ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ನವೆಂಬರ್, 2009 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ನಿಷ್ಠೆಯೊಂದೇ ನಿರೀಕ್ಷೆ, ಪತ್ರಕರ್ತನಿಗೆಲ್ಲಿದೆ ರಕ್ಷೆ?

“ಇತ್ತೀಚೆಗೆ ನಡೆದ ಸಮೀಕ್ಷೆಯೊಂದರ ಪ್ರಕಾರ ಜನಸಾಮಾನ್ಯರ ದ್ವೇಷಕ್ಕೆ ಅತ್ಯಂತ ಹೆಚ್ಚು ಒಳಗಾಗಿರುವ ಮೂರು ವ್ಯಕ್ತಿಗಳೆಂದರೆ ರಾಜಕಾರಣಿಗಳು, ಪೋಲೀಸರು ಮತ್ತು ಪತ್ರಕರ್ತರು. ಪತ್ರಕರ್ತರು ಈಗ ಮೂರನೆಯ ಸ್ಥಾನದಲ್ಲಿರಬಹುದು. ಆದರೆ ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಪತ್ರಕರ್ತರು ಮೊದಲನೆಯ ಸ್ಥಾನವನ್ನು ಆಕ್ರಮಿಸುವ ದಿನ ಬಹಳ ದೂರವಿಲ್ಲ ಎಂದು ನನಗನಿಸುತ್ತದೆ.” ಯಾವಾಗಲೂ ಮಾಧ್ಯಮಗಳನ್ನು ತೆಗಳುವವರ ಒಂದು ದೊಡ್ಡ ಗುಂಪೇ ನಮ್ಮ ಸಮಾಜದಲ್ಲಿದೆ. ಅಂಥ ಗುಂಪಿಗೆ ಸೇರಿದ ವ್ಯಕ್ತಿಯೊಬ್ಬರು ಈ ಮೇಲಿನ ಮಾತನ್ನು ಹೇಳಿದ್ದರೆ ಅದನ್ನು ಅಲಕ್ಷಿಸಿಬಿಡಬಹುದಿತ್ತು. ಆದರೆ ಇತ್ತೀಚೆಗೆ ಮಾಧ್ಯಮದ ಹಿರಿಯ ವ್ಯಕ್ತಿಯೊಬ್ಬರು ಈ ರೀತಿ ಅಭಿಪ್ರಾಯಪಟ್ಟಿರುವುದರಿಂದ ಈ ಮಾತಿನ ಬಗ್ಗೆ ಗಂಭೀರವಾಗಿ ಪತ್ರಿಕೋದ್ಯಮದ ಬಗ್ಗೆ ಪ್ರೀತಿ ಇರುವ ಪ್ರತಿಯೊಬ್ಬರೂ ಆಲೋಚಿಸಬೇಕಾಗಿದೆ. ಆ ಹಿರಿಯರ ಬಗ್ಗೆ, ಅವರ ಮಾತಿನ ಬಗ್ಗೆ ಗೌರವ ಇಟ್ಟುಕೊಂಡೇ ನನ್ನ ಮುಂದಿನ ಬರೆಹವನ್ನು ಬೆಳೆಸುತ್ತಿದ್ದೇನೆ. ಭಾರತದ ಸಂವಿಧಾನದ ಪ್ರಕಾರ ನ್ಯಾಯಾಂಗ, ಶಾಸಕಾಂಗ ಮತ್ತು ಕಾರ್ಯಾಂಗ ಪ್ರಜಾಪ್ರಭುತ್ವದ ಮೂರು ಅಂಗಗಳು. ಸಂವಿಧಾನ ಇವೆಲ್ಲವಕ್ಕೂ ಮೇಲು. ಈ ಯಾವ ಅಂಗಗಳೂ ಸಂವಿಧಾನವನ್ನು ಮೀರಿ ಕೆಲಸ ಮಾಡುವಂತಿಲ್ಲ. ಹಾಗೆ ಯಾವುದೇ ಒಂದು ಅಂಗ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಕೆಲಸ ಮಾಡಲು ಹವಣಿಸಿದರೆ ಆ ಅಂಗಕ್ಕೆ ಲಗಾಮು ಹಾಕಲು ಬಲವಾದ, ಸ್ವತಂತ್ರವಾದ ನ್ಯಾಯಾಂಗ ನಮ್ಮಲ್ಲಿದೆ. ನೆನಪಿಡಿ ಎಲ್ಲಿಯೂ ಕೂ

ಪತ್ರಕರ್ತರ ಸಾಕ್ಷಿಪ್ರಜ್ಞೆ: ಪಿ. ಸಾಯಿನಾಥ್

ಪತ್ರಕರ್ತ ಪಿ ಸಾಯಿನಾಥ್ ಒಮ್ಮೆ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ಫೆಲೋಶಿಪ್‌ಗಾಗಿ ಅರ್ಜಿ ಹಾಕಿದ್ದರು. ಅದರ ಸಂದರ್ಶನಕ್ಕಾಗಿ ಕರೆಯೂ ಬಂತು. ಟೈಮ್ಸ್ ಪತ್ರಿಕೆಯ ಸಂಪಾದಕರುಗಳ ಮುಂದೆ ಕುಳಿತು ತನಗೆ ಫೆಲೋಶಿಪ್ ಸಿಕ್ಕರೆ ಏನೇನು ಮಾಡುತ್ತೇನೆ ಎಂಬುದನ್ನು ಸವಿವರವಾಗಿ ಹೇಳುತ್ತಿದ್ದರು. "ಇಂದಿನ ಪತ್ರಿಕೆಗಳು ದೇಶದ ಸಾಮಾಜಿಕ ವ್ಯವಸ್ಥೆಯ ಮೇಲ್ಭಾಗದಲ್ಲಿರುವ ಶೇಕಡಾ ೫ ರಷ್ಟು ಮಂದಿಯ ಬಗ್ಗೆ ಮಾತ್ರ ಬರೆಯುತ್ತಿವೆ, ನಾನು ಈ ದೇಶದ ಸಾಮಾಜಿಕ ವ್ಯವಸ್ಥೆಯ ಕೆಳಭಾಗದಲ್ಲಿರುವ ಶೇಕಡಾ ೫ ರಷ್ಟು ಮಂದಿಯ ಬಗ್ಗೆ ಬರೆಯುತ್ತೇನೆ" ಎಂದು ಅದಾಗಲೇ ತೀರ್ಮಾನಿಸಿದ್ದ ಪಿ ಸಾಯಿನಾಥ್ ಟೈಮ್ಸ್ ಧಣಿಗಳ ಮುಂದೆಯೂ ತಮಗಿರುವ ಗ್ರಾಮೀಣ ವರದಿಗಾರಿಕೆಯಲ್ಲಿನ ಆಸಕ್ತಿಯ ಕುರಿತು ಹೇಳಿದರು. ಆಗ ಟೈಮ್ಸ್‌ನ ಸಂಪಾದಕ ಮಹಾಶಯನೊಬ್ಬ "ನಮ್ಮ ಪತ್ರಿಕೆಯ ಓದುಗರಿಗೆ ನೀವು ಬರೆಯುವ ಗ್ರಾಮೀಣ ವರದಿಯ ಬಗ್ಗೆ ಏನೂ ಆಸಕ್ತಿ ಇಲ್ಲ, ಏನು ಮಾಡ್ತೀರಾ" ಎಂದು ಕೇಳಿದ. "ಓದುಗರಿಗೆ ಏನು ಬೇಕು, ಏನು ಬೇಡ ಎಂದು ಹೇಳಲು ನೀವು ನಿಮ್ಮ ಓದುಗರನ್ನು ಕೊನೆಯ ಬಾರಿ ಭೇಟಿಯಾಗಿದ್ದು ಯಾವಾಗ?" ಎಂದು ಕೂಡಲೇ ಮರುಪ್ರಶ್ನಿಸಿದರು ಸಾಯಿನಾಥ್. ಸಾಯಿನಾಥ್ ಪ್ರಶ್ನೆ ಅದೆಷ್ಟು ತೀಕ್ಷ್ಣವಾಗಿತ್ತೆಂದರೆ ಅವರಿಗೆ ಸಂದರ್ಶನಕಾರರಿಂದ ತಿರುಗಿ ಪ್ರಶ್ನೆಯೇ ಬರಲಿಲ್ಲ. ಅದಲ್ಲದೆ ಅವರಿಗೆ ಟೈಮ್ಸ್‌ನ ಫೆಲೋಶಿಪ್ ಕೂಡ ದೊರೆಯಿತು. ಪೇಜ್ ತ್ರಿ ಪತ್ರಿಕೋದ್ಯಮಕ್ಕೇ ಹೆಚ್ಚಿನ ಆದ್ಯತೆ