ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಜಾತ್ಯತೀತತೆಯಲ್ಲಿ ಭಾರತೀಯತೆ

ನಾನು ಸಮಾಜಶಾಸ್ತ್ರವನ್ನಾಗಲಿ ಅಥವಾ ರಾಜನೀತಿಯನ್ನಾಗಲಿ ಶಾಸ್ತ್ರೀಯವಾಗಿ ಓದಿಲ್ಲ. ಬಹುಷ: ಅವುಗಳನ್ನು ಶಾಸ್ತ್ರೀಯವಾಗಿ ಓದುವುದು ನನ್ನಿಂದ ಸಾಧ್ಯವೂ ಇಲ್ಲ. ಆದರೆ ದಿನಂಪ್ರತಿ ಒಂದೆರಡು ಪತ್ರಿಕೆಗಳನ್ನು ಓದುವ ಕಾರಣದಿಂದ ಭಾರತೀಯ ಸಮಾಜ ಮತ್ತು ಭಾರತದ ರಾಜಕಾರಣದ ಬಗ್ಗೆ ಸ್ವಲ್ಪ ತಿಳುವಳಿಕೆ ಇದೆ. ("ಇದೆ" ಅಂತ ಗಟ್ಟಿ ಧ್ವನಿಯಲ್ಲಿ ಹೇಳಿಕೊಳ್ಳುವುದು ಅಹಂಕಾರವಾಗಬಹುದು.) ವಿದ್ವಾಂಸರು ರಾಜನೀತಿಯ ಬಗ್ಗೆಯಾಗಲಿ ಅಥವಾ ಸಮಾಜಶಾಸ್ತ್ರದ ಬಗ್ಗೆಯಾಗಲಿ ಬರೆದ ಯಾವ ಪುಸ್ತಕವನ್ನೂ ನಾನು ಓದಿಲ್ಲ. ಆದರೂ ಭಾರತದ ರಾಜಕಾರಣಿಯ ಮತ್ತು ಒಬ್ಬ ಸಾಮಾನ್ಯ ಭಾರತೀಯನ ಮನಸ್ಥಿತಿಯನ್ನು ತಕ್ಕ ಮಟ್ಟಿಗೆ ಅರ್ಥಮಾಡಿಕೊಳ್ಳಬಲ್ಲೆ. ಚುನಾವಣೆಗಳು ಎದುರಾದಾಗ ಬಿಜೆಪಿಯ ಪ್ರಧಾನ ಕಛೇರಿಯಿಂದ ಯಾವ ತರಹದ ಹೇಳಿಕೆಗಳು ಹೊರಡಬಹುದು ಮತ್ತು ಅದಕ್ಕೆ ಕಾಂಗ್ರೆಸ್ಸಿಗರ ಪ್ರತಿಕ್ರಿಯೆಗಳು ಹೇಗಿರಬಹುದು ಎನ್ನುವುದನ್ನೂ ತಕ್ಕಮಟ್ಟಿಗೆ ಊಹಿಸುವುದು ಸಾಧ್ಯ. ಭಾರತದ ಯಾವ ರಾಜಕಾರಣಿಯೇ ಇರಲಿ, ಮತ ಕೇಳುವ ಅವಕಾಶ ಸಿಕ್ಕಾಗಲೆಲ್ಲ 'ಜಾತ್ಯತೀತತೆ' ಎಂಬ ಅದ್ಭುತವಾದ ಪದವೊಂದನ್ನು ತನ್ನ ಚುನಾವಣಾ ಭಾಷಣದಲ್ಲಿ ಖಂಡಿತವಾಗಿಯೂ ಉಪಯೋಗಿಸುತ್ತಾನೆ. ರಾಜಕಾರಣಿಗಳು ಜಾತ್ಯತೀತತೆ ಎಂಬ ಪದವನ್ನು ಉಪಯೋಗಿಸಿಕೊಂಡು ಜನರ ಬಳಿ ಮತ ಕೇಳುವುದನ್ನು ನನ್ನ ಬಾಲ್ಯದಿಂದಲೂ ನೋಡುತ್ತಿದ್ದೇನೆ. ಭಾರತದ ಹೆಚ್ಚಿನ ರಾಜಕಾರಣಿಗಳು ಅವಕಾಶ ಸಿಕ್ಕಾಗಲೆಲ್ಲ ತಾವೊಬ್ಬರೇ ಜಾತ್ಯತೀತತೆಯ ನಿಜವಾದ ರ...

ಆತ್ಮಹತ್ಯೆಯ ಬಗ್ಗೆ ಯೋಚಿಸುತ್ತಿದ್ದೇನೆ!

ದೇವರಾಣೆಗೂ ಹೌದು ನಾನು ಆತ್ಮಹತ್ಯೆಯ ಬಗ್ಗೆಯೇ ಯೋಚಿಸುತ್ತಿದ್ದೇನೆ. ಇದು ಭಾರತೀಯ ಕಾನೂನಿನ ಪ್ರಕಾರ ತಪ್ಪು ಅಂತ ಚೆನ್ನಾಗಿ ಗೊತ್ತು. ಆತ್ಮಹತ್ಯೆಗೆ ಯತ್ನಿಸಿ ಒಂದು ವೇಳೆ ಅದರಲ್ಲಿ ಸಫಲನಾಗದಿದ್ದರೆ ಭಾರತೀಯ ದಂಡಸಂಹಿತೆಯ ಪ್ರಕಾರ ಆತ್ಮಹತ್ಯೆಗೆ ಪ್ರಯತ್ನಿಸಿದ ವ್ಯಕ್ತಿಯ ಮೇಲೆ ಕೇಸು ಹಾಕಬಹುದು, ನ್ಯಾಯಾಲಯದಲ್ಲಿ ಪ್ರಕರಣ ಸಾಬೀತಾದರೆ ಆ ವ್ಯಕ್ತಿಗೆ ಶಿಕ್ಷೆಯನ್ನೂ ವಿಧಿಸಬಹುದು ಅಂತಲೂ ಗೊತ್ತಿದೆ. ಅದಲ್ಲದೆ, ಇನ್ನೊಬ್ಬ ವ್ಯಕ್ತಿಯನ್ನು ಆತ್ಮಹತ್ಯೆಗೆ ಪ್ರಚೋದಿಸುವುದು ಕೂಡ ಕಾನೂನಿನ ಪ್ರಕಾರ ಮತ್ತು ನೈತಿಕ ದೃಷ್ಟಿಯಿಂದಲೂ ಅಪರಾಧ ಎಂಬ ಅರಿವೂ ಇದೆ. ಆದರೂ 'ಆತ್ಮಹತ್ಯೆ'ಯ ಬಗ್ಗೆಯೇ ಯೋಚಿಸುತ್ತಿದ್ದೇನೆ! ಅನುಮಾನ ಬೇಡ. ದಿನಂಪ್ರತಿ ಪತ್ರಿಗಳಲ್ಲಿ ಮತ್ತು ವಾರ್ತಾ ವಾಹಿನಿಗಳಲ್ಲಿ ಆತ್ಮಹತ್ಯೆಯ ವರದಿಗಳನ್ನು ನೋಡಿ, ಕೇಳಿ, ಓದಿ ಬೇಸರ ಮೂಡಿದೆ. ರೈತರು ತಾವು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗಲಿಲ್ಲ ಎಂಬ ಕಾರಣಕ್ಕೆ ಕೀಟನಾಶಕ ಸೇವಿಸಿಯೋ ಅಥವಾ ನೇಣು ಬಿಗಿದುಕೊಂಡೋ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ವಿದ್ಯಾರ್ಥಿಗಳು ತಮ್ಮ ನಿರೀಕ್ಷೆಗೆ ತಕ್ಕಂತೆ ಪರೀಕ್ಷೆಯಲ್ಲಿ ಅಂಕ ಬರಲಿಲ್ಲ ಅಂತಲೋ ಅಥವಾ ರ್ಯಾಂಕ್ ತಪ್ಪಿಹೋಯಿತು ಅಂತಲೋ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇನ್ನು ಪ್ರೇಮಿಗಳ ಆತ್ಮಹತ್ಯೆಯ ಬಗ್ಗೆ ಬರೆದರೆ ಜಾಗ ಹಾಳು, ಹೇಳಿದರೆ ಬಾಯಿ ಹಾಳು. ಅವಳು ಬೈದಳು, ಅವನು ಕೈಕೊಟ್ಟ ಹೀಗೆ ನಾನಾ ಕಾರಣ ಒಡ್ಡಿ ಪ್ರೇಮಿಗಳು ಆತ್ಮಹತ್ಯೆ ಮಾ...

"ಮತಾಂತರ - ಭಯೋತ್ಪಾದನೆ – ಕೋಮುವಾದ"

(ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಡಿಸೆಂಬರ್ ೨೮, ೨೦೦೮ರಂದು ’ಜೈಕನ್ನಡಮ್ಮ’ ವಾರಪತ್ರಿಕೆಯ ದಶಮಾನೋತ್ಸವ ಸಮಾರಂಭ ನಡೆಯಿತು. ಅಂದು ’ಭಯೋತ್ಪಾದನೆ, ಮತಾಂತರ ಮತ್ತು ಕೋಮುವಾದ’ ವಿಷಯದ ಬಗ್ಗೆ ನಾನು ಮಂಡಿಸಿದ ವಿಚಾರಗಳು.) ಸಭಾಧ್ಯಕ್ಷರೆ, ವೇದಿಕೆಯಲ್ಲಿರುವ ಸಂಪನ್ಮೂಲ ವ್ಯಕ್ತಿಗಳೇ ಹಾಗೂ ನೆರೆದಿರುವ ಎಲ್ಲ ಸಹೃದಯರೆ, ಇಂದು ನನಗೆ ಪೂರಕ ಮಾಹಿತಿಗಳನ್ನಾಡಲು ಸೂಚಿಸಿರುವ ವಿಷಯ ಭಯೋತ್ಪಾದನೆ - ಕೋಮುವಾದ - ಮತಾಂತರ. ಬಹುಷಃ ಈ ಮೂರು ವಿಚಾರಗಳು ನಮ್ಮ ದೇಶವನ್ನು ತೀವ್ರವಾಗಿ ಕಾಡುತ್ತಿರುವ ಸಮಸ್ಯೆಗಳು ಅನ್ನುವುದನ್ನು ಎಲ್ಲರೂ - ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ - ಒಪ್ಪುತ್ತಾರೆ ಎಂದು ನಂಬಿದ್ದೇನೆ. ಹಾಗಾಗಿ ಈ ವಿಚಾರಗಳ ಬಗ್ಗೆ ಲಘುವಾಗಿ ಮಾತನಾಡುವುದು ಸಾಧ್ಯವಾಗದು. ಆದರೂ ನನಗೆ ನೀಡಿರುವ ಸಮಯದ ಪರಿಮಿತಿಯಲ್ಲಿ ಈ ವಿಚಾರಗಳ ಬಗ್ಗೆ ನನ್ನ ಅಭಿಪ್ರಾಯವನ್ನು ಮಂಡಿಸುವ ಪ್ರಯತ್ನ ಮಾಡುತ್ತೇನೆ. ಭಯೋತ್ಪಾದನೆ ಎಂಬ ಪದದ ಅರ್ಥ ಮೇಲ್ನೋಟಕ್ಕೆ ಬಹಳ ಸರಳವಾಗಿದೆ. ಭಯದ ಉತ್ಪಾದನೆ, ಯಾರು ಇನ್ನೊಬ್ಬರ ಮನಸ್ಸಿನಲ್ಲಿ ತನ್ನ ಕೃತ್ಯಗಳಿಂದ ಭೀತಿಯನ್ನು ಮೂಡಿಸುತ್ತಾನೋ ಅವನನ್ನು ಭಯೋತ್ಪಾದಕ ಅನ್ನಬಹುದು ಹಾಗೂ ಆ ಪ್ರಕ್ರಿಯೆಯನ್ನು ಭಯೋತ್ಪಾದನೆ ಎಂದು ಕರೆಯಬಹುದು. ಇದರರ್ಥ ಬ್ರಿಟಿಷ್ ಅಧಿಕಾರಿ ಜನರಲ್ ಡಯರ್ ಭಾರತೀಯರ ಪಾಲಿಗೆ ಭಯೋತ್ಪಾದಕನಾದರೆ ಭಾರತೀಯ ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ಪಾಲಿಗೆ ಭಯೋತ್ಪಾದಕರಾಗಿ ಕಾಣಬಹುದು! ...

ಒಂದು ಖಾಸಗಿ ಪತ್ರ

ಅರವಿಂದ ಚೊಕ್ಕಾಡಿಯವರು ಮೂಡುಬಿದಿರೆಯಲ್ಲಿ ವಾಸಿಸುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸಾಂಸ್ಕೃತಿಕ ರಾಜಧಾನಿಯಂತಿರುವ ಮೂಡುಬಿದಿರೆಯಲ್ಲಿ ಇದ್ದುಕೊಂಡು ಇವರಷ್ಟು ಬರೆಯುತ್ತಿರುವವರು ಬಹುಷಃ ಮತ್ತಾರೂ ಇರಲಿಕ್ಕಿಲ್ಲ. ಚೊಕ್ಕಾಡಿಯವರು ನನ್ನಂತಹ ಸಾಮಾನ್ಯ ಓದುಗನೊಬ್ಬ ಒಂದು ವಾರಕ್ಕೆ ಓದಬಹುದಾದಷ್ಟನ್ನು ಒಂದು ವಾರದಲ್ಲಿ ತಾವು ಖುದ್ದು ಬರೆಯುತ್ತಾರೆ. ಅವರ ಓದಿನ ಮತ್ತು ಅರಿವಿನ ವ್ಯಾಪ್ತಿ ಅಷ್ಟಿದೆ. ಅದಿರಲಿ, ಈ ಬರಹದ ವಿಷಯ ಬೇರೆಯೇ ಇದೆ. ಪ್ರಜಾವಾಣಿ ಪತ್ರಿಕೆ ಕನ್ನಡ ಕರಾವಳಿಯಲ್ಲಿ ಸುಮಾರು ಹತ್ತು ವರ್ಷಗಳ ಹಿಂದೆಯೇ ತನ್ನ ಆವೃತ್ತಿಯನ್ನು ಆರಂಭಿಸಿದೆ. ೧೯೪೮ರಲ್ಲೇ ಆರಂಭವಾದ ಪ್ರಜಾವಾಣಿ ಕರಾವಳಿಯಲ್ಲಿ ಸ್ವತಂತ್ರ ಆವೃತ್ತಿಯನ್ನು ಆರಂಭಿಸಿದ್ದು ಸ್ವಲ್ಪ ತಡವಾಯಿತು ಅಂತಲೇ ಹೇಳಬಹುದು. ಹಾಗೆ ತಡವಾಗಿಯಾದರೂ ತನ್ನ ಆವೃತ್ತಿಯನ್ನು ಕರಾವಳಿಯಲ್ಲಿ ಆರಂಭಿಸಿದ ಪ್ರಜಾವಾಣಿ ತನ್ನ ಓದುಗರಿಗೆ ಕಳೆದ ಒಂದೂವರೆ ವರ್ಷಗಳಿಂದ ಕರಾವಳಿಯ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆಂದೇ ಮೀಸಲಾದ ’ಕರಾವಳಿ’ ಎಂಬ ಸುದ್ದಿ ಪುರವಣಿಯೊಂದ ವಾರದಲ್ಲಿ ಆರು ದಿನ ಕೊಡುತ್ತಿದೆ. ನಾಲ್ಕು ಪುಟದ ಈ ಪುರವಣಿಯಲ್ಲಿ ಕಡಲ ತಡಿಯ ಸಮೃದ್ಧ ಸುದ್ದಿ, ಸುದ್ದಿ ವಿಶ್ಲೇಷಣೆ ಇರುತ್ತದೆ. ಒಟ್ಟಿನಲ್ಲಿ ಓದಲು ಖುಷಿಕೊಡುವ ದೈನಿಕ ಪುರವಣಿ ಇದು. ಇದೇ ಪುರವಣಿಯಲ್ಲಿ ಪ್ರತಿ ಬುಧವಾರ ಅರವಿಂದ ಚೊಕ್ಕಾಡಿಯವರು ’ತೀರದ ತಲ್ಲಣ’ ಎಂಬ ಅಂಕಣವೊಂದನ್ನು ಕಳೆದೊಂದು...

ಬಿಜೆಪಿ-ಕಾಂಗ್ರೆಸ್ ಜುಗಲ್‌ಬಂದಿ?!

ಭಾರತದ ರಾಜಕಾರಣಿಗಳೆಂದರೆ ಜಗತ್ತಿನ ಶ್ರೇಷ್ಠ ಜಾದೂಗಾರರಿದ್ದಂತೆ. ಅವರ ಮುಂದೆ ಹೌದಿನಿ ಜಾದೂಗಾರರೂ ನಾಚಬೇಕು ಅಂಥ ಪ್ರತಿಭೆ ನಮ್ಮ ರಾಜಕಾರಣಿಗಳಿಗಿದೆ. ರಾಜಕಾರಣಿಗಳು ನಿನ್ನೆ ಒಂದು ಹೇಳಿಕೆ ಕೊಡುತ್ತಾರೆ, ಇವತ್ತು ಹಾಗೆ ಹೇಳಿಯೇ ಇಲ್ಲ ಎಂದು ರಾಗ ತೆಗೆಯುತ್ತಾರೆ. ಜನರನ್ನು ನಂಬಿಸುತ್ತಾರೆ. ಜನರಿಗೆ ಹಣ-ಹೆಂಡ ಹಂಚುತ್ತಾರೆ. ಆದರೂ ವೇದಿಕೆಗಳಲ್ಲಿ ಮರ್ಯಾದಾ ಪುರುಷೋತ್ತಮರಂತೆ ಕುಳಿತುಕೊಳ್ಳುತ್ತಾರೆ. ಜನ ಕೂಡ ಅವರನ್ನು ನಂಬುತ್ತಾರೆ. ತಾವೇ ಕೋಮುಗಲಭೆಗಳಿಗೆ ಪ್ರಚೋದನೆ ನೀಡುತ್ತಾರೆ. ನಾಲ್ಕು ಜನ ಪ್ರಾಣ ಕಳೆದುಕೊಂಡಾಗ ಇದೇ ರಾಜಕಾರಣಿಗಳು ಶಾಂತಿಸಭೆ ನಡೆಸುತ್ತಾರೆ. ಸಮಯ ಸಿಕ್ಕಾಗೆಲ್ಲ ಅದೇನೋ ತತ್ವ, ಸಿದ್ಧಾಂತ ಎಂಬ ಅರ್ಥವಾಗದ ವಿಚಾರಗಳ ಬಗ್ಗೆ ಬಹಳ ಪ್ರಬುದ್ಧವಾಗಿ ಮಾತನಾಡುತ್ತಾರೆ. ಇವತ್ತು ಕಾಂಗ್ರೆಸ್ಸಿಗೆ ಬೆಂಬಲ ಕೊಟ್ಟವರು ನಾಳೆ ಬಿಜೆಪಿಯ ಜತೆ ಫೋಟೋ ತೆಗೆಸಿಕೊಳ್ಳುತ್ತಾರೆ. ಯಾಕೆ ಹೀಗೆ ಅಂತ ಕೇಳಿದರೆ ಭಯೋತ್ಪಾದನೆಯನ್ನು ಹತ್ತಿಕ್ಕಲು ಬಿಜೆಪಿಯ ಜತೆ ಸೇರಿದ್ದೇವೆ ಎಂದು ಹೇಳುತ್ತಾರೆ. ನಾಳೆ ಮತ್ತೆ ಕಾಂಗ್ರೆಸ್ಸಿನ ಜತೆ ಮಂಚವೇರುತ್ತಾರೆ. ಕಾರಣ ಕೇಳಿದರೆ ಕೋಮುವಾದಿ ಶಕ್ತಿಗಳನ್ನು ದೂರವಿಡಲು ಹೀಗೆ ಮಾಡಿದ್ದೇವೆ ಎಂದು ಜನರ ತಲೆಗೆ ಎಣ್ಣೆ ಸವರುತ್ತಾರೆ. ಇವತ್ತು ಬಿಜೆಪಿಯಲ್ಲಿದ್ದು ನಾಳೆ ಕಾಂಗ್ರೆಸ್ಸಿಗೆ ಸೇರಬೇಕಾಗಿರುವ ರಾಜಕಾರಣಿಗಳು ಬಿಜೆಪಿಯ ಕೋಮುವಾದಿ ಅಜೆಂಡಾದಿಂದಾಗಿ ದೇಶ ದುರ್ಬಲವಾಗುತ್ತಿದೆ. ಹಾಗಾಗಿ ಜಾತ್ಯಾತೀತ ಶಕ್ತಿಗಳನ...

“ಮಡಿಕ್ಕಳಿ ಸಾರ್!”

ಒಂದು ತಿಂಗಳಿಗೂ ಮಿಕ್ಕಿ ಮಾಡಿದ ಕೆಲಸವೊಂದು ಅಂತಿಮ ಹಂತಕ್ಕೆ ಬಂದಿದೆ. ಅದರ ಕೆಲಸದ ನಿಮಿತ್ತ ಮೊನ್ನೆ ಬೆಂಗಳೂರಿಗೆ ಹೋಗಿದ್ದೆ. ಮೂರು ದಿನ ಬೆಂಗಳೂರಲ್ಲಿದ್ದು ಮೊನ್ನೆ ಮಂಗಳವಾರ ಧರ್ಮಸ್ಥಳಕ್ಕೆ ಹೋಗುವ ಬಸ್ ಹತ್ತಿದೆ. ಬಸ್ ತನ್ನ ಪಯಣ ಆರಂಭಿಸಿತು. ಇನ್ನೂ ಬೆಂಗಳೂರನ್ನು ಬಸ್ಸು ಬಿಟ್ಟಿರಲಿಲ್ಲ. ಬಿಸಿಲು ತೀವ್ರವಾಗಿದ್ದ ಕಾರಣ ಬಾಯಾರಿಕೆ ಜೋರಾಗಿತ್ತು. ಬಸ್ಸು ಅದ್ಯಾವುದೋ ಸಿಗ್ನಲ್ಲಿನ ಬಳಿ ಬಂದು ನಿಂತಿತು. ಬಸ್ ನಿಂತ ಕೂಡಲೇ ಒಂದಿಷ್ಟು ಮಂದಿ ಹುಡುಗರು "ಮಜ್ಗೆ ಸಾರ್ ಮಜ್ಗೆ, ತಂಪು ಮಜ್ಗೆ" ಅಂತ ಕೂಗುತ್ತಾ ತಂಪಾದ ನಂದಿನಿ ಮಜ್ಜಿಗೆ ಪ್ಯಾಕೆಟ್ ಮಾರಲು ಬಸ್ಸನ್ನೇರಿದರು. ಅವರೆಲ್ಲರೂ ಹತ್ತರಿಂದ ಹದಿನಾಲ್ಕರ ನಡುವಿನ ವಯಸ್ಸಿನವರು. ನನಗೂ ಬಾಯಾರಿಕೆ ತೀವ್ರವಾಗಿದ್ದ ಕಾರಣ ಒಬ್ಬನನ್ನು ಕರೆದು "ಒಂದು ಪ್ಯಾಕ್ ಮಜ್ಜಿಗೆಗೆ ಎಷ್ಟು" ಅಂತ ಕೇಳಿದೆ. "ಏಳ್ರುಪಾಯ್ ಸಾರ್" ಅಂದ. "ಸರಿ, ಒಂದು ಪ್ಯಾಕ್ ಕೊಡು" ಅಂದೆ. ಒಂದು ಪ್ಯಾಕ್ ಮಜ್ಜಿಗೆಯನ್ನು ಅವನಿಂದ ಇಸಿದುಕೊಂಡು ಅವನಿಗೆ ಹತ್ತು ರೂಪಾಯಿ ನೋಟು ಕೊಟ್ಟೆ. ಆ ಹುಡುಗ "ಚಿಲ್ರೆ ಕೊಡಿ ಸಾರ್" ಎಂದ. ನನ್ನ ಬಳಿ ಏಳು ರೂಪಾಯಿ ಚಿಲ್ಲರೆ ಇರಲಿಲ್ಲ. "ಚಿಲ್ರೆ ಇಲ್ಲಪ್ಪಾ, ನೀನೇ ಕೊಡು" ಎಂದೆ. ಊಹೂಂ, ಆ ಹುಡುಗ ಎಷ್ಟೇ ತಡಕಾಡಿದರೂ ಅವನಿಗೆ ನನಗೆ ಕೊಡಲು ಬೇಕಾದ ಮೂರು ರೂಪಾಯಿ ಚಿಲ್ಲರೆ ಸಿಗಲಿಲ್ಲ. "ಏನ್ಮಾಡ್ಲಿ ಸಾರ್? ಚಿ...

Come, fall in love!

“We will not allow the youth to celebrate the Valentine’s Day this time” shouted an orthodox when I was having a discourse with him on the nature of Indian culture and its ethos. “But why? Who are you, after all, to curb the happiness of a large chunk of the community? What right do you have to stop the youth from falling in love?” I questioned him. Well, I got some expected answers to my question. “We are not against loving. But we do not allow celebrating Valentine’s Day as it is an alien culture. We would have rightly allowed celebrating the day had it been a part of Indian culture. Every Indian has to follow what Indian culture cherishes” he explained with a proud voice. I came back understanding that there was no use in having a discourse with the person. As we all know, youth – especially those who have fallen in love – celebrate Valentine’s Day on February 14 every year, throughout the world, except in some of the fundamental Islamic states. India, too, welcomed this fest with a...