ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಅಕ್ಟೋಬರ್, 2010 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಪರಿಸರ ಸಂರಕ್ಷಣೆಯೇ ಅಭಿವೃದ್ಧಿಯಾಗಬಾರದೇ?

ಅಂಕೋಲಾ ಮತ್ತು ಹುಬ್ಬಳ್ಳಿ ನಡುವಿನ ರೈಲು ಮಾರ್ಗ ಕಾರ್ಯಗತಗೊಂಡರೆ ಆರ್ಥಿಕವಾಗಿ ಬಹಳ ಅನುಕೂಲವಾಗುತ್ತದೆ. ಸರಕು ಸಾಗಣೆ ಮತ್ತು ಪ್ರಯಾಣಿಕರ ಸಾಗಾಟದ ಅಮೂಲ್ಯ ವೇಳೆ ಮತ್ತು ಇಂಧನ ಉಳಿತಾಯವಾಗುತ್ತದೆ. ಆದರೆ ಈ ಯೋಜನೆ ಜಗತ್ತಿನ ಅತಿ ಸೂಕ್ಷ್ಮ ಜೀವ ವೈವಿಧ್ಯ ತಾಣಗಳಲ್ಲಿ ಒಂದಾಗಿರುವ ಪಶ್ಚಿಮ ಘಟ್ಟಕ್ಕೆ ಅಪಾರ ಪ್ರಮಾಣದ ಪೆಟ್ಟು ನೀಡುತ್ತದೆ. ಸಾವಿರಾರು ಎಕರೆ ನೈಸರ್ಗಿಕ ಅರಣ್ಯ ಇನ್ನಿಲ್ಲದಂತೆ ನಾಶವಾಗುತ್ತದೆ. ಉದ್ದೇಶಿತ ಗುಂಡ್ಯ ಜಲವಿದ್ಯುತ್ ಯೋಜನೆಯ ಕಥೆಯೂ ಇದೇ ಆಗಿದೆ. ಒಂದು ವೇಳೆ ಈ ಯೋಜನೆ ಕಾರ್ಯಗತಗೊಂಡರೆ 400 ಮೆಗಾವಾಟ್‌ನಷ್ಟು ವಿದ್ಯುತ್ ಉತ್ಪಾದನೆಯಾಗುವುದು ನಿಜವಾದರೂ ಸುಮಾರು 700 ಹೆಕ್ಟೇರ್‌ನಷ್ಟು ಅಮೂಲ್ಯ ಅರಣ್ಯ ಸಂಪತ್ತು ನಾಶವಾಗುತ್ತದೆ. ಅಲ್ಲಿರುವ ವನ್ಯಜೀವಿಗಳು, ಮಳೆಯ ಕಾಡುಗಳು ಶಾಶ್ವತವಾಗಿ ಕಣ್ಮರೆಯಾಗಲಿವೆ. ‘ಪರಿಸರ-ಅಭಿವೃದ್ಧಿ’ ಮೇಲಿನ ಚರ್ಚೆ ಇಂದು ನಿನ್ನೆಯದಲ್ಲ, ಯಾವುದೋ ಒಂದು ಪ್ರದೇಶಕ್ಕೆ ಸೀಮಿತವಾದದ್ದೂ ಅಲ್ಲ. ವಿಶ್ವದಾದ್ಯಂತ ಅಭಿವೃದ್ಧಿ ಯೋಜನೆಗಳ ಹೆಸರಿನಲ್ಲಿ ಅರಣ್ಯ ಸಂಪತ್ತು ನಾಶವಾಗಿದ್ದು ನಿಜ. ಅದೇ ರೀತಿ ಭಾರತದ ಬಹುಪಾಲು ಅಭಿವೃದ್ಧಿ ಯೋಜನೆಗಳು ಇಲ್ಲಿನ ಅರಣ್ಯ ನಾಶಕ್ಕೆ ಸಾಕಷ್ಟು ಕೊಡುಗೆ ನೀಡಿವೆ. ಹಾಗಂತ ಅರಣ್ಯವನ್ನು ನಾಶಮಾಡಬೇಕೆಂಬುದೇ ಅಭಿವೃದ್ಧಿ ಯೋಜನೆಗಳ ಉದ್ದೇಶವಾಗಿರುವುದಿಲ್ಲ. ನಾವು ಕೈಗೊಂಡ ಎಲ್ಲ ಅಭಿವೃದ್ಧಿ ಯೋಜನೆಗಳ ಹಿಂದೆಯೂ ಆರ್ಥಿಕ ಲಾಭದ ಉದ್ದೇಶವಿರುತ್ತದೆ

ಕನ್ನಡದ ಸಮಸ್ತ ಬರಹಗಾರರಿಗೆ...

ಆದರಪೂರ್ವಕ ನಮನಗಳು. ಕನ್ನಡ ಬರಹಗಾರರು ಅಂತ ನಾನು ಸಂಬೋಧಿಸಿದ್ದು ಪತ್ರಿಕೆ-ನಿಯತಕಾಲಿಕೆಗಳ ಮೂಲಕ, ಬ್ಲಾಗು/ವೆಬ್‌ಸೈಟುಗಳ ಮೂಲಕ, ಪುಸ್ತಕಗಳ ಮೂಲಕ ಕನ್ನಡದಲ್ಲಿ ಬರೆಯುತ್ತಿರುವ ಪ್ರತಿಯೊಬ್ಬ ಹಿರಿಕಿರಿಯ ಬರಹಗಾರರನ್ನು. ಒಂದು ಘಟನೆ ನೆನಪಿಗೆ ಬರುತ್ತಿದೆ. ಕನ್ನಡದ ಹೆಮ್ಮೆಯ ಬರಹಗಾರ ಪೂರ್ಣಚಂದ್ರ ತೇಜಸ್ವಿ ಅವರಿಗೆ ಸಂಬಂಧಿಸಿದ್ದು. ಹೊಸ ಸಹಸ್ರಮಾನವನ್ನು ವಿಭಿನ್ನ ರೀತಿಯಲ್ಲಿ ಸ್ವಾಗತಿಸಲೆಂದು ತೇಜಸ್ವಿ ‘ಮಿಲೆನಿಯಮ್’ ಸರಣಿ ಪುಸ್ತಕಗಳನ್ನು ಬರೆದರಷ್ಟೇ. ವಿಶ್ವದ ಅಸಂಖ್ಯ ಕೌತುಕಗಳನ್ನು, ವಿವಿಧ ನಾಗರೀಕತೆಗಳು ನಡೆಸಿದ ‘ಜೀವನ ಸಂಗ್ರಾಮ’ಗಳನ್ನು, ಪ್ರಪಂಚ ಕಂಡ ಮಹಾಯುದ್ಧಗಳನ್ನು ಕನ್ನಡದ ಮೂಲಕವೇ ಓದುಗರಿಗೆ ಪರಿಚಯಿಸುವ ವಿನೂತನ ಪ್ರಯತ್ನವದು. ಕನ್ನಡ ಪುಸ್ತಕಲೋಕ ಕಂಡ ಬಹಳ ವಿಶಿಷ್ಟ ಕೈಂಕರ್ಯ ತೇಜಸ್ವಿ ಮತ್ತು ಅವರ ಸಂಗಡಿಗರು ಹೊರತಂದ ಮಿಲೆನಿಯಮ್ ಸರಣಿ ಪುಸ್ತಕಗಳು. ತೇಜಸ್ವಿಯವರ ಈ ಪುಸ್ತಕ ಸರಣಿಯ ಪ್ರಕಟಣೆ ಆರಂಭವಾಗುತ್ತಿದ್ದಂತೆಯೇ ಒಂದು ವರ್ಗದಿಂದ ಕೂಗು ಆರಂಭವಾಯಿತು. ‘ತೇಜಸ್ವಿಯವರ ಸೃಜನಶೀಲ ಬರವಣಿಗೆ ಸತ್ತುಹೋಗುತ್ತಿದೆ’ ಎಂದು ಕೆಲವರು ವಾದಿಸತೊಡಗಿದರು. ಆದರೆ ಟೀಕೆಟಿಪ್ಪಣಿಗಳಿಗೆ ಸೊಪ್ಪು ಹಾಕದ ತೇಜಸ್ವಿ ತಮ್ಮ ಕಾಯಕ ಮುಂದುವರೆಸಿದರು; ಮಿಲೆನಿಯಮ್ ಸರಣಿಯ 16 ಪುಸ್ತಕಗಳನ್ನು ಕನ್ನಡಿಗರಿಗೆ ಕೊಟ್ಟರು. ಕನ್ನಡಿಗರಿಗೆ ವಿಶ್ವದರ್ಶನ ಮಾಡಿಸಿದ ಪುಣ್ಯ ಅವರದ್ದು. ಅಂದಹಾಗೆ, ಯಾವುದು ಸೃಜನಶೀಲ ಸಾಹಿತ್