ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಸಂದರ್ಶನ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

"ಪ್ರತಿಭಟನೆ, ಬಂದ್‌ನ ಆಚೆಗೂ ವಿದ್ಯಾರ್ಥಿ ಪರಿಷತ್ ಕೆಲಸ ಮಾಡುತ್ತಿದೆ"

ಅಕ್ಟೋಬರ್ ೯ ರಿಂದ ೧೧ರವರೆಗೆ ಬಳ್ಳಾರಿಯ ರಾಘವ ಕಲಾಮಂದಿರಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಯೋಜಿಸಿದ್ದ ’ರಂಗತೋರಣ’ ವಿದ್ಯಾರ್ಥಿ ನಾಟಕೋತ್ಸವ ಬಹಳ ಅದ್ದೂರಿಯಾಗಿ ನಡೆಯಿತು. ನಾಟಕೋತ್ಸವದಲ್ಲಿ ಸ್ಪರ್ಧಿಸಿದ್ದ ಸುಮಾರು ೨೭ ನಾಟಕಗಳ ಪೈಕಿ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಮ್‌ಬಿಅ ಕಾಲೇಜಿನ ವಿದ್ಯಾರ್ಥಿಗಳು ಆಡಿದ ’ನಾನು ಮತ್ತು ನಾಳೆ’ ನಾಟಕ ಪ್ರಥಮ ಬಹುಮಾನ ಪಡೆದುಕೊಂಡಿತು. ೨೦೦೩ನೆಯ ಇಸವಿಯಲ್ಲಿ ಪ್ರಾರಂಭಗೊಂಡ ಈ ನಾಟಕೋತ್ಸವಕ್ಕೆ ಈ ಬಾರಿ ಐದರ ಹರೆಯ. ಇಡೀ ನಾಟಕೋತ್ಸವದ ರೂವಾರಿ, ನಾಟಕೋತ್ಸವದುದ್ದಕ್ಕೂ ಪಾದರಸದಂತೆ ಓಡಾಡುತ್ತಾ ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರನ್ನು ಪ್ರತಿ ನಿಮಿಷವೂ ಹುರಿದುಂಬಿಸುತ್ತಿದ್ದ ಪ್ರೊ. ಭೀಮಸೇನ್ ಅವರ ಜೊತೆ ಆಡಿದ ಎರಡು ಮಾತುಗಳು ಇಲ್ಲಿವೆ. ***** ಎಬಿವಿಪಿಯವರು ಎಂದರೆ ಕೇವಲ ಬಂದ್ ಮಾಡುವವರು, ಪ್ರತಿಭಟನೆ ಮಾಡುವವರು ಎಂಬೆಲ್ಲಾ ನಕಾರಾತ್ಮಕ ಹಣೆಪಟ್ಟಿಗಳಿದ್ದರೂ ವಿದ್ಯಾರ್ಥಿ ಪರಿಷತ್ತಿನವರು ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಹೊರತೆಗೆಯುವತ್ತ ಮಾಡುತ್ತಿರುವ ಕೆಲಸದ ಕೆಲವು ಝಲಕ್ ಕೂಡ ಇಲ್ಲಿದೆ. ***** "ಇದು ನಮ್ಮ ಐದನೆಯ ವರ್ಷದ ರಂಗತೋರಣ. ಈ ನಾಟಕೋತ್ಸವವನ್ನು ಆರಂಭಸಲು ಸಾಕಷ್ಟು ಕಾರಣಗಳಿವೆ. ಸಾಮಾನ್ಯವಾಗಿ ಎಬಿವಿಪಿಯ ಹುಡುಗರು ಎಂದರೆ ಬಂದ್ ಮಾಡುವವರು, ಗಲಾಟೆ ಮಾಡುವವರು, ಪ್ರತಿಭಟನೆ ಮಾಡುವವರು ಎಂಬೆಲ್ಲಾ ಹಣೆಪಟ್ಟಿಗಳಿವೆ. ಆದರೆ ಬಂದ್, ಪ್ರತಿಭಟನ...

ಕನ್ನಡದ ನೆಲದಿಂದಲೇ...

(ನುಡಿಸಿರಿ - ೨೦೦೭ ರ ಸಂದರ್ಭದಲ್ಲಿ ಕನ್ನಡದ ವಾರಪತ್ರಿಕೆಯೊಂದರಲ್ಲಿ ಪ್ರಕಟವಾಗಿದ್ದ ನುಡಿಸಿರಿಯ ರೂವಾರಿ ಡಾ. ಮೋಹನ್ ಆಳ್ವರ ಸಂದರ್ಶನ. ’ನುಡಿಸಿರಿ - ೨೦೦೭’ ಮುಗಿದು ಹಲವು ತಿಂಗಳುಗಳೇ ಕಳೆದಿರಬಹುದು. ಆದರೆ ಆಳ್ವರು ಸಂದರ್ಶನದಲ್ಲಿ ತಿಳಿಸಿದ ವಿಚಾರಗಳು ಯಾವತ್ತಿಗೂ ವಿಚಾರಯೋಗ್ಯ.) ಕನ್ನಡ ನಾಡಿನಲ್ಲಿ ಸಾಹಿತ್ಯ, ಸಂಸ್ಕೃತಿಗಳ ಬಗ್ಗೆ ಪ್ರೀತಿ ಅಭಿಮಾನ ಇರುವವರಿಗೇನೂ ಕೊರತೆಯಿಲ್ಲ. ಪ್ರತಿ ಹಳ್ಳಿಯಲ್ಲೂ ಅಂಥವರಿದ್ದಾರೆ. ಆ ಬಗ್ಗೆ ಅನುಮಾನ ಬೇಡ. ಆದರೆ, ಸಾಮಾನ್ಯವಾಗಿ, ಸಾಹಿತ್ಯದ ಬಗ್ಗೆ ಅಪಾರವಾದ ಆಸಕ್ತಿಯಿರುವ ಜನರ ಬಳಿ ಸಾಕಷ್ಟು ಹಣ ಇರುವುದಿಲ್ಲ. ಇನ್ನು ಸಾಕಷ್ಟು ಹಣ ಇರುವವರ ಬಳಿ ನುಡಿಸಿರಿಯಂತಹ ಭವ್ಯ ಕಾರ್ಯಕ್ರಮವನ್ನು ನಡೆಸುವ ಆಸಕ್ತಿಯಿರುವುದಿಲ್ಲ. ಆದರೆ ಆಳ್ವಾಸ್ ನುಡಿಸಿರಿಯ ರೂವಾರಿ ಡಾ. ಮೋಹನ್ ಆಳ್ವ ಮಾತ್ರ ಈ ಮಾತಿಗೆ ಅಪವಾದ. ಅವರಲ್ಲಿ ಕನ್ನಡ ನಾಡು-ನುಡಿಯ ಕುರಿತು ಅಪಾರವಾದ ಪ್ರೀತಿಯಿದೆ. ಕಳಕಳಿಯಿದೆ. ಜೊತೆಗೆ ನುಡಿಸಿರಿಯಂತಹ ಅನುಪಮ ಕಾರ್ಯಕ್ರಮವನ್ನು ನಡೆಸಲು ಬೇಕಾದ ಆರ್ಥಿಕ ಸಂಪನ್ಮೂಲ ಮತ್ತು ಮಾನವ ಸಂಪನ್ಮೂಲವೂ ಇದೆ. ಇವೆಲ್ಲದಕ್ಕಿಂತ ಮಿಗಿಲಾಗಿ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಕಾರ್ಯಕ್ರಮಗಳನ್ನು ತಪಸ್ಸಿನಂತೆ ನಡೆಸಿಕೊಂಡು ಬರುವ ಶ್ರದ್ಧೆಯಿದೆ. ಆಳ್ವಾಸ್ ನುಡಿಸಿರಿಯನ್ನು ವರ್ಷವರ್ಷವೂ ನಡೆಸುವುದರ ಹಿಂದಿರುವ ಪ್ರೇರಣೆಯ ಕುರಿತು ’ವಿರಾಟ್’ ಡಾ. ಆಳ್ವರನ್ನು ಪ್ರಶ್ನಿಸಿತು: ವಿರಾಟ್: ನಿಮಗೆ ನುಡಿಸಿರಿಯಂತಹ ಸಾ...