ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಆಗಸ್ಟ್, 2009 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಕುಪ್ಪಳಿಯ ಸಾಂಗತ್ಯ

ಕುಪ್ಪಳಿಯಲ್ಲಿ ಮೊನ್ನೆ ತಾನೆ ಮುಕ್ತಾಯವಾದ ಎರಡು ದಿನಗಳ ಚಿತ್ರೋತ್ಸವದ ಬಗ್ಗೆ ನನ್ನ ನಾಲ್ಕು ಮಾತು ಬರೆಯೋಣ ಎಂದು ಕುಳಿತರೆ ಏನು ಬರೆಯುವುದು ಎಂಬ ಪ್ರಶ್ನೆ ಮತ್ತೆ ಮತ್ತೆ ಕಾಡುತ್ತಿದೆ. ಕಾರಣ; ಸಾಂಗತ್ಯ ತಂಡದವರು ಆಯೋಜಿಸಿದ ಚಿತ್ರೋತ್ಸವದ ಕೊನೆಯಲ್ಲಿ ಪ್ರದರ್ಶಿಸಿದ ಬಾಯ್ ಇನ್ ದಿ ಸ್ಟ್ರೈಪ್ಡ್ ಪಾಯ್ಜಾಮಾ ಚಿತ್ರದ ಗುಂಗಿನಿಂದ ಇನ್ನೂ ಹೊರಬರಲು ಆಗುತ್ತಿಲ್ಲ. ಅಷ್ಟೊಂದು ಮನಮುಟ್ಟುವ ಚಿತ್ರ ಅದು. ಜೂನ್ ನಲ್ಲಿ ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಮಂಗಳೂರು ಆವೃತ್ತಿಯಲ್ಲಿ ಇಂಟರ್ನ್‌ಶಿಪ್ ಮಾಡುತ್ತಿದ್ದಾಗ ಅಲ್ಲಿನ ಸಿಬ್ಬಂದಿ ಸಿಬಂತಿ ಪದ್ಮನಾಭ ಅವರು ಕುಪ್ಪಳಿಯಲ್ಲಿ ಸಾಂಗತ್ಯ ಬಳಗದವರು ನಡೆಸುವ ಚಿತ್ರೋತ್ಸವದ ಬಗ್ಗೆ ಹೇಳಿದ್ದರು. ಚಿತ್ರೋತ್ಸವಕ್ಕೆ ಬರಲು ಆಪ್ತ ಆಮಂತ್ರಣವನ್ನೂ ನೀಡಿದ್ದರು. ಆದರೂ ಮನಸ್ಸು ಮಾತ್ರ ಹೋಗಲೋ ಬೇಡವೋ ಎಂದು ಕಾಲಹರಣ ಮಾಡುತ್ತಿತ್ತು. ನೀನು ಸ್ನಾತಕೋತ್ತರ ಪತ್ರಿಕೋದ್ಯಮ ವಿದ್ಯಾರ್ಥಿಯಾಗಿದ್ದು, ತೃತೀಯ ಸೆಮಿಸ್ಟರ್ ಓದುತ್ತಿರುವವನಾಗಿದ್ದರೆ ಈ ಕಾರ್ಯಕ್ರಮಕ್ಕೆ ನೀನು ಕಡ್ಡಾಯವಾಗಿ ಬರಲೇಬೇಕು ಎಂದ ಸಿಬಂತಿ ಪದ್ಮನಾಭರ ಮಾತು ಮತ್ತು ಸಲಹೆ-ಚಿತ್ರೋತ್ಸವದಲ್ಲಿ ಬರುವಂತೆ ಮಾಡಿತು. ಆದರೂ ಚಿತ್ರೋತ್ಸವ ಹೇಗಾಗುತ್ತದೆಯೋ ಏನೋ, ಅಲ್ಲಿಗೆ ಯಾರ್ಯಾರು ಬರುತ್ತಾರೋ ಎಂಬ ಪ್ರಶ್ನೆಗಳೊಂದಿಗೆ ಕುಪ್ಪಳಿ ತಲುಪಿದ್ದೆ. ಆದರೆ ಈಗ ಯಾವ ಪ್ರಶ್ನೆಗಳು, ಯಾವ ಅನುಮಾನಗಳೂ ಉಳಿದಿಲ್ಲ. ಅಲ್ಲಿನ ವಾತಾವರಣ, ಬಳಗದವರ ಆತ್ಮೀಯತೆ, ಪ್ರದರ್ಶಿಸಿ