಲಾರಂಭಿಸಿತು.

ಈ ನಡುವೆ ೧೯೭೫ರ ಸುಮಾರಿಗೆ ಕರ್ನಾಟಕ ಸರಕಾರ ಬೇಡ್ತಿ ಯೋಜನೆಯನ್ನು ಕೈಗೆತ್ತಿಕೊಂಡಿತು. ಈ ಯೋಜನೆ ಕಾರ್ಯಗತಗೊಂಡರೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹಾಗೂ ಯಲ್ಲಾಪುರ ತಾಲೂಕಿನ ಅನೇಕ ಗ್ರಾಮಗಳು ಮುಳುಗಡೆಯಾಗುತ್ತವೆ. ಸಾವಿರಾರು ಮಂದಿ ತಮ್ಮ ಮೂಲ ನೆಲೆಯನ್ನು ಬಿಡಬೇಕಾಗುತ್ತದೆ. ಇದನ್ನು ವಿರೋಧಿಸಿ ಅಂದಿನ ಅಂಕೋಲಾ ಕ್ಷೇತ್ರದ ಶಾಸಕಿಯಾಗಿದ್ದ ಅನಸೂಯಾ ಶರ್ಮ ಮತ್ತು ಶಿರಸಿಯ ಎಮ್‌ಇಎಸ್ ಕಾಲೇಜಿನ ಪ್ರಾಚಾರ್ಯರಾಗಿದ್ದ ಲಿಂಗೇಶ್ ಶರ್ಮಾ ಮುಂತಾದವರ ನೇತೃತ್ವದಲ್ಲಿ ಬೇಡ್ತಿ ವಿರೋಧಿ ಆಂದೋಲನ ಆರಂಭವಾಯಿತು. ೧೯೭೫ರಿಂದ ೮೦ರವರೆಗೆ ಸಣ್ಣ ಪ್ರಮಾಣದಲ್ಲಿ ಜನರ ಮನಸ್ಸಿನಲ್ಲಿದ್ದ ಬೇಡ್ತಿ ಯೋಜನೆ ವಿರೋಧಿ ಭಾವನೆ ೧೯೮೩ರ ಹೊತ್ತಿಗೆ ಸ್ಪಷ್ಟ ರೂಪ ಪಡೆದುಕೊಂಡಿತು. ೧೯೮೩ರಲ್ಲಿ ಶಿರಸಿಯಲ್ಲಿ ಹಲವಾರು ಪರಿಸರ ಪ್ರೇಮಿಗಳು ಮತ್ತು ತಜ್ಞರನ್ನೊಳಗೊಂಡ ಬೇಡ್ತಿ ಯೋಜನೆ ವಿರೋಧಿ ಹಿನ್ನಲೆಯ ಪ್ರಪ್ರಥಮ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಿತು. ಬೇಡ್ತಿ ಯೋಜನೆಯನ್ನು ವಿರೋಧಿಸಿ ೯೦ರ ದಶಕದಲ್ಲಿ ಸೋಂದಾ ಸ್ವರ್ಣವಲ್ಲಿ ಮಠಾಧೀಶ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳ ನೇತೃತ್ವದಲ್ಲಿ ಸೋಂದಾದಿಂದ ಯಲ್ಲಾಪುರ ತಾಲೂಕಿನ ಮಾಗೋಡಿನವರೆಗೆ ಪಾದಯಾತ್ರೆಯೂ ನಡೆಯಿತು. ಭೈರುಂಬೆಯ ಕೆ.ಎಮ್.ಹೆಗಡೆಯಂತಹ ಪ್ರಗತಿಪರ ಕೃಷಿಕರ ಮುಂದಾಳತ್ವದಲ್ಲಿ ಬೇಡ್ತಿ ಯೋಜನೆಯನ್ನು ಪರಿಸರ ನಾಶವಾಗದಂತೆ ಕಾರ್ಯಗತಗೊಳಿಸುವ ಬಗೆ ಹೇಗೆ ಎಂಬ ಬಗ್ಗೆಯೂ ಚಿಂತನೆಗಳು ಪ್ರಾರಂಭವಾದವು.

೧೯೮೫ರಲ್ಲಿ ಪಶ್ಚಿಮ ಘಟ್ಟ ಉಳಿಸಿ ಆಂದೋಲನ ಪ್ರಾರಂಭವಾಯಿತು. ಗುಜರಾತ್, ಮಹಾರಾಷ್ಟ್ರ, ಕರ್ನಾಟಕ ಮತ್ತು ಕೇರಳದ ಜನರು ಈ ಆಂದೋಲನದ ಹೆಸರಿನಲ್ಲಿ ಪರಿಸರ ನಾಶದ ವಿರುದ್ಧ ಹೋರಾಡಲು ಒಂದಾದರು. ಜನರಲ್ಲಿ ಪರಿಸರ ನಾಶಕ್ಕೆ ಕಾರಣವಾಗುವ ಸರಕಾರಿ ಯೋಜನೆಗಳ ವಿರುದ್ಧದ ಆಕ್ರೋಶ ಹರಳುಗಟ್ಟಿತು. ಪರಿಣಾಮವಾಗಿ ೧೯೮೭-೮೮ರಲ್ಲಿ ಭಾರತದ ಭೂತಲ ಕನ್ಯಾಕುಮಾರಿಯಿಂದ ಗುಜರಾತಿನವರೆಗೆ 'ಪಶ್ಚಿಮ ಘಟ್ಟ ಉಳಿಸಿ' ಪಾದಯಾತ್ರೆ ನಡೆಯಿತು. ಅಸಂಖ್ಯ ಮಂದಿ ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಭಾಗವಹಿಸಿದರು.

ಇವೆಲ್ಲದರ ನಡುವೆ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಕೋಟದ ಶಿವಾರಾಮ ಕಾರಂತರು ಪರಿಸರಪರ ಹೋರಾಟದ ಪಣತೊಟ್ಟು ಚುನಾವಣಾ ಕಣಕ್ಕೆ ಧುಮುಕಿದರು. ಕೆನರಾ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿದರು. ಕಾರಂತರ ಸ್ಪರ್ಧೆ ಇಡೀ ದೇಶದ ಗಮನ ಸೆಳೆಯಿತು. ದೇಶದ ರಾಜಕೀಯ ಪಂಡಿತರು "ಕಾರಂತರ ಜಯ ನಿಶ್ಚಿತ" ಎಂದು ಷರಾ ಬರೆದರು. ಆದರೆ ದುರದೃಷ್ಟವಶಾತ್ ಕಾರಂತರು ಚುನಾವಣೆಯಲ್ಲಿ ಪರಾಭವಗೊಂಡರು.

ಇವೆಲ್ಲ ಘಟನೆಗಳು ಒಟ್ಟಾರೆಯಾಗಿ ದೇಶವನ್ನು ಪ್ರಭಾವಿಸಿದವು. ರಾಜ್ಯ ಸರಕಾರ ಅರಣ್ಯ ಮತ್ತು ಪರಿಸರ ಇಲಾಖೆಯನ್ನು ಹೊಸದಾಗಿ ಆರಂಭಿಸಿತು. ಪರಿಸರ ಸಂರಕ್ಷಣೆಯೇ ಇವುಗಳ ಪರಮ ಧ್ಯೇಯವಾಯಿತು. ವನಮಹೋತ್ಸವ ಕಾರ್ಯಕ್ರಮಗಳು ನಾಡಿನೆಲ್ಲೆಡೆ ಆರಂಭವಾದವು. ಜೀವವೈವಿಧ್ಯ ಸಂರಕ್ಷಣೆ ಮತ್ತು ಪರಿಸರ ಸಂರಕ್ಷಣಾ ಕಾನೂನು ಜಾರಿಯಾಯಿತು.

ಒಟ್ಟಾರೆಯಾಗಿ ರಾಷ್ಟ್ರದಾದ್ಯಂತ ಪರಿಸರ ಕಾಳಜಿ ಜಾಗೃತಗೊಳ್ಳಲು ಪಶ್ಚಿಮ ಘಟ್ಟ ಉಳಿಸಿ ಆಂದೋಲನ ಕಾರಣವಾಯಿತು.

ಕಾಮೆಂಟ್‌ಗಳು

ಮಿಥುನ ಕೊಡೆತ್ತೂರು ಹೇಳಿದ್ದಾರೆ…
ವಾಹ್, ಸಣ್ಣ ವಯಸ್ಸಿನಲ್ಲೇ ಭಲೇ ಅನ್ನುವಂತಹ ಬರೆಹಗಳು!
ಅಭಿನಂದನೆಗಳು.
ಅನಾಮಧೇಯಹೇಳಿದ್ದಾರೆ…
nice article brother.... i like your way of writing.........
Unknown ಹೇಳಿದ್ದಾರೆ…
nice article my son. I like it
ಅನಾಮಧೇಯಹೇಳಿದ್ದಾರೆ…
its really nice yar... i m very happy to read all your articles.... all are different...
-nidhi
ಅನಾಮಧೇಯಹೇಳಿದ್ದಾರೆ…
very nice...
ಇಂಥ ಚಳುವಳಿಗಳು ನಡೆದಿದ್ದೇ ಎಲ್ಲರಿಗು ಗೊತ್ತಿರಲ್ಲ..ಅದನ್ನು ತಿಳಿಸುವುದರಿಂದಾಗಿ ಚಳುವಳಿಗಾರರ ಪ್ರಯತ್ನಕ್ಕೆ ಇನಿತಾದರೂ ಸಫಲತೆ ದೊರಕಿಸಿದಂತಾದೀತು...
ನನಗಂತೂ ತುಂಬಾ ಹಿಡಿಸಿತು ಈ ಲೇಖನ..
VENU VINOD ಹೇಳಿದ್ದಾರೆ…
joshi,
informative piece of writing. thanks...
-venu

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಮರೆಯಲಾಗದ ಕಾಮತರು: ಮಾಧವರಾಯರ ಒಂದು ನೆನಪು!

ನಮ್ಮ ತಲೆಮಾರಿನ ಪತ್ರಕರ್ತರು ಕಂಡ 'ಪತ್ರಿಕಾ ರಂಗದ ಭೀಷ್ಮ'ನ ಬಗ್ಗೆ ಬರೆಯಬೇಕು ಅನಿಸುತ್ತಿದೆ. ಆ ಭೀಷ್ಮ ಯಾರು ಎಂಬ ಪ್ರಶ್ನೆ ಬೇಡ - ಅವರು ಮಾಧವ ವಿಠಲ ಕಾಮತ್ (ಎಂ.ವಿ. ಕಾಮತ್) ಅಲ್ಲದೆ ಬೇರೆ ಯಾರೂ ಅಲ್ಲ. ಅವರ ಬಗ್ಗೆಯೇ ಯಾಕೆ ಬರೆಯಬೇಕು ಅನಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರ ಇಲ್ಲ. ಆದರೆ ಎಂಬತ್ತು ವರ್ಷ ವಯಸ್ಸು ದಾಟಿದ ನಂತರವೂ ಎಳೆಯ ಯುವಕನಂತೆ ಕಾಣಿಸುತ್ತಿದ್ದ ಕಾಮತರ ಬಗ್ಗೆ ಬರೆಯಬೇಕು ಎಂದು ಹಲವು ದಿನಗಳಿಂದ ಅಂದುಕೊಳ್ಳುತ್ತಿದ್ದೆ ಎಂಬುದಂತೂ ನಿಜ. ನಾನು ಪದವಿ ವ್ಯಾಸಂಗ ಮಾಡುತ್ತಿದ್ದ ದಿನಗಳು ಅವು. ಒಂದು ದಿನ ದೂರವಾಣಿ ಕರೆ ಮಾಡಿದ ಹರೀಶ್ ಆದೂರು ಅವರು (ಆಗ ಹರೀಶ್ ಅವರು ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಮಂಗಳೂರು ಆವೃತ್ತಿಯಲ್ಲಿ ಕೆಲಸ ಮಾಡುತ್ತಿದ್ದರು), 'ಈ ವಾರದ ಅಂತ್ಯದಲ್ಲಿ ಮನೆಯಂಗಳದಲ್ಲಿ ಸಾಹಿತ್ಯ ಸಂಜೆ ಕಾರ್ಯಕ್ರಮ ಇದೆ. ನೀನೂ ಬಾ. ಅಲ್ಲಿ ನಿನಗೆ ನಾಲ್ಕು ಒಳ್ಳೆಯ ಮಾತುಗಳನ್ನು ಕೇಳುವ ಅವಕಾಶ ಸಿಗಬಹುದು' ಎಂದು ಆಹ್ವಾನ ನೀಡಿದರು. 'ಕಾರ್ಯಕ್ರಮದ ಅತಿಥಿ ಯಾರು' ಎಂದು ಪ್ರಶ್ನಿಸಿದೆ. 'ಎಂ.ವಿ. ಕಾಮತರು ಮಾರಾಯಾ' ಎಂದು ಉತ್ತರಿಸಿ ಫೋನ್ ಇಟ್ಟರು. ಶನಿವಾರ ಬಂತು. ಅಂದಿನ ತರಗತಿಗಳು ಮುಗಿದಿದ್ದವು. ಸರಿ, ಕಾಮತರ ಮಾತು ಕೇಳಿಸಿಕೊಳ್ಳುವ ಅವಕಾಶ ತಪ್ಪಿಸಿಕೊಳ್ಳಬಾರದು ಎಂಬ ಉದ್ದೇಶದಿಂದ ಮೂಡುಬಿದಿರೆ ಬಸ್‌ ಸ್ಟ್ಯಾಂಡ್‌ಗೆ ಹೋಗಿ, ಬೆಳ್ತಂಗಡಿ ಕಡೆ ಹೋಗುವ ಬಸ್ ಹತ್ತಿದೆ. ಜ

ಪತ್ರಿಕೋದ್ಯಮದ ವಿದ್ಯಾರ್ಥಿ ಮಿತ್ರರಿಗೆ...

ನಾನಿನ್ನೂ ಪತ್ರಿಕೋದ್ಯಮದ ವಿದ್ಯಾರ್ಥಿ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಇನ್ನೂ ಎರಡು ವರ್ಷ ಕಾಯಬೇಕು. ಪತ್ರಿಕೋದ್ಯಮದ ಜಂಜಡಗಳ ನೇರ ಅನುಭವವಿಲ್ಲ. ಪತ್ರಿಕಾರಂಗದಲ್ಲಿ ಎದುರಿಸಬೇಕಾಗಿರುವ ಸವಾಲುಗಳ ಬಗ್ಗೆ ಕೇಳಿ ಗೊತ್ತೆ ಹೊರತು ಸ್ವಲ್ಪವೂ ಅನುಭವಿಸಿ ಗೊತ್ತಿಲ್ಲ. ಹಾಗಾಗಿ ಈ ಹೊತ್ತಿನಲ್ಲಿ ಇಂಥ ಒಂದು ಲೇಖನವನ್ನು ಬರೆಯುವುದು ಸರಿಯೋ ತಪ್ಪೋ ಎಂಬ ಪ್ರಶ್ನೆ ನನ್ನನ್ನು ಹಲವು ಬಾರಿ ಕಾಡಿದೆ. ಆದರೂ ಈ ವಿಷಯವನ್ನು ನಿಮ್ಮ ಮುಂದೆ ಹೇಳಿಕೊಳ್ಳದಿದ್ದರೆ ಸಮಾಧಾನವಿಲ್ಲ ಅಂತ ಅನಿಸಿದ್ದರಿಂದ "ಬರೆಯಬೇಕು, ಬರೆಯುತ್ತೇನೆ" ಎಂದು ನಿರ್ಧರಿಸಿದ್ದೇನೆ. ರಾಜ್ಯದಲ್ಲಿ ಪತ್ರಿಕೋದ್ಯಮದಲ್ಲಿ ಪದವಿಯನ್ನು ನೀಡುವ ಹಲವಾರು ಕಾಲೇಜುಗಳು ಹುಟ್ಟಿಕೊಳ್ಳುತ್ತಿವೆ. ಹಲವಾರು ಪ್ರತಿಷ್ಠಿತ ಕಾಲೇಜುಗಳು ತಮ್ಮ ಮಾನವಿಕ ವಿಭಾಗದಲ್ಲಿ ಪತ್ರಿಕೋದ್ಯಮವನ್ನೂ ಒಂದು ಆಯ್ಕೆಯ ವಿಷಯವನ್ನಾಗಿ ಸೇರಿಸಿದ್ದಾರೆ. ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರಗಳಂತೆ ಪತ್ರಿಕೋದ್ಯಮವನ್ನೂ ಶಾಸ್ತ್ರೀಯವಾಗಿ ಓದುವ ಅವಕಾಶ ಇಂದಿನ ಯುವಕರಿಗೆ ಇದೆ. ಪತ್ರಿಕೋದ್ಯಮವನ್ನು ಇಷ್ಟೊಂದು ಶಾಸ್ತ್ರೀಯವಾಗಿ ಓದಿದ್ದರೂ ನಾವು ಕೆಲವೊಮ್ಮೆ ವರ್ತಿಸುತ್ತಿರುವ ರೀತಿ ಸ್ವಲ್ಪ ಬೇಸರ ಮೂಡಿಸುತ್ತಿದೆ. ಮೊನ್ನೆ ಪತ್ರಿಕೋದ್ಯಮ ಓದುತ್ತಿರುವ ನನ್ನ ಹಳೆಯ ಸ್ನೇಹಿತರೊಬ್ಬರ ಜೊತೆ ಮಾತನಾಡುತ್ತಿದ್ದಾಗ ಭಾರತೀಯ ಮೂಲದ ವಿಶ್ವದ ಶ್ರೇಷ್ಠ ಪತ್ರಿಕೆಯೊಂದರ ಬಗ್ಗೆ ಮಾತು ಬಂತು. ಸುಮಾರು ನ

ನವ ಮಾಧ್ಯಮ ಮುಂದಿಟ್ಟಿರುವ ಚುನಾವಣಾ ಸವಾಲು

ಮೂಡುಬಿದಿರೆಯ ಮಹಾಬಲ ಕೊಠಾರಿ  ಈ ಬಾರಿ ಜನ ಸಂಘರ್ಷ ಪಕ್ಷದಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿ ದ್ದಾರೆ. (ಕೊಠಾರಿ ಕಾಲ್ಪನಿಕ ವ್ಯಕ್ತಿ, ಅವರು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಎಂಬುದು ಕಾಲ್ಪನಿಕ ಸಂದರ್ಭ). ಕೊಠಾರಿ ಅವರು ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡುವವರಲ್ಲ. ಆದರೆ ಮತದಾನಕ್ಕೆ 48 ಗಂಟೆಗಳು ಬಾಕಿ ಇವೆ ಎನ್ನುವಾಗ, ಅವರನ್ನು ಸೋಲಿಸುವಂತೆ ಕೋರಿ ಫೇಸ್‌ಬುಕ್‍, ಟ್ವಿಟರ್‌ಗಳಲ್ಲಿ ಸಂದೇಶ ರವಾನೆ ಯಾಗಲು ಶುರುವಾಗುತ್ತದೆ. ಅದು ಸಹಸ್ರಾರು ಜನರನ್ನು ಏಕಕಾಲದಲ್ಲಿ ತಲುಪುತ್ತದೆ, ಬಹಿರಂಗ ಸಭೆ ಮೂಲಕ ಮತದಾರರಿಗೆ ಚುನಾವಣಾ ಸಂದೇಶ ನೀಡಿದಂತೆ. ಅವರನ್ನು ವೈಯಕ್ತಿಕವಾಗಿ ನಿಂದಿಸುವ ದೃಶ್ಯಾವಳಿಗಳು ಯೂಟ್ಯೂಬ್‍ ಮೂಲಕ ದ.ಕ. ಲೋಕಸಭಾ ಕ್ಷೇತ್ರದ  ಮತದಾರರನ್ನು ತಲುಪು ತ್ತವೆ. ಫೇಸ್‌ಬುಕ್‌ನ ನಕಲಿ ಖಾತೆಗಳ ಮೂಲಕ ಕೊಠಾರಿ ಅವರನ್ನು ಅಸಭ್ಯ ವಾಗಿ ನಿಂದಿಸಲಾಗು ತ್ತದೆ. ಕೊಠಾರಿ ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುತ್ತಾರೆ. ಹೀಗೆ ಮಾಡು ತ್ತಿರುವವರು ಯಾರು ಎಂಬುದನ್ನು ಪತ್ತೆ ಮಾಡಲು ಆಯೋಗ ಮುಂದಾಗುತ್ತದೆ. ಫೇಸ್‌ಬುಕ್‍ ನಕಲಿ ಖಾತೆಗಳು ಅಮೆರಿಕ ದಲ್ಲಿರುವ ವ್ಯಕ್ತಿಯೊಬ್ಬರ ನಿಯಂತ್ರಣದಲ್ಲಿವೆ, ಟ್ವಿಟರ್‍ ಖಾತೆಯನ್ನು ಮಲೇಷ್ಯದಲ್ಲಿರುವ ವ್ಯಕ್ತಿ ಯೊಬ್ಬರು ನಿರ್ವಹಿಸುತ್ತಿದ್ದಾರೆ, ಆಸ್ಟ್ರೇಲಿಯಾ ದಲ್ಲಿರುವ ವ್ಯಕ್ತಿಯೊಬ್ಬರು ತಮ್ಮ ಸ್ಮಾರ್ಟ್‌ಫೋನ್‍ ಬಳಸಿ ಕೊಠಾರಿ