(ಪರೀಕ್ಷೆ, ತಿರುಗಾಟ, ಅನಾರೋಗ್ಯ... ಹೀಗೆ ಹಲವಾರು ಕಾರಣಗಳಿಂದ ಬ್ಲಾಗಿನಲ್ಲಿ ಹಲವು ದಿನಗಳ ನಂತರ ಅಕ್ಷರಗಳನ್ನು ಕಟ್ಟುತ್ತಿದ್ದೇನೆ. ಇದೇನೂ ಲೇಖನವಲ್ಲ. ಸುಮ್ಮನೆ ಕುಳಿತುಕೊಂಡು ಬರೆದ - ಯಾರನ್ನೂ ನೇರವಾಗಿ ಉದ್ದೇಶಿಸಿರದ - ಒಂದು ಪುಟ್ಟ ಪತ್ರ. ಹೊಸ ಬರಹದೊಂದಿಗೆ ಮತ್ತೆ ಕೆಲವೇ ದಿನಗಳಲ್ಲಿ ಭೇಟಿಯಾಗೋಣ.) ಆತ್ಮೀಯ ಸ್ನೇಹಿತೆ... ಬರಹವನ್ನು ಮುಂದುವರೆಸುವದೋ ಬೇಡವೋ ಎನ್ನುವ ಪ್ರಶ್ನೆಯನ್ನಿಟ್ಟುಕೊಂಡು ನೀನು ನನಗೆ ಬರೆದ ಪತ್ರ ಓದಿದೆ. ಆ ಪತ್ರವನ್ನೇ ನಿನ್ನ ಬ್ಲಾಗಿನಲ್ಲಿ ಹಾಕಿದ್ದರೆ ಒಂದು ಒಳ್ಳೆಯ ಲೇಖನ ಆಗುತ್ತಿತ್ತು. ನಾನು ನಿನಗೆ support ಮಾಡ್ತಿ ಅಂತ ಬರೆದಿದ್ದೀಯಾ. ಧನ್ಯವಾದ ನೆನಪಿಟ್ಟುಕೊಂಡದ್ದಕ್ಕೆ! ಅದಿರಲಿ. ಒಂದು ವಿಷಯ ನೆನಪಿರಲಿ. ಯಾರೊಬ್ಬರ ಬರಹವೂ ಪರಿಪೂರ್ಣ ಅಲ್ಲ. ಪರಿಪಕ್ವವೂ ಅಲ್ಲ. ನನ್ನ ಬರಹ ಪರಿಪಕ್ವ ಅಂತ ಇವತ್ತಿನವರೆಗೆ ಯಾರೂ ಘೋಷಿಸಿಕೊಂಡಿಲ್ಲ. ಹಾಗೊಮ್ಮೆ ಯಾರಾದರೂ ಘೋಷಿಸಿಕೊಂಡರೆ ಅದು ಅಹಂಕಾರವಷ್ಟೆ. ನೀನು ಲಂಕೇಶ್, ಅಡಿಗರ ಉದಾಹರಣೆ ಕೊಟ್ಟಿದ್ದೀಯಾ. ಇದರರ್ಥ ನೀನು ಅವರ ಬರಹ ಓದುತ್ತಿದ್ದೀಯಾ ಎಂದಾಯಿತು. ಬಹಳ ಒಳ್ಳೆಯದು. ಅವರ ಬರಹಗಳಿಗೆ ದೊಡ್ಡ ಪ್ರಮಾಣದ ಓದುಗರಿದ್ದಾರೆ. ಹಾಗೆಯೇ ಲಂಕೇಶರ ಬರಹಗಳನ್ನು ಟೀಕಿಸುವ ಒಂದು ಬಣವೇ ಇದೆ. ಅಡಿಗರ ಬರಹವನ್ನೂ ಹಲವು ಮಂದಿ ಪ್ರಶ್ನಿಸಿದ್ದಾರೆ. ಇವರಿಬ್ಬರೇ ಅಲ್ಲ ಜಗತ್ತಿನ ಯಾವ ಬರಹಗಾರನ ಬರಹವೂ ಪ್ರಶ್ನಾತೀತವಲ್ಲ. ನನ್ನದು-ನಿನ್ನದೂ ಕೂಡ. ನೀನು ಬರೆದದ್ದನ್ನು ಹತ್ತು
ಆನೋ ಭದ್ರಾಃ ಕೃತವೋ ಯಂತು ವಿಶ್ವತ: