ಮೂಡುಬಿದಿರೆಯ ಮಹಾಬಲ ಕೊಠಾರಿ ಈ ಬಾರಿ ಜನ ಸಂಘರ್ಷ ಪಕ್ಷದಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿ ದ್ದಾರೆ. (ಕೊಠಾರಿ ಕಾಲ್ಪನಿಕ ವ್ಯಕ್ತಿ, ಅವರು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಎಂಬುದು ಕಾಲ್ಪನಿಕ ಸಂದರ್ಭ). ಕೊಠಾರಿ ಅವರು ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡುವವರಲ್ಲ. ಆದರೆ ಮತದಾನಕ್ಕೆ 48 ಗಂಟೆಗಳು ಬಾಕಿ ಇವೆ ಎನ್ನುವಾಗ, ಅವರನ್ನು ಸೋಲಿಸುವಂತೆ ಕೋರಿ ಫೇಸ್‌ಬುಕ್, ಟ್ವಿಟರ್‌ಗಳಲ್ಲಿ ಸಂದೇಶ ರವಾನೆ ಯಾಗಲು ಶುರುವಾಗುತ್ತದೆ. ಅದು ಸಹಸ್ರಾರು ಜನರನ್ನು ಏಕಕಾಲದಲ್ಲಿ ತಲುಪುತ್ತದೆ, ಬಹಿರಂಗ ಸಭೆ ಮೂಲಕ ಮತದಾರರಿಗೆ ಚುನಾವಣಾ ಸಂದೇಶ ನೀಡಿದಂತೆ. ಅವರನ್ನು ವೈಯಕ್ತಿಕವಾಗಿ ನಿಂದಿಸುವ ದೃಶ್ಯಾವಳಿಗಳು ಯೂಟ್ಯೂಬ್ ಮೂಲಕ ದ.ಕ. ಲೋಕಸಭಾ ಕ್ಷೇತ್ರದ ಮತದಾರರನ್ನು ತಲುಪು ತ್ತವೆ. ಫೇಸ್‌ಬುಕ್‌ನ ನಕಲಿ ಖಾತೆಗಳ ಮೂಲಕ ಕೊಠಾರಿ ಅವರನ್ನು ಅಸಭ್ಯ ವಾಗಿ ನಿಂದಿಸಲಾಗು ತ್ತದೆ. ಕೊಠಾರಿ ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುತ್ತಾರೆ. ಹೀಗೆ ಮಾಡು ತ್ತಿರುವವರು ಯಾರು ಎಂಬುದನ್ನು ಪತ್ತೆ ಮಾಡಲು ಆಯೋಗ ಮುಂದಾಗುತ್ತದೆ. ಫೇಸ್‌ಬುಕ್ ನಕಲಿ ಖಾತೆಗಳು ಅಮೆರಿಕ ದಲ್ಲಿರುವ ವ್ಯಕ್ತಿಯೊಬ್ಬರ ನಿಯಂತ್ರಣದಲ್ಲಿವೆ, ಟ್ವಿಟರ್ ಖಾತೆಯನ್ನು ಮಲೇಷ್ಯದಲ್ಲಿರುವ ವ್ಯಕ್ತಿ ಯೊಬ್ಬರು ನಿರ್ವಹಿಸುತ್ತಿದ್ದಾರೆ, ಆಸ್ಟ್ರೇಲಿಯಾ ದಲ್ಲಿರುವ ವ್ಯಕ್ತಿಯೊಬ್ಬರು ತಮ್ಮ ಸ್ಮಾರ್ಟ್‌ಫೋನ್ ಬಳಸ...
ಆನೋ ಭದ್ರಾಃ ಕೃತವೋ ಯಂತು ವಿಶ್ವತ: