ಸಮಸ್ಯೆ ಯಾವುದೂ ಇರಬಹುದು , ಯಾರಿಗೂ ಬರಬಹುದು. ಒಂದು ಮಾಧ್ಯವಾಗಿ ಸಮಸ್ಯೆಗೆ ಎರಡು ರೀತಿಯಲ್ಲಿ ಸ್ಪಂದಿಸಲು ಸಾಧ್ಯ. ಒಂದು: ಆ ಸಮಸ್ಯೆಯಿಂದ ಬಾಧಿತರಾಗಿರುವವರ ನೋವಿಗೆ ದನಿಯಾಗಿ , ಅವರ ಬಗ್ಗೆ ಒಂದಿಷ್ಟು ಅನುಕಂಪ ತೋರಿಸಿ ನಂತರ ಸುಮ್ಮನಾಗುವುದು. ಇನ್ನೊಂದು: ನೋವಿಗೆ ದನಿಯಾಗುವುದು ಮತ್ತು ಅನುಕಂಪತೋರುವುದಕ್ಕಿಂತ ಮಿಗಿಲಾಗಿ , ಸಮಸ್ಯೆಗೆ ಸ್ಪಷ್ಟ ಪರಿಹಾರ ಸೂಚಿಸುವುದು. ಎರಡನೆಯ ಮಾದರಿಗೆ ಒಂದು ಅನನ್ಯ ಉದಾಹರಣೆ ಎಂದರೆ ಪುತ್ತೂರಿನ ಫಾರ್ಮರ್ ಫಸ್ಟ್ ಟ್ರಸ್ಟ್‌ನ ಅಡಿಕೆ ಪತ್ರಿಕೆ ಮತ್ತು ಅದರ ಕೃಷಿಕರ ಕೈಗೆ ಲೇಖನಿ ಕಾರ್ಯಕ್ರಮ. ಪತ್ರಿಕೆ ಆರಂಭವಾದದ್ದು ಹೀಗೆ: ಅದು ಎಂಭತ್ತರ ದಶಕದ ಮಧ್ಯಭಾಗ. ದಕ್ಷಿಣ ಕನ್ನಡ , ಉತ್ತರ ಕನ್ನಡ , ಶಿವಮೊಗ್ಗ ಜಿಲ್ಲೆಗಳ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಯ ಮಾರುಕಟ್ಟ ಧಾರಣೆ ತೀವ್ರವಾಗಿ ಕುಸಿದಿತ್ತು. ಅಸಂಖ್ಯ ಅಡಿಕೆ ಬೆಳೆಗಾರರ ಕುಟುಂಬಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಕಾಲ ಅದು. ಇಂಥ ಬಿಕ್ಕಟ್ಟಿನ ಸಂದರ್ಭದಲ್ಲಿ ಪುತ್ತೂರಿನಲ್ಲಿ ಕೇಂದ್ರ ಕಛೇರಿ ಹೊಂದಿರುವ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಅಡಿಕೆ ಕೃಷಿಕರನ್ನು ಸಂಕಷ್ಟದಿಂದ ಪಾರುಮಾಡಲು ಮತ್ತು ಅಡಿಕೆ ಕೃಷಿಯಲ್ಲಿ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಯೋಚಿಸಲಾರಂಭಿಸಿತು. ಇದೇ ಸಂದರ್ಭದಲ್ಲಿ (ಅಂದರೆ ೧೯೮೫-೮೬ರಲ್ಲಿ) ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಸ್ಥಾನವನ್ನು ವಾರಣಾಶಿ ಸುಬ್ರಾಯ ಭಟ್ಟರಿಂದ ಡಾ. ಪಿ ಕೆ ಎಸ್ ಭಟ್ ಪಾಣಾಜೆ ಇವ
ಆನೋ ಭದ್ರಾಃ ಕೃತವೋ ಯಂತು ವಿಶ್ವತ: