ಮೊಹಾಲಿಯಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ಗೆಲುವು ಸಾಧಿಸಿದ್ದು ಕ್ರಿಕೆಟ್ ಆಟದಲ್ಲಾ? ಅಥವಾ ಯುದ್ಧದಲ್ಲಾ? ಮೊಹಾಲಿಯಲ್ಲಿ ನಡೆದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ಎದುರು ಭಾರತ ತಂಡ ಪಂದ್ಯ ಗೆದ್ದ ನಂತರ ಕ್ರಿಕೆಟ್ ಪ್ರೇಮಿಗಳು ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿ ಸಂಭ್ರಮಿಸಿದ ಪರಿ ನೋಡಿದರೆ, ಭಾರತ ಗೆಲುವು ಸಾಧಿಸಿದ್ದು ಕ್ರಿಕೆಟ್ ಪಂದ್ಯವೊಂದರಲ್ಲಿ ಅಲ್ಲ; ಅದಕ್ಕಿಂತಲೂ ಮಿಗಿಲಾದ ಸ್ಪರ್ಧೆಯೊಂದರಲ್ಲಿ ಎಂಬ ಭಾವನೆ ಮೂಡುತ್ತಿತ್ತು. ‘ಯುವಜನತೆಯಲ್ಲಿ ದೇಶದ ಬಗ್ಗೆ ಗೌರವ ಇಲ್ಲ, ದೇಶಭಕ್ತಿಯೇ ಇಲ್ಲ’ ಎಂಬಂತಹ ಗೊಣಗಾಟಗಳಿಗೆ ಉತ್ತರ ಎಂಬಂತಿತ್ತು ಅಂದಿನ ಸಂಭ್ರಮಾಚರಣೆ. ಹಾಗಾದರೆ ಯುವಕರ ದೇಶಪ್ರೇಮ ಎಂದರೆ ಪಾಕಿಸ್ತಾನದ ವಿರುದ್ಧ ಕ್ರಿಕೆಟ್ ಪಂದ್ಯದಲ್ಲಿ ಗೆಲುವು ಸಾಧಿಸಿದಾಗ ಮಾತ್ರ ಉಕ್ಕಿಬರುವಂಥದ್ದಾ? ಬೇರೆ ದೇಶಗಳ ವಿರುದ್ಧ ಭಾರತ ಜಯಗಳಿಸಿದಾಗ ಈ ಪರಿಯ ಖುಷಿ ಏಕಿರುವುದಿಲ್ಲ? ವಿಶ್ವದ ಶ್ರೇಷ್ಠ ಕ್ರಿಕೆಟ್ ತಂಡಗಳಾದ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ವಿರುದ್ಧದ ಪಂದ್ಯಗಳಲ್ಲಿ ಭಾರತ ಗೆದ್ದಾಗ ಈ ಪರಿಯ ದೇಶಪ್ರೇಮ ಎಲ್ಲಿ ಅಡಗಿರುತ್ತದೆ? ಸಚಿನ್ ತೆಂಡೂಲ್ಕರ್ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ೮೫ ರನ್ ಸಿಡಿಸಿದಾಗ ನಮ್ಮಲ್ಲಿ ಉಕ್ಕಿ ಬರುವ ಭಾವನೆಗಳು ಅದೇ ‘ಕ್ರಿಕೆಟ್ ದೇವತೆ’ ಇಂಗ್ಲೆಂಡ್ ವಿರುದ್ಧ ಶತಕ ಸಿಡಿಸಿದಾಗ ಏಕೆ ಸ್ಫುರಿಸುವುದಿಲ್ಲ? ಎಂಬ ಪ್ರಶ್ನೆಗಳೂ ಹಿರಿಯರಿಂದ ಸಹಜವಾಗಿಯೇ ಬಂದವು. ನಿಜ, ಪಾಕಿಸ್ತಾನದ ವಿರು
ಆನೋ ಭದ್ರಾಃ ಕೃತವೋ ಯಂತು ವಿಶ್ವತ: