ಅರವಿಂದ ಚೊಕ್ಕಾಡಿಯವರು ಮೂಡುಬಿದಿರೆಯಲ್ಲಿ ವಾಸಿಸುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸಾಂಸ್ಕೃತಿಕ ರಾಜಧಾನಿಯಂತಿರುವ ಮೂಡುಬಿದಿರೆಯಲ್ಲಿ ಇದ್ದುಕೊಂಡು ಇವರಷ್ಟು ಬರೆಯುತ್ತಿರುವವರು ಬಹುಷಃ ಮತ್ತಾರೂ ಇರಲಿಕ್ಕಿಲ್ಲ. ಚೊಕ್ಕಾಡಿಯವರು ನನ್ನಂತಹ ಸಾಮಾನ್ಯ ಓದುಗನೊಬ್ಬ ಒಂದು ವಾರಕ್ಕೆ ಓದಬಹುದಾದಷ್ಟನ್ನು ಒಂದು ವಾರದಲ್ಲಿ ತಾವು ಖುದ್ದು ಬರೆಯುತ್ತಾರೆ. ಅವರ ಓದಿನ ಮತ್ತು ಅರಿವಿನ ವ್ಯಾಪ್ತಿ ಅಷ್ಟಿದೆ. ಅದಿರಲಿ, ಈ ಬರಹದ ವಿಷಯ ಬೇರೆಯೇ ಇದೆ. ಪ್ರಜಾವಾಣಿ ಪತ್ರಿಕೆ ಕನ್ನಡ ಕರಾವಳಿಯಲ್ಲಿ ಸುಮಾರು ಹತ್ತು ವರ್ಷಗಳ ಹಿಂದೆಯೇ ತನ್ನ ಆವೃತ್ತಿಯನ್ನು ಆರಂಭಿಸಿದೆ. ೧೯೪೮ರಲ್ಲೇ ಆರಂಭವಾದ ಪ್ರಜಾವಾಣಿ ಕರಾವಳಿಯಲ್ಲಿ ಸ್ವತಂತ್ರ ಆವೃತ್ತಿಯನ್ನು ಆರಂಭಿಸಿದ್ದು ಸ್ವಲ್ಪ ತಡವಾಯಿತು ಅಂತಲೇ ಹೇಳಬಹುದು. ಹಾಗೆ ತಡವಾಗಿಯಾದರೂ ತನ್ನ ಆವೃತ್ತಿಯನ್ನು ಕರಾವಳಿಯಲ್ಲಿ ಆರಂಭಿಸಿದ ಪ್ರಜಾವಾಣಿ ತನ್ನ ಓದುಗರಿಗೆ ಕಳೆದ ಒಂದೂವರೆ ವರ್ಷಗಳಿಂದ ಕರಾವಳಿಯ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆಂದೇ ಮೀಸಲಾದ ’ಕರಾವಳಿ’ ಎಂಬ ಸುದ್ದಿ ಪುರವಣಿಯೊಂದ ವಾರದಲ್ಲಿ ಆರು ದಿನ ಕೊಡುತ್ತಿದೆ. ನಾಲ್ಕು ಪುಟದ ಈ ಪುರವಣಿಯಲ್ಲಿ ಕಡಲ ತಡಿಯ ಸಮೃದ್ಧ ಸುದ್ದಿ, ಸುದ್ದಿ ವಿಶ್ಲೇಷಣೆ ಇರುತ್ತದೆ. ಒಟ್ಟಿನಲ್ಲಿ ಓದಲು ಖುಷಿಕೊಡುವ ದೈನಿಕ ಪುರವಣಿ ಇದು. ಇದೇ ಪುರವಣಿಯಲ್ಲಿ ಪ್ರತಿ ಬುಧವಾರ ಅರವಿಂದ ಚೊಕ್ಕಾಡಿಯವರು ’ತೀರದ ತಲ್ಲಣ’ ಎಂಬ ಅಂಕಣವೊಂದನ್ನು ಕಳೆದೊಂದು
ಆನೋ ಭದ್ರಾಃ ಕೃತವೋ ಯಂತು ವಿಶ್ವತ: