ಒಂದು ತಿಂಗಳಿಗೂ ಮಿಕ್ಕಿ ಮಾಡಿದ ಕೆಲಸವೊಂದು ಅಂತಿಮ ಹಂತಕ್ಕೆ ಬಂದಿದೆ. ಅದರ ಕೆಲಸದ ನಿಮಿತ್ತ ಮೊನ್ನೆ ಬೆಂಗಳೂರಿಗೆ ಹೋಗಿದ್ದೆ. ಮೂರು ದಿನ ಬೆಂಗಳೂರಲ್ಲಿದ್ದು ಮೊನ್ನೆ ಮಂಗಳವಾರ ಧರ್ಮಸ್ಥಳಕ್ಕೆ ಹೋಗುವ ಬಸ್ ಹತ್ತಿದೆ. ಬಸ್ ತನ್ನ ಪಯಣ ಆರಂಭಿಸಿತು. ಇನ್ನೂ ಬೆಂಗಳೂರನ್ನು ಬಸ್ಸು ಬಿಟ್ಟಿರಲಿಲ್ಲ. ಬಿಸಿಲು ತೀವ್ರವಾಗಿದ್ದ ಕಾರಣ ಬಾಯಾರಿಕೆ ಜೋರಾಗಿತ್ತು. ಬಸ್ಸು ಅದ್ಯಾವುದೋ ಸಿಗ್ನಲ್ಲಿನ ಬಳಿ ಬಂದು ನಿಂತಿತು. ಬಸ್ ನಿಂತ ಕೂಡಲೇ ಒಂದಿಷ್ಟು ಮಂದಿ ಹುಡುಗರು "ಮಜ್ಗೆ ಸಾರ್ ಮಜ್ಗೆ, ತಂಪು ಮಜ್ಗೆ" ಅಂತ ಕೂಗುತ್ತಾ ತಂಪಾದ ನಂದಿನಿ ಮಜ್ಜಿಗೆ ಪ್ಯಾಕೆಟ್ ಮಾರಲು ಬಸ್ಸನ್ನೇರಿದರು. ಅವರೆಲ್ಲರೂ ಹತ್ತರಿಂದ ಹದಿನಾಲ್ಕರ ನಡುವಿನ ವಯಸ್ಸಿನವರು. ನನಗೂ ಬಾಯಾರಿಕೆ ತೀವ್ರವಾಗಿದ್ದ ಕಾರಣ ಒಬ್ಬನನ್ನು ಕರೆದು "ಒಂದು ಪ್ಯಾಕ್ ಮಜ್ಜಿಗೆಗೆ ಎಷ್ಟು" ಅಂತ ಕೇಳಿದೆ. "ಏಳ್ರುಪಾಯ್ ಸಾರ್" ಅಂದ. "ಸರಿ, ಒಂದು ಪ್ಯಾಕ್ ಕೊಡು" ಅಂದೆ. ಒಂದು ಪ್ಯಾಕ್ ಮಜ್ಜಿಗೆಯನ್ನು ಅವನಿಂದ ಇಸಿದುಕೊಂಡು ಅವನಿಗೆ ಹತ್ತು ರೂಪಾಯಿ ನೋಟು ಕೊಟ್ಟೆ. ಆ ಹುಡುಗ "ಚಿಲ್ರೆ ಕೊಡಿ ಸಾರ್" ಎಂದ. ನನ್ನ ಬಳಿ ಏಳು ರೂಪಾಯಿ ಚಿಲ್ಲರೆ ಇರಲಿಲ್ಲ. "ಚಿಲ್ರೆ ಇಲ್ಲಪ್ಪಾ, ನೀನೇ ಕೊಡು" ಎಂದೆ. ಊಹೂಂ, ಆ ಹುಡುಗ ಎಷ್ಟೇ ತಡಕಾಡಿದರೂ ಅವನಿಗೆ ನನಗೆ ಕೊಡಲು ಬೇಕಾದ ಮೂರು ರೂಪಾಯಿ ಚಿಲ್ಲರೆ ಸಿಗಲಿಲ್ಲ. "ಏನ್ಮಾಡ್ಲಿ ಸಾರ್? ಚಿ
ಆನೋ ಭದ್ರಾಃ ಕೃತವೋ ಯಂತು ವಿಶ್ವತ: