ನಮ್ಮ ತಲೆಮಾರಿನ ಪತ್ರಕರ್ತರು ಕಂಡ 'ಪತ್ರಿಕಾ ರಂಗದ ಭೀಷ್ಮ'ನ ಬಗ್ಗೆ ಬರೆಯಬೇಕು ಅನಿಸುತ್ತಿದೆ. ಆ ಭೀಷ್ಮ ಯಾರು ಎಂಬ ಪ್ರಶ್ನೆ ಬೇಡ - ಅವರು ಮಾಧವ ವಿಠಲ ಕಾಮತ್ (ಎಂ.ವಿ. ಕಾಮತ್) ಅಲ್ಲದೆ ಬೇರೆ ಯಾರೂ ಅಲ್ಲ. ಅವರ ಬಗ್ಗೆಯೇ ಯಾಕೆ ಬರೆಯಬೇಕು ಅನಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರ ಇಲ್ಲ. ಆದರೆ ಎಂಬತ್ತು ವರ್ಷ ವಯಸ್ಸು ದಾಟಿದ ನಂತರವೂ ಎಳೆಯ ಯುವಕನಂತೆ ಕಾಣಿಸುತ್ತಿದ್ದ ಕಾಮತರ ಬಗ್ಗೆ ಬರೆಯಬೇಕು ಎಂದು ಹಲವು ದಿನಗಳಿಂದ ಅಂದುಕೊಳ್ಳುತ್ತಿದ್ದೆ ಎಂಬುದಂತೂ ನಿಜ. ನಾನು ಪದವಿ ವ್ಯಾಸಂಗ ಮಾಡುತ್ತಿದ್ದ ದಿನಗಳು ಅವು. ಒಂದು ದಿನ ದೂರವಾಣಿ ಕರೆ ಮಾಡಿದ ಹರೀಶ್ ಆದೂರು ಅವರು (ಆಗ ಹರೀಶ್ ಅವರು ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಮಂಗಳೂರು ಆವೃತ್ತಿಯಲ್ಲಿ ಕೆಲಸ ಮಾಡುತ್ತಿದ್ದರು), 'ಈ ವಾರದ ಅಂತ್ಯದಲ್ಲಿ ಮನೆಯಂಗಳದಲ್ಲಿ ಸಾಹಿತ್ಯ ಸಂಜೆ ಕಾರ್ಯಕ್ರಮ ಇದೆ. ನೀನೂ ಬಾ. ಅಲ್ಲಿ ನಿನಗೆ ನಾಲ್ಕು ಒಳ್ಳೆಯ ಮಾತುಗಳನ್ನು ಕೇಳುವ ಅವಕಾಶ ಸಿಗಬಹುದು' ಎಂದು ಆಹ್ವಾನ ನೀಡಿದರು. 'ಕಾರ್ಯಕ್ರಮದ ಅತಿಥಿ ಯಾರು' ಎಂದು ಪ್ರಶ್ನಿಸಿದೆ. 'ಎಂ.ವಿ. ಕಾಮತರು ಮಾರಾಯಾ' ಎಂದು ಉತ್ತರಿಸಿ ಫೋನ್ ಇಟ್ಟರು. ಶನಿವಾರ ಬಂತು. ಅಂದಿನ ತರಗತಿಗಳು ಮುಗಿದಿದ್ದವು. ಸರಿ, ಕಾಮತರ ಮಾತು ಕೇಳಿಸಿಕೊಳ್ಳುವ ಅವಕಾಶ ತಪ್ಪಿಸಿಕೊಳ್ಳಬಾರದು ಎಂಬ ಉದ್ದೇಶದಿಂದ ಮೂಡುಬಿದಿರೆ ಬಸ್ ಸ್ಟ್ಯಾಂಡ್‌ಗೆ ಹೋಗಿ, ಬೆಳ್ತಂಗಡಿ ಕಡೆ ಹೋಗುವ ಬಸ್ ಹತ್ತಿದೆ. ಜ
ಆನೋ ಭದ್ರಾಃ ಕೃತವೋ ಯಂತು ವಿಶ್ವತ: